ನಾಳೆ ಮಾಜಿ ಸಿಎಂ ಹೆಚ್ ಡಿ ಕೆ ಆಗಮನ

ನಾಳೆ ಮಾಜಿ ಸಿಎಂ ಹೆಚ್ ಡಿ ಕೆ ಆಗಮನ

 

ದೇವನಹಳ್ಳಿ: ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ತಾಲೂಕಿನಲ್ಲಿ ವಿಜೇತರಾಗಿರುವ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಗಳಿಗೆ ಸನ್ಮಾನ ಮಾಡಲು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ನಾಳೆ ದೇವನಹಳ್ಳಿ ಗೆ ಆಗಮಿಸಲಿದ್ದಾರೆ. ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಶಾಸಕ ನಿಸರ್ಗ ನಾರಾಯಣಸ್ವಾಮಿ ಈ ಬಗ್ಗೆ ಮಾಹಿತಿ ನೀಡಿದರು. ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 11 ಪಂಚಾಯ್ತಿಗಳಲ್ಲಿ ಜೆಡುಎಸ್ ಅಧಿಕಾರದ ಗದ್ದುಗೆಯೇರಲಿದ್ದು, ಮುಂಬರುವ ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಯಲ್ಲಿ ಜೆಡಿಎಸ್ ಮತ್ತಷ್ಟು ಸ್ಥಾನ ಪಡೆದುಕೊಳ್ಳಲಿದೆ. ಈ ನಿಟ್ಟಿನಲ್ಲಿ ಕಾರ್ಯೋನ್ಮುಕವಾಗುವಂತೆ ಜೆಡಿಎಸ್ ಕಾರ್ಯಕರ್ತರಿಗೆ ಮಾಜಿ ಸಿಎಂ ನಾಳೆ ಕರೆ ನೀಡಲಿದ್ದಾರೆ ಎಂದರು. ಇನ್ನು ಕಾರ್ಯಕ್ರಮವನ್ನು ದೇವನಹಳ್ಳಿ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದು ಎಲ್ಲಾ ಜೆಡಿಎಸ್ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಮನವಿ ಮಾಡಿದರು.

 

ಗುರುಮೂರ್ತಿ ಬೂದಿಗೆರೆ

Leave a Reply

Your email address will not be published. Required fields are marked *

You cannot copy content of this page

error: Content is protected !!