ಅಂತರಸನಹಳ್ಳಿ ಸಣ್ಣ ಕೈಗಾರಿಕೆಗಳ ವತಿಯಿಂದ ಸ್ವಚ್ಛ ಭಾರತ ಅಭಿಯಾನ.

ಅಂತರಸನಹಳ್ಳಿ ಸಣ್ಣ ಕೈಗಾರಿಕೆಗಳ ವತಿಯಿಂದ ಸ್ವಚ್ಛ ಭಾರತ ಅಭಿಯಾನ.

ತುಮಕೂರಿನ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಇರುವ ಸಣ್ಣ ಕೈಗಾರಿಕೆಗಳ ಸಂಘ ಹಾಗೂ ತುಮಕೂರು ಮಹಾನಗರ ಪಾಲಿಕೆ ವತಿಯಿಂದ ಕೆಎಸ್ಎಸ್ಐಡಿಸಿ ಕೈಗಾರಿಕಾ ಪ್ರದೇಶದಲ್ಲಿ ಸ್ವಚ್ಛ ಭಾರತ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

 

ಕಾರ್ಯಕ್ರಮದಲ್ಲಿ ಮಾತನಾಡಿದ ತುಮಕೂರು ಮಹಾನಗರ ಪಾಲಿಕೆಯ ಮೇಯರ್ ಕೃಷ್ಣಪ್ಪ ಮಾತನಾಡಿ ನಗರ ಪ್ರದೇಶಗಳ ಬೆಳವಣಿಗೆಗೆ ಕೈಗಾರಿಕೆಗಳ ಕೊಡುಗೆ ಅಪಾರ ಅವುಗಳಿಂದ ನಗರ ಹಾಗೂ ಗ್ರಾಮಾಂತರ ಪ್ರದೇಶದ ನಿರುದ್ಯೋಗಿಗಳಿಗೆ ಉದ್ಯೋಗ ಸೇರಿದಂತೆ ಸರ್ಕಾರಕ್ಕೆ ಆದಾಯ ತರುವ ಮೂಲಗಳಾಗಿವೆ ಅವುಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಸ್ಥಳೀಯ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದರು.

ಮಹಾನಗರ ಪಾಲಿಕೆಯ ಆಯುಕ್ತರಾದ ರೇಣುಕಾ ರವರು ಮಾತನಾಡಿ ಕೈಗಾರಿಕಾ ಪ್ರದೇಶದಲ್ಲಿ ಸ್ವಚ್ಛ ಭಾರತ ಕಾರ್ಯಕ್ರಮ ಹಮ್ಮಿಕೊಂಡಿರುವುದು ನಿಜಕ್ಕೂ ಶ್ಲಾಘನೀಯ ಎಂದರು. ಕೈಗಾರಿಕಾ ಪ್ರದೇಶದಲ್ಲಿರುವ ಕೈಗಾರಿಕೋದ್ಯಮಿಗಳು ತಮ್ಮ ಕೈಗಾರಿಕೆಗಳಿಗೆ ಸಂಬಂಧಿಸಿದಂತೆ ಹಲವು ದಾಖಲೆಗಳು ಸ್ಥಳೀಯವಾಗಿ ಲಭ್ಯವಿಲ್ಲದ ಕಾರಣ ಅವುಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ ಕಾರಣ ಅವುಗಳ ದಾಖಲಾತಿಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ನೀಡಿ ನೋಂದಣಿ ಮಾಡಿಸಲು ತಿಳಿಸಿದರು ಹಾಗೂ ಕೈಗಾರಿಕಾ ಘಟಕದಲ್ಲಿ ಉತ್ಪಾದನೆಯಾಗುವ ತ್ಯಾಜ್ಯವನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡಲು ಎಲ್ಲರೂ ಸಹಕಾರ ನೀಡಬೇಕು, ಕಾಲಕ್ಕೆ ತಕ್ಕಂತೆ ತೆರಿಗೆಗಳನ್ನು ಪಾವತಿಸಿದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸಹಕಾರಿಯಾಗಲಿದೆ ಎಂದರು.

 

ಸಣ್ಣ ಕೈಗಾರಿಕೆಗಳ ಸಂಘದ ರಾಜಗೋಪಾಲ್ ಮಾತನಾಡಿ ಅಧಿಕಾರಿಗಳು ಹಾಗೂ ಉದ್ಯಮಿಗಳಲ್ಲಿ ಉತ್ತಮ ಒಡನಾಟ ಇದ್ದಾಗ ಮಾತ್ರ ಸರ್ಕಾರದಿಂದ ಸೌಲಭ್ಯಗಳನ್ನು ಪಡೆಯಲು ಸಹಕಾರಿಯಾಗಲಿದೆ ಹಾಗೂ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ 53 ಎಕರೆ ಪ್ರದೇಶದಲ್ಲಿ ಇರುವ 153 ಸಣ್ಣ ಕೈಗಾರಿಕೆಗಳಿಂದ ಸುಮಾರು ಸಾವಿರಕ್ಕೂ ಅಧಿಕ ಜನ ಉದ್ಯೋಗ ಮಾಡುತ್ತಿದ್ದಾರೆ ಇಂತಹ ಭಾಗಕ್ಕೆ ಸರ್ಕಾರದಿಂದ ರಸ್ತೆ ನೀರು ಹಾಗೂ ವಿದ್ಯುದ್ದೀಪಗಳನ್ನು ಮಹಾನಗರ ಪಾಲಿಕೆಯಿಂದ ಒದಗಿಸಿಕೊಡಬೇಕೆಂದು ಒತ್ತಾಯಿಸಿದರು.

 

ಇದೇ ಸಂದರ್ಭದಲ್ಲಿ ಸೇವಂತ್ ವಾಸುದೇವ್ ಸ್ವಾಗತಿಸಿದರು ,ಸಂಘದ ಅಧ್ಯಕ್ಷರಾದ ಶ್ರೀ ಹರ್ಷ ರವರು ಪ್ರಾಸ್ತಾವಿಕ ನುಡಿಗಳನ್ನು ಆಡಿದರು ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ಮಂಜುನಾಥ್, ತುಮಕೂರು ಮಹಾನಗರ ಪಾಲಿಕೆ ಆರೋಗ್ಯದ ಆರೋಗ್ಯಾಧಿಕಾರಿ ರಕ್ಷಿತ್, ಜಿಲ್ಲಾ ಕೈಗಾರಿಕೆಗಳ ಇಲಾಖೆಯ ಜೆ.ಡಿ ನಾಗೇಶ್, ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ನಯಾಜ್ ಅಹಮದ್, ಕೆ ಎಸ್ ಎಸ್ ಐ ಡಿ ಸಿ ಎಜಿಎಂ ವೆಂಕಟ್ ನಾರಾಯಣ್, ಇಂಜಿನಿಯರ್ ಲೋಕೇಶ್, ಬೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ಜಗದೀಶ್, ತುಮಕೂರು ಜಿಲ್ಲೆ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷರಾದ ಸುಗನನ್ ಹಿರೇಮಠ್,ವಸಂತ್, ರಾಘವೇಂದ್ರ ,ವಾಸುದೇವ್, ರಮೇಶ್, ಮಹೇಶ್, ನಾಗರಾಜು ಸೇರಿದಂತೆ ಹಲವರು ಹಾಜರಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version