ಮಹನೀಯರ ಸಿರಿಗನ್ನಡ ಕಾರ್ಯಕ್ರಮ

 

 

ದೇವನಹಳ್ಳಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ದೇವನಹಳ್ಳಿ ನಗರದಲ್ಲಿ ನಡೆದ 26 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿನ ಸವಿ ನೆನಪಿನಲ್ಲಿ ಪ್ರತಿ ತಿಂಗಳು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರು ಮತ್ತು ಇನ್ನಿತರ ಮಹನೀಯರುಗಳ ಕುರಿತು ಸಿರಿಗನ್ನಡ ಕಾರ್ಯಕ್ರಮದ ಹೆಸರಿನಲ್ಲಿ ಉಪನ್ಯಾಸ, ರಸಪ್ರಶ್ನೆ, ಪ್ರಬಂಧ ಸ್ಪರ್ಧೆ ಮತ್ತಿತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ.

ಅದರಂತೆ ದಿನಾಂಕ:04-03-2021 ರಂದು ದೇವನಹಳ್ಳಿ ನಗರದ ಕೊರಚರ ಪಾಳ್ಯದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮೊದಲ “ಸಿರಿಗನ್ನಡ” ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಲಾಯಿತು.

 

ನಿವೃತ್ತ ಪ್ರಾಂಶುಪಾಲರು ನಿಕಟಪೂರ್ವ ಸಮ್ಮೇಳನಾಧ್ಯಕ್ಷರಾಗಿದ್ದ ಶ್ರೀ ಶರಣಯ್ಯ ಹಿರೇಮಠ್ ರವರು ಕನ್ನಡದ ಮೊದಲ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಾದ ರಾಷ್ಟ್ರಕವಿ ಕುವೆಂಪು ರವರ ಬಗ್ಗೆ ಉಪನ್ಯಾಸ ನೀಡಿದರು.

ಇದೇ ಸಂದರ್ಭದಲ್ಲಿ ನಿಕಟಪೂರ್ವ ಸಮ್ಮೇಳನಾಧ್ಯಕ್ಷರಾಗಿದ್ದ ಶ್ರೀ ಶರಣಯ್ಯ ಹಿರೇಮಠ್ ಮತ್ತು ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಶಿವಕುಮಾರ್ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ 26 ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಬಿ.ಎನ್.ಕೃಷ್ಣಪ್ಪ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಆರ್.ಕೆ.ನಂಜೇಗೌಡ, ಸಮ್ಮೇಳನದ ಸಂಚಾಲಕ ಬಿ.ಕೆ.ಶಿವಪ್ಪ. ಉಪಾಧ್ಯಕ್ಷ ಜೊನ್ನಹಳ್ಳಿ ರಾಮಾಂಜಿನಪ್ಪ, ಕರವೇ ಗೌರವಾಧ್ಯಕ್ಷ ಚಂದ್ರಶೇಖರ್, ಜಿಲ್ಲಾಧ್ಯಕ್ಷ ಮುನಿರಾಜು(ಅಪ್ಪಯ್ಯಣ್ಣ) ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಶ್ರೀರಾಯ್ಯ, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆದರ್ಶ ಕುಮಾರ್,ಶಾಲೆಯ ಮುಖ್ಯ ಶಿಕ್ಷಕ ಶಿವಕುಮಾರ್,ಸಿಆರ್ ಪಿಗಳಾದ ಶಿವಪ್ರಸಾದ್, ಜಗದೀಶ್ ಸೇರಿದಂತೆ ಮತ್ತಿತರ ಶಾಲಾ ಶಿಕ್ಷಕರು ಮಕ್ಕಳು ಉಪಸ್ಥಿತರಿದ್ದರು.

 

ಗುರುಮೂರ್ತಿ ಬೂದಿಗೆರೆ

8861100990

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version