ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಮೂಲೆಗುಂಪು ಮಾಡಿದ್ದು ಪ್ರಧಾನಿ ನರೇಂದ್ರ ಮೋದಿ_ಕಾಂಗ್ರೆಸ್ ನಾಯಕ ವೀರಪ್ಪ ಮೊಯಿಲಿ ಗಂಭೀರ ಆರೋಪ

ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಮೂಲೆಗುಂಪು ಮಾಡಿದ್ದು ಪ್ರಧಾನಿ ನರೇಂದ್ರ ಮೋದಿ_ಕಾಂಗ್ರೆಸ್ ನಾಯಕ ವೀರಪ್ಪ ಮೊಯಿಲಿ ಗಂಭೀರ ಆರೋಪ.

 

 

ತುಮಕೂರು_ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ರವರನ್ನು ಮೂಲೆಗುಂಪು ಮಾಡಿದ್ದು ಪ್ರಧಾನಿ ನರೇಂದ್ರ ಮೋದಿ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ವೀರಪ್ಪ ಮೊಯ್ಲಿ ಗಂಭೀರ ಆರೋಪ ಮಾಡಿದ್ದಾರೆ.

 

 

ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸೋನಿಯಾ ಗಾಂಧಿ ರವರನ್ನ ನ್ಯಾಷನಲ್ ಹೆರಾಲ್ಡ್ ವಿಚಾರದಲ್ಲಿ ED ತನಿಖೆ ಮಾಡುತ್ತಿರುವುದನ್ನು ವಿರೋಧಿಸಿ ತುಮಕೂರು ಜಿಲ್ಲಾ ಕಾಂಗ್ರೆಸ್ ಘಟಕದ ವತಿಯಿಂದ ಪ್ರತಿಭಟನಾ ನಡೆಸಲಾಯಿತು ಇನ್ನು ಪ್ರತಿಭಟನೆಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ನ ಹಿರಿಯ ನಾಯಕಿ ಸೋನಿಯಾ ಗಾಂಧಿ ರವರನ್ನ ವಿನಾಕಾರಣ ಈಡಿ ತನಿಖೆ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದರು.

 

ಇದೆ ಸಂದರ್ಭದಲ್ಲಿ ಮಾತನಾಡಿದ ಅವರು ನ್ಯಾಷನಲ್ ಹೆರಾಲ್ಡ್ ವಿಚಾರದಲ್ಲಿ ಅಂದಿನ ಕೇಂದ್ರ ಹಣಕಾಸು ಸಚಿವರಾದ ಅರುಣ್ ಜೇಟ್ಲಿ ರವರು ಸಹ ಅಂದಿನ ತನಿಖೆಯ ಬಗ್ಗೆ ಸ್ಪಷ್ಟನೆ ನೀಡಿದ್ದು ಈ ಪ್ರಕರಣದಲ್ಲಿ ಯಾವುದೇ ಲೋಪದೋಷ ಕಂಡುಬಂದಿಲ್ಲ ಎಂದು ಹೇಳಿಕೆ ನೀಡಿದರು ಎಂದ ಅವರು ಇನ್ನು ಸತ್ತುಹೋಗಿರುವ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರನ್ನ ಸಿಲುಕಿಸುವ ಪ್ರಯತ್ನವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಆ ಮೂಲಕ ಕೇಂದ್ರ ಸರ್ಕಾರ ED ಇಲಾಖೆಯನ್ನ ಬಳಸಿಕೊಂಡು ಕಾಂಗ್ರೆಸ್ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ರವರ ವಿರುದ್ಧ ED ತನಿಖೆ ನಡೆಯುತ್ತಿರುವುದರ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದರು.

 

 

ಇನ್ನು ಗೋದ್ರಾ ಹತ್ಯಾಕಾಂಡ ನಡೆದಾಗ ಗುಜರಾತ್  ಮುಖ್ಯಮಂತ್ರಿ ಆಗಿದ್ದ ನರೇಂದ್ರ ಮೋದಿ ರವರ  ನಡೆಗೆ ಅಂದಿನ ಪ್ರಧಾನಿ ವಾಜಪೇಯಿ ರವರು ಸಹ ತೀವ್ರ ಆಕ್ರೋಶ ಹೊರ ಹಾಕಿದ್ದರು ಅಂದಿನ ಗೋದ್ರಾ ಹತ್ಯಾಕಾಂಡದಲ್ಲಿ ಸುಮಾರು 2000ಕ್ಕೂ ಹೆಚ್ಚು ಜನ ಬಲಿಯಾಗಿದ್ದರು ಅಂತಹ ಘೋರ ದುರಂತ ಅಂದಿನ ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ನಡೆದಿತ್ತು ಆದ ಕಾರಣ ಅಂದಿನ ಪ್ರಧಾನಿ ವಾಜಪೇಯಿ ರವರು ಅಂದಿನ ಉನ್ನತ ಮಟ್ಟದ ಸಭೆಯಲ್ಲಿ ಅಂದಿನ ಮುಖ್ಯಮಂತ್ರಿ ಆಗಿದ್ದ ನರೇಂದ್ರ ಮೋದಿ ರವರ ಮೇಲೆ ಬೊಟ್ಟು ಮಾಡಿ ಕಾರುಣ್ಯ ವ್ಯವಸ್ಥೆಯನ್ನು ಪಾಲಿಸುತ್ತಿಲ್ಲ ಅಧಿಕಾರವನ್ನು ದುರ್ಬಳಕೆ ಮಾಡುತ್ತಿದ್ದೀರಾ ಎಂದಿದ್ದರೂ ಅಂತಹ ಸಮಯದಲ್ಲಿ ಅವರ ರಾಜೀನಾಮೆಯನ್ನು ಅಂದಿನ ಪ್ರಧಾನಿ ವಾಜಪೇಯಿ ಪಡೆಯಲು ಮುಂದಾಗಿದ್ದರೆ ಅಂತಹ ಸಮಯದಲ್ಲಿ ಅಂದಿನ ಗೃಹ ಸಚಿವರಾಗಿದ್ದ ಲಾಲಕೃಷ್ಣ ಅಡ್ವಾಣಿ ರವರು ನರೇಂದ್ರ ಮೋದಿ ರವರ ಪರವಾಗಿ ಅಂದಿನ ಪ್ರಧಾನಿ ಬಳಿ ಮನವಿ ಮಾಡಿದ್ದರ ಪರವಾಗಿ ಇಂದು ಅವರು  ದೇಶದ  ಪ್ರಧಾನಿಯಾಗಿದ್ದಾರೆ ಆದರೆ ಅಂತಹ ಹಿರಿಯ ನಾಯಕರನ್ನೇ ಇಂದು ಪ್ರಧಾನಿ ನರೇಂದ್ರ ಮೋದಿಯವರು ಮೂಲೆಗುಂಪು ಮಾಡಿದ್ದಾರೆ ಇನ್ನು ಲಾಲ್ ಕೃಷ್ಣ ಅಡ್ವಾಣಿ ರವರ ಹಿರಿತನಕ್ಕೆ ಅವರು ಬಿಜೆಪಿ ಪಕ್ಷದಲ್ಲಿ ರಾಷ್ಟ್ರೀಯ ಅಧ್ಯಕ್ಷರು, ಪ್ರಧಾನಿ ರಾಷ್ಟ್ರಪತಿ ಸಹ ಆಗುತ್ತಿದ್ದರು ಅದಕ್ಕೂ ಸಹ ಅವಕಾಶ ನೀಡಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ರವರ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆದ್ದಾರೆ.

 

ಇನ್ನು ಪ್ರತಿಭಟನೆಯಲ್ಲಿ ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್ ರಾಮಕೃಷ್ಣಪ್ಪ, ತುಮಕೂರು ನಗರ ಮಾಜಿ ಶಾಸಕ ಡಾಕ್ಟರ್ ರಫೀಕ್ ಅಹಮದ್, ಮಾಜಿ ಸಚಿವ ಹಾಗೂ ಪಾವಗಡ ಶಾಸಕರಾದ ವೆಂಕಟರಮಣಪ್ಪ ಕಾಂಗ್ರೆಸ್ ಮುಖಂಡರಾದ ಇಕ್ಬಾಲ್ ಅಹಮದ್, ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version