ಸಾರಿಗೆ ನೌಕರರ ತರಬೇತಿ ಅವಧಿ 1ವರ್ಷಕ್ಕೆ ಇಳಿಸಿ ರಾಜ್ಯ ಸರ್ಕಾರ ಆದೇಶ.

 

ಬೆಂಗಳೂರು : ರಾಜ್ಯ ಸರ್ಕಾರವು ಸಾರಿಗೆ ನೌಕರರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ತರಬೇತಿ ಅವಧಿಯನ್ನು 2 ವರ್ಷದಿಂದ 1 ವರ್ಷಕ್ಕೆ ಇಳಿಸಿ ಮಹತ್ವದ ಆದೇಶ ಹೊರಡಿಸಿದೆ.

ಕೆಎಸ್‌ಆರ್ ಟಿಸಿ, ಬಿಎಂಟಿಸಿ,ವಾಯುವ್ಯ ಸಾರಿಗೆ ಹಾಗೂ ಈಶಾನ್ಯ ಸಾರಿಗೆ ನಿಗಮಗಳಲ್ಲಿ 2021 ರ ಜುಲೈನಿಂದ ಸರ್ಕಾರದ ಈ ಆದೇಶ ಜಾರಿಗೆ ಬರಲಿದೆ. ರಾಜ್ಯ ಸರ್ಕಾರದ ಈ ಆದೇಶಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟವು 2020ರ ಜನವರಿಯಿಂದ ಅನ್ವಯವಾಗುಉವಂತೆ ಆದೇಶ ಹೊರಡಿಸುವಂತೆ ಬೇಡಿಕೆ ಇಟ್ಟಿದ್ದೇವು. ಆದರೆ ಸರ್ಕಾರ ಪ್ರಸಕ್ತ ಸಾಲಿನ ಜುಲೈನಿಂದ ಅನ್ವಯವಾಗುವಂತೆ ಆದೇಶಿಸಿದೆ. ಇದರಿಂದ ತರಬೇತಿಯಲ್ಲಿರುವ ನೌಕರರಿಗೆ ಯಾವುದೇ ಪ್ರಯೋಜನವಿಲ್ಲ ಎಂದು ಹೇಳಿದೆ.

 

 

Leave a Reply

Your email address will not be published. Required fields are marked *

You cannot copy content of this page

error: Content is protected !!