ತುಮಕೂರು
ಅಕ್ರಮ ಗಣಿಗಾರಿಕೆ ವಿಷಯಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಕುರಿತಂತೆ ಮಂಡ್ಯ ಸಂಸದರಾದ ಸುಮಲತಾರವರ ಅಕ್ರಮ ಗಣಿಗಾರಿಕೆ ವಿರುದ್ಧ ಸಮರ ಸಾರಿರುವ ಹಿನ್ನೆಲೆಯಲ್ಲಿ ಕೆಲವು ರಾಜಕೀಯ ಮುಖಂಡರು ಅವರ ತೇಜೋವಧೆ ಮಾಡುವ ಮೂಲಕ ಅವರ ಹೋರಾಟದ ದಾರಿಯನ್ನು ದಿಕ್ಕುತಪ್ಪಿಸುವ ಮೂಲಕ ರಾಜ್ಯದ ಜನತೆಗೆ ತಪ್ಪು ಸಂದೇಶ ನೀಡುವ ಮೂಲಕ ಹೋರಾಟದ ದಿಕ್ಕು ತಪ್ಪಿಸುವ ನಡೆಗೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರಾದ ವೆಂಕಟಸ್ವಾಮಿ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತುಮಕೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರು ಸುಮಲತಾ ಅವರು ಅಕ್ರಮ ಗಣಿಗಾರಿಕೆ ವಿಚಾರವಾಗಿ ಸಮರ ಸಾರಿದ ಹಿನ್ನೆಲೆಯಲ್ಲಿ ಇದರ ವಿರುದ್ಧ ಅವರ ಹೋರಾಟ ನಿಜಕ್ಕೂ ಶ್ಲಾಘನೀಯ ವಾಗಿದ್ದು.
ಇನ್ನು ಮಂಡ್ಯ ಜಿಲ್ಲೆಯಲ್ಲಿ ರಾತ್ರಿ ಮ ಗಣಿಗಾರಿಕೆ ನಡೆಯುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಷಯ ಆದರೆ ಇದರಲ್ಲಿ ಯಾವುದೇ ಅನುಮಾನವಿಲ್ಲ ಆದರೆ ಒಬ್ಬ ಸಂಸದರು ಎಂದು ಯೋಚನೆ ಮಾಡದ ಅವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿರುವುದು ನಿಜಕ್ಕೂ ಶೋಭೆಯಲ್ಲ ಒಬ್ಬ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಅವರ ಜವಾಬ್ದಾರಿಯನ್ನು ಮರೆತಂತಿದೆ ಆದ್ದರಿಂದ ಅಕ್ರಮ ಗಣಿಗಾರಿಕೆ ವಿಷಯಕ್ಕೆ ಸಂಬಂಧಿಸಿದಂತೆ ಉನ್ನತಮಟ್ಟದ ತನಿಖೆ ಮಾಡುವ ಮೂಲಕ ಅಕ್ರಮ ಗಣಿಗಾರಿಕೆಗೆ ಅಂಕುಶ ಹಾಕಬೇಕಾಗಿದೆ ಎಂದರು
ಆದರೆ ಅವರ ಹೋರಾಟದ ದಿಕ್ಕನ್ನು ದಾರಿತಪ್ಪಿಸುವ ದೊಡ್ಡ ಹುನ್ನಾರ ನಡೆಯುತ್ತಿದೆ ಆದ್ದರಿಂದ ರಾಜ್ಯದ ಎಲ್ಲ ರಾಜಕೀಯ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸುಮಲತಾರ ಅಂಬರೀಶ್ ರವರ ಬೆಂಬಲಕ್ಕೆ ನಿಲ್ಲುವ ಮೂಲಕ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಬೇಕಾಗಿದೆ ಆದ್ದರಿಂದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಅವರಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ
ಇದೆ ತಿಂಗಳ 17ರಂದು ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಮಾಡಿ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಇನ್ನು ಪತ್ರಿಕಾಗೋಷ್ಠಿಯಲ್ಲಿ RPI ಪಕ್ಷದ ಉಪಾಧ್ಯಕ್ಷರಾದ ಬಸಪ್ಪ ಜಿಲ್ಲಾಧ್ಯಕ್ಷರಾದ ರಾಮಯ್ಯ ಭವಾನಿ ಪ್ರಸಾದ್ ಬಸವರಾಜು ಚೇತನ ಲೋಕೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು