ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ   ವಿದ್ಯಾರ್ಥಿ ಹಾಸ್ಟೆಲ್ನಲ್ಲಿ ನೇಣಿಗೆ ಶರಣು.

ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ   ವಿದ್ಯಾರ್ಥಿ ಹಾಸ್ಟೆಲ್ನಲ್ಲಿ ನೇಣಿಗೆ ಶರಣು.

 

 

ತುಮಕೂರು_ತುಮಕೂರು ನಗರದ ವಿದ್ಯಾನಿಧಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಬಟವಾಡಿ ಬಳಿ ಇರುವ ಹಾಸ್ಟೆಲ್ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಸಂಜೆ ನಡೆದಿದೆ.

 

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಇನ್ನು ವಿದ್ಯಾರ್ಥಿಯೊಬ್ಬ ಹಾಸ್ಟೆಲ್ನಲ್ಲಿ ನೇಣುಬಿಗಿದುಕೊಂಡು ಘಟನೆ ತಿಳಿದಕೂಡಲೇ ಹಾಸ್ಟೆಲ್ ವಾರ್ಡನ್ ಹಾಗೂ ವಿದ್ಯಾರ್ಥಿಗಳು ತುಮಕೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಿದ್ದಾರೆ ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.

 

 

ಇನ್ನು ಮೃತಪಟ್ಟಿರುವ ವಿದ್ಯಾರ್ಥಿಯನ್ನು ಹಿರಿಯೂರು ಮೂಲದ ಭುವನ್ ಎಂದು ತಿಳಿದುಬಂದಿದೆ.

 

ಹೊಸ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

 

 

ಕಳೆದ ಎರಡು ದಿನಗಳ ಹಿಂದೆ ತುಮಕೂರಿನ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದ ಇನ್ನೂ ಘಟನೆ ಮಾಸುವ ಮುನ್ನವೇ ಮತ್ತೊಬ್ಬ ವಿದ್ಯಾರ್ಥಿ ನೇಣಿಗೆ ಶರಣಾಗಿರುವುದು ವಿಪರ್ಯಾಸ.

Leave a Reply

Your email address will not be published. Required fields are marked *

You cannot copy content of this page

error: Content is protected !!