ಸಿಎಂ ವಿರುದ್ಧ ಸಚಿವ ಕೆ.ಎಸ್.ಈಶ್ವರಪ್ಪರಿಂದ ರಾಜ್ಯಪಾಲರಿಗೆ ದೂರು ಹಿನ್ನೆಲೆ.ರಾಷ್ಟ್ರಪತಿ ಅಡಳಿತಕ್ಕೆ ಶಿಫಾರಸ್ಸು ಮಾಡಲು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ.

 

 

 

ಸಾಮಾಜಿಕ ಜಾಲತಾಣಗಳಲ್ಲಿ ಆಗ್ರಹಿಸಿರುವ ಸಿದ್ದರಾಮಯ್ಯ

 

ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ಹಿರಿಯ ಸಚಿವ ಕೆ.ಎಸ್.ಈಶ್ವರಪ್ಪ ಮಾಡಿರುವ ಆರೋಪ ಗಂಭೀರ ಸ್ವರೂಪದ್ದಾಗಿದ್ದು.ರಾಜ್ಯದ ಆಡಳಿತ ಕುಸಿದು ಬಿದ್ದಿರುವುಕ್ಕೆ ಸಾಕ್ಷಿಯಾಗಿದೆ.

 

ರಾಜ್ಯಪಾಲರು ತಕ್ಷಣ ಮಧ್ಯೆಪ್ರವೇಶಿಸಿ ಸಿಎಂರನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು.

 

ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಅಕ್ರಮಗಳ ಬಗ್ಗೆ ವಿರೋಧ ಪಕ್ಷದ ನಾಯಕನಾಗಿ ನಾನು ಮಾಡುತ್ತಾ ಬಂದಿರುವ ಆರೋಪಗಳಿಗೆ ಈಶ್ವರಪ್ಪ ಸಾಕ್ಷ್ಯಗಳನ್ನು ಒದಗಿಸಿದ್ದಾರೆ.

 

ಅವರು ಯಾವುದೇ ಒತ್ತಡಕ್ಕೆ ಮಣಿಯದೆ ಮಾತಿಗೆ ಬದ್ದರಾಗಿ ಉಳಿಯಬೇಕು.ಈಶ್ವರಪ್ಪನವರು ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ.*

 

ರಾಜಕೀಯ ಹಿತಾಸಕ್ತಿಗಿಂತ ರಾಜ್ಯದ ಹಿತಾಸಕ್ತಿ ಮುಖ್ಯ ಎಂದು ಸಾರಿದ್ದಾರೆ. ಇದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ. ಭ್ರಷ್ಟಾಚಾರ, ಸ್ವಜನಪಕ್ಷಪಾತ, ಅಕ್ರಮಗಳು ಕೇವಲ ಗ್ರಾಮೀಣ ಅಭಿವೃದ್ದಿ ಇಲಾಖೆಯೊಂದಕ್ಕೆ ಸಂಬಂಧಿಸಿದ್ದಲ್ಲ.

 

ಇದು ಸರ್ಕಾರದ ಪ್ರತಿಯೊಂದು ಇಲಾಖೆಯೊಳಗಿನ ಕರ್ಮಕಾಂಡ. ಬಿಜೆಪಿ ವರಿಷ್ಠರು ಈಶ್ವರಪ್ಪನವರ ಬಾಯಿಮುಚ್ಚಿಸಲು ಪ್ರಯತ್ನಿಸದೆ ಇತರ ಸಚಿವರೂ ಮುಕ್ತವಾಗಿ ಅಭಿಪ್ರಾಯ ಹಂಚಿಕೊಳ್ಳಲು ಅವಕಾಶ ನೀಡಬೇಕು.ಟ್ವೀಟ್ಟರ್ ಹಾಗೂ ಫೇಸ್‌ಬುಕ್‌ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version