ಅಕಾಲಿಕ ಮಳೆಯಿಂದ ಬೆಳೆ ನಷ್ಟ ಹಾನಿಯಾದ ಪ್ರದೇಶಗಳಿಗೆ ಕಂದಾಯ ಸಚಿವ ಆರ್ ಅಶೋಕ್ ಭೇಟಿ.
ಜಿಲ್ಲೆಯ ತುಮಕೂರು ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿದ ಅಕಾಲಿಕ ಮಳೆಯಿಂದ ಬೆಳೆ ಹಾನಿಯಾದ ಮಿಗಲ್ ತಾಲೂಕಿನ ಕೆಲ ಪ್ರದೇಶಗಳಿಗೆ ಬುಧವಾರ ಸಂಜೆ ಕಂದಾಯ ಸಚಿವ ಆರ್ ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಸ್ಥಳದಲ್ಲಿದ್ದ ರೈತರು ವರ್ಷವಿಡಿ ಬೆಳೆದ ಬೆಳೆ ಹಾಳಾಗಿದೆ ಹಾಕಿದ ಶ್ರಮ ಮಣ್ಣುಪಾಲಾಗಿದೆ ಹೆಚ್ಚು ಪರಿಹಾರ ನೀಡುವಂತೆ ಸಚಿವರಿಗೆ ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಹೆಚ್ಚು ಪರಿಹಾರ ನೀಡುವ ಬಗ್ಗೆ ಸರ್ಕಾರದ ಜೊತೆ ಚರ್ಚಿಸಿ ಬೇಡಿಕೆ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.
ಪರಿಹಾರಕ್ಕಾಗಿ ಕೇಂದ್ರಕ್ಕೂ ಮನವಿ ಮಾಡಲಾಗುವುದು ಈಗ ಎಲ್ಲ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 679 ಕೋಟಿ ರೂಪಾಯಿ ಹಣವನ್ನು ಮಳೆಯಿಂದ ಹಾನಿಗೊಳಗಾದ ತಕ್ಷಣವೇ ಪರಿಹಾರ ಒದಗಿಸಲು ಸೂಚನೆ ನೀಡಲಾಗಿದೆ ಹಾನಿಗೆ ಸಂಬಂಧಿಸಿದಂತೆ ಮೊದಲ ಮತ್ತು ಎರಡನೇ ಹಂತದಲ್ಲಿ ಸೇರಿ 150 ಕೋಟಿ ರೂಪಾಯಿ ಪರಿಹಾರವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಕೇಂದ್ರ ಸರ್ಕಾರಕ್ಕೂ ಪರಿಹಾರ ನೀಡುವಂತೆ ಮನವಿ ಮಾಡಲಾಗುವುದು ಎಂದು ಸಚಿವರಾದ ಆರ್ ಅಶೋಕ್ ತಿಳಿಸಿದರು.
ಸಂದರ್ಭದಲ್ಲಿ ತುಮಕೂರು ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್, ಜಿಲ್ಲಾ ಪಂಚಾಯಿತಿ ಸಿಇಒ ವಿದ್ಯಾಕುಮಾರಿ, ಅಸಿಸ್ಟೆಂಟ್ ಕಮಿಷನರ್ ಅಜಯ್ ,ತಾಸಿಲ್ದಾರ್ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳು ಹಾಜರಿದ್ದರು.