ತುಮಕೂರು ನಗರಕ್ಕೆ ಸುರ್ಜೇವಾಲ ಆಗಮನ ಟಿಕೆಟ್ ಆಕಾಂಕ್ಷಿಗಳ ಜೊತೆ ಚರ್ಚೆ
ತುಮಕೂರು: ನಗರಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆಗಮಿಸಿದರು. ತುಮಕೂರು ಜಿಲ್ಲಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಟಿಕೆಟ್ ಆಕಾಂಕ್ಷಿಗಳ ಸಭೆ ನಡೆಸಲು ನಿರ್ಧಾರ ಮಾಡಿದ್ದಾರೆ. 11 ವಿಧಾನಸಭಾ ಕ್ಷೇತ್ರಗಳ ಆಕಾಂಕ್ಷಿಗಳ ಸಭೆ ನಡೆಸಲಿರುವ
ಸುರ್ಜೇವಾಲರವರು ಮೊದಲ ಸುತ್ತಿನ ಮಾತುಕತೆ ಮುಗಿಸಿರುವ ಅವರು ಇಂದು ಎರಡನೇ ಹಂತದ ಸಭೆ ನಡೆಸಲಿದ್ದಾರೆ. ಸಭೆಗೂ ಮುನ್ನ ಕಾಂಗ್ರೆಸ್‌ನ ಮಾಜಿ ಶಾಸಕ ಕೆ.ಎನ್ ರಾಜಣ್ಣನವರ ಕ್ಯಾತಸಂದ್ರದಲ್ಲಿರುವ ಮನೆಗೆ ಭೇಟಿ ನೀಡಿದರು.
ಒಂದೇ ಕಾರಿನಲ್ಲಿ ಆಗಮಿಸಿದ ಸುರ್ಜೆವಾಲ, ಮಾಜಿ ಡಿಸಿಎಂ ಪರಮೇಶ್ವರ್ ಹಾಗೂ ಕೆ.ಎನ್.ರಾಜಣ್ಣರವರು. ಕಾಂಗ್ರೆಸ್ ಮಯೂರ ಜಯಕುಮಾರ್, ಶಾಸಕ ರಂಗನಾಥ್, ಜೆಡಿಎಸ್ ಉಚ್ಚಾಟಿತ ಶಾಸಕ ಎಸ್.ಆರ್ ಶ್ರೀನಿವಾಸ್. ಮಾಜಿ ವಿಧಾನ ಪರಿಷತ್ ಸದಸ್ಯ ಬೆಮೆಲ್ ಕಾಂತರಾಜ್, ಅಟ್ಟಿಕಾ ಬಾಬು ಸೇರಿದಂತೆ ಹಲವು ಮುಖಂಡರು ಸಾಥ್ ನೀಡಿದರು. ಈ ಸಂದರ್ಭದಲ್ಲಿ ಸುರ್ಜೇವಾಲ ಅವರನ್ನು ಜೆಡಿಎಸ್ ಉಚ್ಚಾಟಿತ ಶಾಸಕ ಎಸ್.ಆರ್ ಶ್ರೀನಿವಾಸ್ ಭೇಟಿ ಮಾಡಿದರು. ಇಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಶಾಸಕ ಕಿರಣ್ ಕುಮಾರ್ ಸೇರಿದಂತೆ ಹಲವು ನಾಯಕರು ಹಾಜರಿದ್ದರು.
ಕಗ್ಗಂಟಾದ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಟಿಕೆಟ್
ಇನ್ನು ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿತರ ಸಂಖ್ಯೆ ಹೆಚ್ಚಾದಂತೆ ಕಾಂಗ್ರೆಸ್ ನ ಹಿರಿಯ ಮುಖಂಡರಿಗೂ ಸಹ ತೀವ್ರ ತಲೆನೋವು ತಂದಿದ್ದು ಟಿಕೆಟ್ ಯಾರಿಗೆ ನೀಡಬೇಕು ಎನ್ನುವ ಇಕ್ಕಟ್ಟಿಗೆ ಪಕ್ಷದ ವರಿಷ್ಠರು ಹಾಗೂ ಹಿರಿಯ ಮುಖಂಡರು ಬಂದಿದ್ದು ಟಿಕೆಟ್ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ
ಇದೇ ಮೊದಲ ಬಾರಿಗೆ ಅಧಿಕೃತವಾಗಿ ಕಾಂಗ್ರೆಸ್ ನಾಯಕರೊಂದಿಗೆ ಕಾಣಿಸಿಕೊಂಡಿರುವ ಅಟ್ಟಿಕ ಬಾಬು (ಬೊಮ್ಮನಹಳ್ಳಿ ಬಾಬು) ಇನ್ನು ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಪ್ರಬಲ ಆಕಾಂಕ್ಷೆ ಎಂದೇ ಬಿಂಬಿತವಾಗಿರುವ ಆರ್ಟಿಕ ಕೋಲ್ಡ್ ಕಂಪನಿಯ ಮಾಲೀಕ ಬೊಮ್ನಳ್ಳಿ ಬಾಬುರವರು ಇದೆ ಮೊದಲ ಬಾರಿಗೆ ಕಾಂಗ್ರೆಸ್ನ ಹಿರಿಯ ನಾಯಕರಿಗೆ ಕಾಣಿಸಿಕೊಂಡಿದ್ದಾರೆ.
ಇನ್ನು ತುಮಕೂರು ನಗರಸಭಾ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದ್ದು ಹಲವರು ಕಾಂಗ್ರೆಸ್ ಪಕ್ಷದ ಟಿಕೆಟ್ಗಾಗಿ ತೀವ್ರ ಪೈಪೋಟಿ ನಡೆಸುತ್ತಿದ್ದು ಮಾಜಿ ಶಾಸಕ ರಫೀಕ್ ಅಹಮದ್, ಅತಿಕ್ ಅಹಮದ್, ಇಕ್ಬಾಲ್ ಅಹಮದ್, ಫರ್ಹನ ಬೇಗಂ, ಶಶಿ ಹುಲಿಕುಂಟೆ ಹಾಗೂ ಕೌಶಲ್ಯಾಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರಳೀಧರ ಹಾಲಪ್ಪ ಸೇರಿದಂತೆ ಹಲವರು ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ತೆರೆಮರೆಯ ಕಸರತ್ತು ನಡೆಸಿದ್ದು ಕಾಂಗ್ರೆಸ್ ಹೈಕಮಾಂಡ್ ಯಾರಿಗೆ ಮಣೆ ಹಾಕಲಿದೆ ಎಂದು ಕಾದು ನೋಡಬೇಕಿದೆ.
ಇನ್ನು ಇದೇ ಸಂದರ್ಭದಲ್ಲಿ ತುಮಕೂರಿನ ಅರ್ಬನ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಪಕ್ಷದ ಗೃಹಜೋತಿ ಹಾಗೂ ಗೃಹಲಕ್ಷ್ಮಿ ಗ್ಯಾರಂಟಿ ಕಾರ್ಯಕ್ರಮದ ಬಿತ್ತಿ ಪತ್ರಗಳನ್ನು ಸಾರ್ವಜನಿಕರಿಗೆ ಮುಟ್ಟಿಸುವ ನಿಟ್ಟಿನಲ್ಲಿ ಬಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಿ ದರು
ಇನ್ನು ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸರ್ಜೇವಾಲ, ಮಾಜಿ ಉಪಮುಖ್ಯಮಂತ್ರಿ ಡಾಕ್ಟರ್ ಜಿ ಪರಮೇಶ್ವರ್, ಎಐಸಿಸಿ ಕಾರ್ಯದರ್ಶಿ ಮಯೂರ ಜೈ ಕುಮಾರ್, ಕಾರ್ಯಧ್ಯಕ್ಷ ಸಲೀಂ ಅಹಮದ್ ,ಮಾಜಿ ಸಚಿವ ಟಿ ಬಿ ಜಯಚಂದ್ರ ,ಮಾಜಿ ಸಂಸದ ಬಿ ಎನ್, ಚಂದ್ರಪ್ಪ, ಶಾಸಕ ರಂಗನಾಥ್ ,ಮಾಜಿ ಶಾಸಕ ಕೆ ಎನ್ ರಾಜಣ್ಣ, ಲಕ್ಕಪ್ಪ ,ಕಿರಣ್ ಕುಮಾರ್ ಮುರುಳಿಧರ್ ಹಾಲಪ್ಪ ಸೇರಿದಂತೆ ಹಲವು ಮುಖಂಡರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ವರದಿ -ಮಾರುತಿ ಪ್ರಸಾದ್ ತುಮಕೂರು