ಮತದಾನ ಜಾಗೃತಿ ಮೂಡಿಸುವಲ್ಲಿ ಪತ್ರಕರ್ತರ ಪಾತ್ರ : ಒಂದು ದಿನದ ಕಾರ್ಯಗಾರ

ಮತದಾನ ಜಾಗೃತಿ ಮೂಡಿಸುವಲ್ಲಿ ಪತ್ರಕರ್ತರ ಪಾತ್ರ : ಒಂದು ದಿನದ ಕಾರ್ಯಗಾರ

 

ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸ್ವೀಪ್ ಸಮಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ತುಮಕೂರು ಜಿಲ್ಲಾ ಸಂಘದ ಸಹಯೋಗದೊಂದಿಗೆ ಒಂದು ದಿನದ ಮತದಾರರ ಜಾಗೃತಿಯಲ್ಲಿ ಪತ್ರಕರ್ತರ ಪಾತ್ರ ಕುರಿತು ಕಾರ್ಯಗಾರವನ್ನು ದಿನಾಂಕ 12/04/23 ಬುಧವಾರ  ಬೆಳಿಗ್ಗೆ 10.30ಕ್ಕೆ ಸರಿಯಾಗಿ ತುಮಕೂರು ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಕಾರ್ಯಗಾರವನ್ನು ಏರ್ಪಡಿಸಲಾಗಿದೆ.

 

 

 

 

 

 

 

 

 

 

 

 

 

 

 

 

 

 

 

2023ರ ಕರ್ನಾಟಕ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯು ಮೇ 10ರಂದು ನಡೆಯುತ್ತಿದ್ದು ಇದರ ಪ್ರಯುಕ್ತ ಚುನಾವಣೆಯ ತಯಾರಿ ಮಾದರಿ, ನೀತಿ ಸಂಹಿತೆ, ಸ್ವೀಪ್ ಸಮಿತಿಯ ಕಾರ್ಯಕ್ರಮದ ಅನುಷ್ಠಾನ ಹಾಗೂ ಮತದಾರರ ಜಾಗೃತಿಯಲ್ಲಿ ಪತ್ರಕರ್ತರ ಪಾತ್ರ ಕುರಿತು ಈ ಕಾರ್ಯಗಾರದಲ್ಲಿ ತಿಳಿಸಲಾಗುವುದೆಂದು ಕೆ.ಯು.ಡಬ್ಲ್ಯೂ.ಜೆ. ಸಂಘದ ಜಿಲ್ಲಾಧ್ಯಕ್ಷರಾದ ಚಿ.ನಿ.ಪುರುಷೋತ್ತಮ್‌ ರವರು ತಿಳಿಸಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

2023ರ ವಿಧಾನಸಭೆಯ ಚುನಾವಣೆಯ ಪ್ರಯುಕ್ತ ಈಗಾಗಲೇ ತುಮಕೂರು ಜಿಲ್ಲಾಡಳಿತ ಸಜ್ಜಾಗಿದೆ. ಈ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲೆಯ ಎಲ್ಲ ತಾಲೂಕಿನ ಪತ್ರಕರ್ತರು ಕಡ್ಡಾಯವಾಗಿ ಪಾಲ್ಗೊಳ್ಳಬೇಕೆಂದು ಹಾಗೂ ಈ ಕಾರ್ಯಗಾರದಲ್ಲಿ ಭಾಗವಹಿಸುವ ಪತ್ರಕರ್ತರಿಗೆ ಜಿಲ್ಲಾಡಳಿತ ವತಿಯಿಂದ ಪ್ರಮಾಣ ಪತ್ರವನ್ನು ನೀಡಲಾಗುವುದು ಎಂದು ಕೆ.ಯು. ಡಬ್ಲ್ಯು. ಜೆ. ನ ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ್ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಇ.ರಘುರಾಮ್ ರವರು ತಿಳಿಸಿದರು.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version