ಮಾಜಿ ನ್ಯಾಯಾಧೀಶರಿಂದ ಎಸ್ಐಟಿ ತನಿಖೆ ಮೇಲ್ವಿಚಾರಣೆ: ನಿಲುವು ತಿಳಿಸಲು ಯು.ಪಿ.ಸರಕಾರಕ್ಕೆ ಸಮಯ ನೀಡಿದ ಸುಪ್ರೀಂ

ಮಾಜಿ ನ್ಯಾಯಾಧೀಶರಿಂದ ಎಸ್ಐಟಿ ತನಿಖೆ ಮೇಲ್ವಿಚಾರಣೆ: ನಿಲುವು ತಿಳಿಸಲು ಯು.ಪಿ.ಸರಕಾರಕ್ಕೆ ಸಮಯ ನೀಡಿದ ಸುಪ್ರೀಂ

ಹೊಸದಿಲ್ಲಿ: ಬೇರೊಂದು ಹೈಕೋರ್ಟ್‌ನ ಮಾಜಿ ನ್ಯಾಯಾಧೀಶರು ರಾಜ್ಯ ಎಸ್‌ಐಟಿ ತನಿಖೆಯನ್ನು ದಿನನಿತ್ಯದ ಆಧಾರದ ಮೇಲೆ ಮೇಲ್ವಿಚಾರಣೆ ಮಾಡಬೇಕು ಎಂಬ ಸಲಹೆಯ ಕುರಿತು ತನ್ನ ನಿಲುವನ್ನು ತಿಳಿಸಲು ಉತ್ತರ ಪ್ರದೇಶ ಸರಕಾರಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ನವೆಂಬರ್ 15 ರವರೆಗೆ ಕಾಲಾವಕಾಶ ನೀಡಿದೆ.

 

ಅಕ್ಟೋಬರ್ 3 ರಂದು ಲಖಿಂಪುರ ಖೇರಿ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದರು.

 

ನನಗೆ ಸೋಮವಾರದವರೆಗೆ ಸಮಯ ಕೊಡುವರೇ? ನಾನು ಅದನ್ನು ಬಹುತೇಕ ಪೂರ್ಣಗೊಳಿಸಿದ್ದೇನೆ. ನಾವು ಏನಾದರೂ ಕೆಲಸ ಮಾಡುತ್ತಿದ್ದೇವೆ ಎಂದು ಉತ್ತರಪ್ರದೇಶ ಸರಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಹರೀಶ್ ಸಾಳ್ವೆ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ಪೀಠಕ್ಕೆ ತಿಳಿಸಿದರು.

 

ವಿಚಾರಣೆಯನ್ನು ಸೋಮವಾರಕ್ಕೆ ಪಟ್ಟಿ ಮಾಡಿದ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಹಾಗೂ ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು ಮನವಿಗೆ ಸಮ್ಮತಿಸಿತು.

 

ನವೆಂಬರ್ 8 ರಂದು ಸುಪ್ರೀಂ ಕೋರ್ಟ್ ಲಖಿಂಪುರ ಖೇರಿ ಹಿಂಸಾಚಾರ ತನಿಖೆಯ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿತು ಹಾಗೂ ಈಗ ನಡೆಯುತ್ತಿರುವ ತನಿಖೆಯಲ್ಲಿ ಸ್ವಾತಂತ್ರ್ಯ, ನಿಷ್ಪಕ್ಷಪಾತ ಮತ್ತು ನ್ಯಾಯಸಮ್ಮತತೆಯನ್ನು ತುಂಬಲು ಬೇರೆ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶರು ಇದನ್ನು ದಿನನಿತ್ಯದ ಆಧಾರದ ಮೇಲೆ ಮೇಲ್ವಿಚಾರಣೆ ಮಾಡಬೇಕು ಎಂದು ನ್ಯಾಯಾಲಯ ಸೂಚಿಸಿತ್ತು

 

ಸರಕಾರದ ಮೇಲೆ ತನಗೆ ವಿಶ್ವಾಸವಿಲ್ಲ ಎಂದ ನ್ಯಾಯಪೀಠ, ರಾಜ್ಯವು ನೇಮಿಸಿದ ಏಕಸದಸ್ಯ ನ್ಯಾಯಾಂಗ ಆಯೋಗವು ಪ್ರಕರಣದ ತನಿಖೆಯನ್ನು ಮುಂದುವರಿಸಲು ಬಯಸುವುದಿಲ್ಲ ಎಂದು ಹೇಳಿದೆ.

 

ಲಖಿಂಪುರ ಖೇರಿ ಜಿಲ್ಲೆಯ ಟಿಕೋನಿಯಾ-ಬನ್‌ಬೀರ್‌ಪುರ ರಸ್ತೆಯಲ್ಲಿ ನಡೆದ ಹಿಂಸಾಚಾರದ ಬಗ್ಗೆ ತನಿಖೆ ನಡೆಸಲು ಅಲಹಾಬಾದ್ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಜಸ್ಟಿಸ್ ಪ್ರದೀಪ್ ಕುಮಾರ್ ಶ್ರೀವಾಸ್ತವ ಅವರನ್ನು ರಾಜ್ಯ ಸರಕಾರ ಹೆಸರಿಸಿದೆ.

 

ಬೇರೆ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶರಿಂದ ತನಿಖೆಯ ಮೇಲ್ವಿಚಾರಣೆಯ ಸಲಹೆಯ ಮೇರೆಗೆ ರಾಜ್ಯ ಸರಕಾರವು ತನ್ನ ನಿಲುವನ್ನು ತಿಳಿಸುವಂತೆ ಕೇಳಿದೆ.

 

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version