ಸಿದ್ದರಾಮಯ್ಯ ಇಲ್ಲ ಎಂದರೆ ಕಾಂಗ್ರೆಸ್ ಪಕ್ಷ ಇರಲ್ಲ, ಕಾಂಗ್ರೆಸ್ ಪಕ್ಷಕ್ಕೆ ಸಿದ್ದು ಅನಿವಾರ್ಯ_ಮಾಜಿ ಶಾಸಕ ಕೆ ಎನ್ ರಾಜಣ್ಣ.

ಸಿದ್ದರಾಮಯ್ಯ ಇಲ್ಲ ಎಂದರೆ ಕಾಂಗ್ರೆಸ್ ಪಕ್ಷ ಇರಲ್ಲ, ಕಾಂಗ್ರೆಸ್ ಪಕ್ಷಕ್ಕೆ ಸಿದ್ದು ಅನಿವಾರ್ಯ_ಮಾಜಿ ಶಾಸಕ ಕೆ ಎನ್ ರಾಜಣ್ಣ.

ತುಮಕೂರು_ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಸ್ ಲೀಡರ್, ಅವರ ಅನಿವಾರ್ಯತೆ ಕಾಂಗ್ರೆಸ್ ಪಕ್ಷಕ್ಕೆ ಇದೆ ಇನ್ನು ಕಾಂಗ್ರೆಸ್ ಪಕ್ಷದಲ್ಲ್ಲಿ ಸಿದ್ದರಾಮಯ್ಯ ಇಲ್ಲ ಎಂದರೆ ಕಾಂಗ್ರೆಸ್ ಪಕ್ಷ ಇರಲ್ಲ ಎಂದು ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಕೆ ಎನ್ ರಾಜಣ್ಣ ಆಚರಿ ಹೇಳಿಕೆಯನ್ನು ನೀಡಿದ್ದಾರೆ .

 

 

 

ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದಲ್ಲಿ ಸಾಮೂಹಿಕ ನಾಯಕತ್ವ ಇದೆ ಅದರಂತೆ ಕಾಂಗ್ರೆಸ್ ಪಕ್ಷದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಪ್ರಮುಖ ನಾಯಕರು ಎಂದು ಮಾಜಿ ಶಾಸಕ ಕೆ ಎನ್ ರಾಜಣ್ಣ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದಾರೆ.

 

 

ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ ಅನಿವಾರ್ಯತೆ ಹೆಚ್ಚಿದೆ ರಾಜ್ಯದಲ್ಲಿ ಯಡಿಯೂರಪ್ಪ ಇಲ್ಲ ಎಂದರೆ ಬಿಜೆಪಿ ಇರಲ್ಲ, ಮಾಜಿ ಪ್ರಧಾನಿ ದೇವೇಗೌಡರವರು ಇಲ್ಲ ಎಂದರೆ ಜೆಡಿಎಸ್ ಇರಲ್ಲ ಅದರಂತೆ ರಾಜ್ಯದಲ್ಲಿ ಸಿದ್ದರಾಮಯ್ಯ ಇಲ್ಲ ಎಂದರೆ ಕಾಂಗ್ರೆಸ್ ಪಕ್ಷ ಇರಲ್ಲ ಎಂದು ತಿಳಿಸಿದ್ದಾರೆ.

 

 

ಸಿದ್ದರಾಮಯ್ಯನವರು ಸ್ವಾಮೀಜಿಗಳಿಗೆ ಸಂಬಂಧಿಸಿದಂತೆ ನೀಡಿರುವ ಹೇಳಿಕೆಗೆ ಉತ್ತರಿಸಿದ ಅವರು ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಕೂಡ ಪ್ರಮುಖ ನಾಯಕರು ಇನ್ನೂ ಸಿದ್ದರಾಮಯ್ಯನವರ ಹೇಳಿಕೆಗೆ ಸಂಬಂಧಿಸಿದಂತೆ ಈಗಾಗಲೇ ಅವರು ಸ್ಪಷ್ಟನೆ ಕೂಡ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು ಸ್ವಾಮಿಗಳನ್ನು ದೇವರಂತೆ ನೋಡುತ್ತಾರೆ ಇನ್ನೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒಳಗೊಂಡಂತೆ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು ಸಹ ಸ್ವಾಮೀಜಿಗಳ ಬಗ್ಗೆ ಅಪಾರ ಗೌರವವಿದೆ ಇನ್ನೂ ಸ್ವಾಮೀಜಿಗಳಿಗೆ ಅಗೌರವ ತರುವ ಕೆಲಸವನ್ನು ಯಾವ ನಾಯಕರು ಮಾಡುವುದಿಲ್ಲ ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯನವರ ಹೇಳಿಕೆಗೆ ಸಂಬಂಧಿಸಿದಂತೆ  ಸಿ ಕಾಂಗ್ರೆಸ್ ನಾಯಕರು ಕೂಡ ಬೆಂಬಲಕ್ಕೆ ಇದ್ದಾರೆ ಇನ್ನು ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯನವರ ಬೆಂಬಲಕ್ಕೆ ನಿಂತಿಲ್ಲ ಎನ್ನುವುದು ಶುದ್ಧ ಸುಳ್ಳು.

 

 

ಇನ್ನು ಅವರ ಹೇಳಿಕೆಗೆ ಸಂಬಂಧಿಸಿದಂತೆ ಹಲವು ನಾಯಕರು ಅದನ್ನೇ ದೊಡ್ಡ ವಿಷಯವನ್ನಾಗಿ ಮಾಡುತ್ತಿರುವುದು ಸರಿಯಲ್ಲ ಇನ್ನೂ ಕಾಂಗ್ರೆಸ್ ಪಕ್ಷ ಗಾಂಧಿ ಹಿಂದೂವಾದಿಗಳು ಪಕ್ಷ, ಬಿಜೆಪಿ ಪಕ್ಷ ಗೂಡ್ಸೆ ಹಿಂದೂವಾದಿಗಳ ಪಕ್ಷ ಇಂದು ಬಿಜೆಪಿ ನಾಯಕರಿಗೆ ಪರೋಕ್ಷ ಟಾಂಗ್ ನೀಡಿದ್ದಾರೆ

 

 

ಹಾಗಾಗಿ ಕಾಂಗ್ರೆಸ್ ಪಕ್ಷಕ್ಕೆ ಸಿದ್ದರಾಮಯ್ಯನವರ ಅನಿವಾರ್ಯತೆ ಇದೆ ಸಿದ್ದರಾಮಯ್ಯ ಇಲ್ಲ ಎಂದರೆ ಕಾಂಗ್ರೆಸ್ ಪಕ್ಷ ಇರಲ್ಲ ಎನ್ನುವ ಮೂಲಕ ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ.

 

ವರದಿ_ ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version