ಯುವಕನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ..

ಯುವಕನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ.

 

ತುಮಕೂರು_ ಸುಮಾರು 35 ವರ್ಷದ ವ್ಯಕ್ತಿಯೊಬ್ಬ   ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ  ತುಮಕೂರು ನಗರದ ಹನುಮಂತಪುರದ ಬಳಿಯ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

 

 

ಇಂದು ಮುಂಜಾನೆ ಸಾರ್ವಜನಿಕರು ಎಂದಿನಂತೆ ರಸ್ತೆಯಲ್ಲಿ ಓಡಾಡುವ ಸಮಯದಲ್ಲಿ ಪ್ರಕರಣ ಬಯಲಿಗೆ ಬಂದಿದ್ದು ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇನ್ನು ಮೃತಪಟ್ಟ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ . ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

 

 

ವರದಿ_ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version