ಬಂಗಾಳ ವಿಧಾನಸಭೆಯಲ್ಲಿ ಈಡಿ, ಸಿಬಿಐ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸಿದ ಟಿಎಂಸಿ
ಕೋಲ್ಕತಾ: ಆಡಳಿತಾರೂಢ ತೃಣಮೂಲ ಕಾಂಗ್ರೆಸ್(ಟಿಎಂಸಿ) ಬುಧವಾರ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಜಾರಿ ನಿರ್ದೇಶನಾಲಯ (ಈಡಿ) ಹಾಗೂ ಕೇಂದ್ರೀಯ ತನಿಖಾ ದಳ (ಸಿಬಿಐ) ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸಿದೆ ಎಂದು ಸುದ್ದಿಸಂಸ್ಥೆ ANI ವರದಿ ಮಾಡಿದೆ.
ಸಿಬಿಐ ಮತ್ತು ಈಡಿ ಮುಖ್ಯಸ್ಥರ ಅಧಿಕಾರಾವಧಿಯನ್ನು 2ರಿಂದ 5 ವರ್ಷಕ್ಕೆ ವಿಸ್ತರಿಸಲು ಸರಕಾರವು ಸುಗ್ರೀವಾಜ್ಞೆ ಹೊರಡಿಸಿರುವುದನ್ನು ಆಕ್ಷೇಪಿಸಿ ಟಿಎಂಸಿ ಸೋಮವಾರ ರಾಜ್ಯಸಭೆಯಲ್ಲಿ ನಿರ್ಣಯವನ್ನು ಮಂಡಿಸಿದೆ ಎಂದು ಪಿಟಿಐ ತಿಳಿಸಿದೆ.
ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಕಾನೂನು ಮತ್ತು ನ್ಯಾಯ ಸಚಿವಾಲಯವು ಪ್ರಕಟಿಸಿದ ಎರಡು ಸುಗ್ರೀವಾಜ್ಞೆಗಳಿಗೆ ರವಿವಾರ ಸಹಿ ಹಾಕಿದ್ದಾರೆ. ಇದರಲ್ಲಿ ಜಾರಿ ನಿರ್ದೇಶನಾಲಯ (ಈಡಿ) ಅಥವಾ ಕೇಂದ್ರೀಯ ತನಿಖಾ ದಳ (ಸಿಬಿಐ) ಮುಖ್ಯಸ್ಥರ ಎರಡು ವರ್ಷಗಳ ಅವಧಿ ಮುಗಿದ ನಂತರ ಕೇಂದ್ರ ಸರಕಾರವು ಮೂರು ವರ್ಷಗಳಿಗೆ ವಿಸ್ತರಿಸುವ ಸಾಧ್ಯತೆ ಇದೆ.