ಮುಸ್ಲಿಂ ಸಮುದಾಯದ ಮುಖಂಡರು ಧರ್ಮಗುರುಗಳ ಜೊತೆ ಶಾಂತಿ ಸಭೆ ನಡೆಸಿದ ಪೊಲೀಸ್ ಇಲಾಖೆ.
ತುಮಕೂರು_ಹಿಜಬ್ ಸಂಘರ್ಷ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪರ-ವಿರೋಧ ಚರ್ಚೆ ಹಾಗೂ ರಾಜ್ಯಾದ್ಯಂತ ಕೆಲ ವಿದ್ಯಾರ್ಥಿಗಳು ಹಿಜಾಬ್ ಗಾಗಿ ಪಟ್ಟುಹಿಡಿದ ಘಟನೆ ನಡೆಯುತ್ತಿವೆ.
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆ ನಡೆಯುತ್ತಿದ್ದು ಆದರೂ ಸಹ ರಾಜ್ಯಾದ್ಯಂತ ಹಿಜಾಬ್ ಧರಿಸುವ ಬಗ್ಗೆ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದು ಸಾಕಷ್ಟು ತಲೆನೋವು ಸೃಷ್ಟಿ ಮಾಡಿದೆ.
ಇದರ ಬೆನ್ನಲ್ಲೇ ತುಮಕೂರು ಜಿಲ್ಲಾ ಪೊಲೀಸ್ ಇಲಾಖೆ ಶುಕ್ರವಾರ ತುಮಕೂರಿನ ಜಾಮಿಯಾ ಮಸೀದಿಯಲ್ಲಿ ಮುಸ್ಲಿಂ ಸಮುದಾಯದ ಮುಖಂಡರು, ಧರ್ಮಗುರುಗಳು, ಸಂಘ-ಸಂಸ್ಥೆಗಳ ಮುಖಂಡರ ಜೊತೆಯಲ್ಲಿ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ವಾಡ್ ಹಾಗೂ ಅಡಿಷನಲ್ ಎಸ್ಪಿ ಹಾಗೂ ಸ್ಥಳೀಯ ಪೊಲೀಸ್ ಸಿಬ್ಬಂದಿಗಳೊಂದಿಗೆ ಶಾಂತಿ ಸಭೆ ನಡೆಸಿದರು.
ಹಿಜಾಬ್ ಸಂಬಂಧ ತುಮಕೂರಿನಲ್ಲಿ ಹೈಕೋರ್ಟ್ ಆದೇಶವನ್ನು ಪಾಲಿಸುವ ಸಲುವಾಗಿ ಹಾಗೂ ತುಮಕೂರಿನಲ್ಲಿ ಯಾವುದೇ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ಎಲ್ಲರೂ ಸಹಕರಿಸಬೇಕೆಂದು ತುಮಕೂರು ಜಿಲ್ಲಾ ಪೊಲೀಸ್ ಇಲಾಖೆ ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ ಚರ್ಚೆ ನಡೆಸಿದ್ದಾರೆ.
ಇನ್ನು ಸಭೆಯಲ್ಲಿ ತುಮಕೂರು ನಗರ ಮಾಜಿ ಶಾಸಕರಾದ ರಫೀಕ್ ಅಹಮದ್, ಕಾಂಗ್ರೆಸ್ ಮುಖಂಡರಾದ ಶಫಿ ಅಹಮದ್ , ಖಲಂದರ್ ಸಾಬ್, ತಾಜುದ್ದೀನ್ ಶರೀಫ್, ಅಯಾಜ್ ಅಹಮದ್,ತುಮಕೂರಿನ ಮಸೀದಿಯ ಮುಖಂಡರು ಮೌಲ್ವಿಗಳು, ವಕೀಲರು ಸೇರಿದಂತೆ ಹಲವರು ಶಾಂತಿ ಸಭೆಯಲ್ಲಿ ಪಾಲ್ಗೊಂಡಿದ್ದರು.