ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡಲಾಗಿದೆ _ಎಸ್ಪಿ ರಾಹುಲ್ ಕುಮಾರ್ ಶಹಪೂರ್ವಾಡ್.
ತುಮಕೂರು_ಹಿಜಾಬ್ ಮತ್ತು ಕೇಸರಿ ಶಾಲು ಸಂಘರ್ಷ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲಾಗಿದೆ.
ಇನ್ನು ಈ ಸಂಬಂಧ ತುಮಕೂರು ಜಿಲ್ಲಾ ಪೊಲೀಸ್ ಇಲಾಖೆ ಸಾಮಾಜಿಕ ಜಾಲತಾಣಗಳ ಮೇಲೆ ತೀವ್ರ ನಿಗಾ ಇಡಲಾಗಿದ್ದು.
ಈ ಮೂಲಕ ಅನಧಿಕೃತ ಪೋಸ್ಟ್ ,ಪ್ರಚೋದನಕಾರಿ ಹೇಳಿಕೆಗಳು ವ್ಯಕ್ತವಾದರೆ ಈ ಮೂಲಕ ಇಂತಹ ಪೋಸ್ಟ್ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿದು ಬಿಡುವವರ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮ ತೆಗೆದುಕೊಳ್ಳಲಿದೆ .
ಇನ್ನು ಇಂತಹ ಪೋಸ್ಟ್ಗಳನ್ನು ಹರಿದು ಬಿಡುವವರ ಮೇಲೆ ರೌಡಿಶೀಟರ್ ಓಪನ್ ಮಾಡಿ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಇನ್ನು ವಿದ್ಯಾರ್ಥಿಗಳು ಸಹ ಸರ್ಕಾರದ ಆದೇಶಗಳನ್ನು ಪಾಲಿಸದೇ ಇದ್ದಲ್ಲಿ ಅಂಥವರ ಮೇಲೂ ಕ್ರಮ ಕೈಗೊಳ್ಳಲಾಗುವುದು.
ಇನ್ನು ವಿದ್ಯಾರ್ಥಿಗಳ ಭವಿಷ್ಯ ಅತ್ಯಮೂಲ್ಯವಾದದ್ದು ಇಂತಹ ಪ್ರಚೋದನಕಾರಿ ಭಾಷಣ ಹೇಳಿಕೆಗಳು ನೀಡುವ ಮೂಲಕ ಯಾವುದೇ ಘಟನೆಗಳಿಗೆ ಕಾರಣರಾದರೆ ಅಂತವರ ಮೇಲೆ ನಿರ್ಧಾಕ್ಷಣ್ಯ ಕ್ರಮ ತೆಗೆದುಕೊಳ್ಳಲಾಗುವುದು .
ಇಂತಹ ಘಟನೆಗಳಿಗೆ ಯಾವುದೇ ಕಾರಣಕ್ಕೂ ಕ್ಷಮೆ ಇಲ್ಲ ಇನ್ನು ಈ ಸಂಬಂಧ ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.
ವರದಿ_ಮಾರುತಿ ಪ್ರಸಾದ್ ತುಮಕೂರು