ತುಮಕೂರು ತಾಲೂಕಿನ ಊರುಕೆರೆ ಗ್ರಾಮದ ಪ್ರೌಢಶಾಲಾ ವಿಭಾಗಕ್ಕೆ ತುಮಕೂರು ಈಸ್ಟ್ ರೋಟರಿ ಸಂಸ್ಥೆಯ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಿಜ್ಞಾನ ಕಿಟ್ ತಯಾರಿಸಲಾಗಿದ್ದು ಇದರ ಮೂಲಕ ವಿದ್ಯಾರ್ಥಿಗಳಿಗೆ ವಿಜ್ಞಾನ ವಿಷಯಕ್ಕೆ ಸಂಬಂಧಿಸಿದ ಪರಿಕರಗಳನ್ನು ಒಳಗೊಂಡ ವಿಜ್ಞಾನ ಕಿಟ್ಟ ನ್ನು ಊರುಕೆರೆ ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷರು ಹಾಗೂ ಊರ್ಕೆರೆ ಜಿಲ್ಲಾ ಪಂಚಾಯತ್ ಕ್ಷೇತ್ರದ ಬಿಜೆಪಿ ಪಕ್ಷದ ಆಕಾಂಕ್ಷಿಯಾಗಿರುವ ಊರುಕೆರೆ ನಂಜುಂಡಪ್ಪನವರ ಮೂಲಕ ಪ್ರೌಢಶಾಲಾ ವಿಭಾಗಕ್ಕೆ ಹಸ್ತಾಂತರಿಸಲಾಯಿತು.
ಇದೇ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮುಖಂಡರಾದ ಊರುಕೆರೆ ನಂಜುಂಡಪ್ಪನವರು ಕರೋನ ಬಂದಾಗಿನಿಂದ ವಿದ್ಯಾರ್ಥಿಗಳ ಪಾಠ ಪ್ರವಚನಗಳಿಗೆ ಸಾಕಷ್ಟು ತೊಂದರೆಯಾಗಿದೆ ಸರ್ಕಾರ ಆನ್ಲೈನ್ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದ್ದರು ಕೆಲ ವಿದ್ಯಾರ್ಥಿಗಳು ತೀರ ಬಡತನದಲ್ಲಿದ್ದು ಅಂತಹ ವಿದ್ಯಾರ್ಥಿಗಳು ಮೊಬೈಲ್ ಇಲ್ಲದೆ ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಲು ಸಾಧ್ಯವಾಗುತ್ತಿಲ್ಲ ಆದಕಾರಣ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಕೂಡಲೇ ಅಂತಹ ವಿದ್ಯಾರ್ಥಿಗಳಿಗೆ ಆನ್ಲೈನ್ ಶಿಕ್ಷಣಕ್ಕೆ ಅನುಕೂಲವಾಗುವಂತೆ ಬಡತನದಲ್ಲಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಮೊಬೈಲ್ ಗಳನ್ನು ನೀಡುವುದಾಗಿ ತಿಳಿಸಿದರು ಇದರ ಮೂಲಕ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಲು ಸಹಕಾರಿಯಾಗಲಿದೆ ಎಂದರು.
ಇದೇ ಸಂದರ್ಭದಲ್ಲಿ ಶಾಲೆಯ ಉಪ ಪ್ರಾಂಶುಪಾಲರಾದ ಗುರು ಸ್ವಾಮಿ , ಸರ್ಕಾರಿ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಹುಚ್ಚಯ್ಯ, ನಿವೃತ್ತ ವಿಷಯ ಪರಿವೀಕ್ಷಕರಾದ ಸುಲಯ್ಯ ಸೇರಿದಂತೆ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿಗಳು ಹಾಜರಿದ್ದರು.