ತುಮಕೂರು ಜಿಲ್ಲೆಯ ಹಿರಿಯ ಪತ್ರಕರ್ತ ಜಿ. ಇಂದ್ರಕುಮಾರ್ ನಿಧನ
ತುಮಕೂರು:ಅನಾರೋಗ್ಯದಿಂದ ಬಳಲುತ್ತಿದ್ದ ಸಂಯಕ್ತ ಕರ್ನಾಟಕ ಪತ್ರಿಕೆಯ ಜಿಲ್ಲಾ ವರದಿಗಾರ ಜಿ. ಇಂದ್ರಕುಮಾರ್ (54) ಅವರು ಮಂಗಳವಾರ ಮಧ್ಯಾಹ್ನ ನಗರದ ತಮ್ಮ ಸ್ವಗೃಹದಲ್ಲಿ ನಿಧನರಾದರು.
ಕಳೆದ ಕೆಲವು ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಪತ್ರಕರ್ತ ಜಿ. ಇಂದ್ರಕುಮಾರ್ ಅವರು ನಗರದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಇಂದ್ರಕುಮಾರ್ ರವರು ಪತ್ನಿ ಜಯಶ್ರೀ, ಪುತ್ರಿ ಶಿಂಷಾ ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಕಳೆದ 30 ವರ್ಷಗಳಿಂದ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದ ಇಂದ್ರಕುಮಾರ್ ಅವರು ನಗರದ ಹಲವು ಸ್ಥಳೀಯ ಪತ್ರಿಕೆಗಳಲ್ಲೂ ವರದಿಗಾರರಾಗಿ ಕಾರ್ಯ ನಿರ್ವಹಿಸಿದ್ದರು. ಪ್ರಸ್ತುತ ಸಂಯುಕ್ತ ಕರ್ನಾಟಕ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಪತ್ರಿಕಾ ವೃತ್ತಿ ಜತೆಗೆ ಸಾಹಿತ್ಯ ಕ್ಷೇತ್ರದಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ಇಂದ್ರಕುಮಾರ್ ಅವರು, ಹಲವು ವಿಮರ್ಶನಾತ್ಮಕ ಪುಸ್ತಕಗಲಾದ ಜಲದೀವಿಗೆ ಬಹು ಸಂಗ್ರಾಮ ಸೇರಿದಂತೆ ಹಲವು ಪುಸ್ತಕಗಳನ್ನು ಹನಿಗವನಗಳನ್ನು ಬರೆದಿದ್ದರು.
ಪತ್ರಕರ್ತ ಇಂದ್ರಕುಮಾರ್ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಪತ್ರಕರ್ತರು, ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಗೌಡ ,ತುಮಕೂರು ವಿಶ್ವವಿದ್ಯಾಲಯದ ಕುಲಪತಿಗಳು ಅದ ಎಸ್ ಸಿದ್ದೇಗೌಡ ,ಬ ಹಾ ರಮಕುಮರಿ,ಲಕ್ಷ್ಮಣ ದಾಸ್ ಸೇರಿದಂತೆ ಸಾಹಿತಿಗಳು ಮುಖಂಡರು ಮೃತರ ನಿವಾಸಕ್ಕೆ ತೆರಳಿ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು ತೀವ್ರ ಸಂತಾಪ ಸೂಚಿಸಿದರು. ಮೃತರ ನಿಧನಕ್ಕೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸೇರಿದಂತೆ ಸಾಹಿತಿಗಳು, ಸ್ನೇಹಿತರು ತೀವ್ರ ಕಂಬನಿ ಮಿಡಿದಿದ್ದಾರೆ. ಮೃತರ ಅಂತ್ಯಕ್ರಿಯೆಯು ನಗರದ ಡಿ.ಎಂ. ಪಾಳ್ಯದಲ್ಲಿರುವ ಅವರ ಜಮೀನಿನಲ್ಲಿ ಬುಧವಾರ ಬೆಳಿಗ್ಗೆ 11 ಗಂಟೆಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.