ಸಿದ್ಧಗಂಗಾ ಮಠದ ಶಿವಕುಮಾರ ಶ್ರೀಗಳ ಜಯಂತ್ಯೋತ್ಸವ ಅರ್ಥಪೂರ್ಣ ಕಾರ್ಯಕ್ರಮ _ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.

ಸಿದ್ಧಗಂಗಾ ಮಠದ ಶಿವಕುಮಾರ ಶ್ರೀಗಳ ಜಯಂತ್ಯೋತ್ಸವ ಅರ್ಥಪೂರ್ಣ ಕಾರ್ಯಕ್ರಮ _ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.

 

ತುಮಕೂರು_ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಶ್ರೀಗಳ ಅವರ ಜಯಂತ್ಯೋತ್ಸವದ ಆಚರಣೆ ಅವರ ಬದುಕಿನ ಪ್ರೇರಣೆ ಇಂದಿನ ಯುವ ಪೀಳಿಗೆಗೆ ಬಹಳ ಅತ್ಯಗತ್ಯ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.

 

 

 

ಗುರುವಾರ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಅವರು ಶುಕ್ರವಾರ ನಡೆಯಲಿರುವ ಶಿವಕುಮಾರ ಶ್ರೀಗಳ ಜಯಂತೋತ್ಸವ ಕಾರ್ಯಕ್ರಮದ ರೂಪುರೇಷೆ ಹಾಗೂ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದರು.

 

 

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತುಮಕೂರಿನ ಸಿದ್ದಗಂಗಾ ಮಠದ ವತಿಯಿಂದ ಪ್ರತಿವರ್ಷ ಶ್ರೀಮಠದ ಪರಮಪೂಜ್ಯರಾದ ಶ್ರೀ ಶ್ರಿ ಶಿವಕುಮಾರ ಮಹಾಸ್ವಾಮಿಗಳವರು ಜಯಂತ್ಯೋತ್ಸವ ಪ್ರತಿವರ್ಷ ಆಚರಣೆ ಮಾಡಲಾಗುತ್ತಿದೆ ಅದರಂತೆ ಈ ಬಾರಿಯೂ ಸಹ ಶ್ರೀಗಳ 115ನೇ ಜಯಂತೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಸಲಾಗುತ್ತದೆ ಎಂದರು.

 

 

ಶಿವಕುಮಾರ ಶ್ರೀಗಳ ಬದುಕಿನ ಪ್ರೇರಣೆ ಇಂದಿನ ಯುವಪೀಳಿಗೆಗೆ ಶ್ರೀಗಳ ವಿಚಾರಗಳನ್ನು ತಿಳಿಸುವ ಪ್ರಯತ್ನ ಈ ಕಾರ್ಯಕ್ರಮದ ಮೂಲಕ ಆಗಲಿದೆ ಇನ್ನು ನಾಳೆ ನಡೆಯುವ ಕಾರ್ಯಕ್ರಮ ಅರ್ಥಪೂರ್ಣ ಕಾರ್ಯಕ್ರಮ ವಾಗಿರಬೇಕು ಇನ್ನು ಶ್ರೀಗಳ ಪರಂಪರೆ ,ಶಿಕ್ಷಣ,ದಾಸೋಹ ಮಾಡಿಕೊಂಡು ಬಂದಿದ್ದಾರೆ ಇದು ರಾಜ್ಯ ಹಾಗೂ ದೇಶಕ್ಕೆ ಮಾದರಿಯಾಗಿದೆ ಎಂದರು.

 

 

ಶಿವಕುಮಾರ ಶ್ರೀಗಳ ಜಯಂತೋತ್ಸವ ಕಾರ್ಯಕ್ರಮಕ್ಕೆ ಪ್ರತಿವರ್ಷ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಪ್ರಮುಖ ನಾಯಕರು ಕಾರ್ಯಕ್ರಮಕ್ಕೆ ಬರುತ್ತಾರೆ ಅದರಂತೆ ಈ ವರ್ಷವೂ ಕೂಡ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ರವರು ನಾಳಿನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಮೂಲಕ ಅವರು ಅವರು ಕೂಡ ಶ್ರೀಮಠಕ್ಕೆ ಬರುವ ಅಭಿಲಾಷೆಯನ್ನು ವ್ಯಕ್ತಪಡಿಸಿದ್ದು ಅದರಂತೆ ಶ್ರೀಮಠದ ಶ್ರೀಗಳ ಆಹ್ವಾನದ ಮೇರೆಗೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದರು.

 

 

 

ಇನ್ನು ಕಾರ್ಯಕ್ರಮಕ್ಕೆ ದೊಡ್ಡ ಸಂಖ್ಯೆಯ ಭಕ್ತರು ಸೇರುವುದರಿಂದ ಕಾರ್ಯಕ್ರಮ ಚೆನ್ನಾಗಿ ಆಗುವ ಸಲುವಾಗಿ ಭೇಟಿ ನೀಡಿ ಪರಿಶೀಲನೆ ಮಾಡಿರುವುದಾಗಿ ತಿಳಿಸಿದರು.

ನಾಳೆಯ ಕಾರ್ಯಕ್ರಮದಿಂದ ರಾಜ್ಯಕ್ಕೆ ಒಳ್ಳೆಯ ಸಂದೇಶ ಸಿಗಲಿದೆ .

 

 

ಇನ್ನು ಇಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಹ ಭೇಟಿ ನೀಡಲಿದ್ದು ಅದರ ಮಾಹಿತಿ ಲಭ್ಯವಾಗಿದೆ ಎಂದು ಅವರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನ ಪಡೆದು ನಂತರ ಸಿದ್ದಗಂಗಾಶ್ರೀಗಳ ಆಶೀರ್ವಾದವನ್ನು ಪಡೆಯಲಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಅರಗ ಜ್ಞಾನೇಂದ್ರ ಸಚಿವರಾದ ಜೆ ಸಿ ಮಾಧುಸ್ವಾಮಿ, ಸಚಿವ ವಿ ಸೋಮಣ್ಣ ಸೇರಿದಂತೆ ಹಲವು ನಾಯಕರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು

 

 

ವರದಿ _ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version