ಬೆಂಗಳೂರು : ರಾಜ್ಯ ಸರ್ಕಾರವು ಸಾರಿಗೆ ನೌಕರರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ತರಬೇತಿ ಅವಧಿಯನ್ನು 2 ವರ್ಷದಿಂದ 1 ವರ್ಷಕ್ಕೆ ಇಳಿಸಿ ಮಹತ್ವದ ಆದೇಶ ಹೊರಡಿಸಿದೆ.
ಕೆಎಸ್‌ಆರ್ ಟಿಸಿ, ಬಿಎಂಟಿಸಿ,ವಾಯುವ್ಯ ಸಾರಿಗೆ ಹಾಗೂ ಈಶಾನ್ಯ ಸಾರಿಗೆ ನಿಗಮಗಳಲ್ಲಿ 2021 ರ ಜುಲೈನಿಂದ ಸರ್ಕಾರದ ಈ ಆದೇಶ ಜಾರಿಗೆ ಬರಲಿದೆ. ರಾಜ್ಯ ಸರ್ಕಾರದ ಈ ಆದೇಶಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟವು 2020ರ ಜನವರಿಯಿಂದ ಅನ್ವಯವಾಗುಉವಂತೆ ಆದೇಶ ಹೊರಡಿಸುವಂತೆ ಬೇಡಿಕೆ ಇಟ್ಟಿದ್ದೇವು. ಆದರೆ ಸರ್ಕಾರ ಪ್ರಸಕ್ತ ಸಾಲಿನ ಜುಲೈನಿಂದ ಅನ್ವಯವಾಗುವಂತೆ ಆದೇಶಿಸಿದೆ. ಇದರಿಂದ ತರಬೇತಿಯಲ್ಲಿರುವ ನೌಕರರಿಗೆ ಯಾವುದೇ ಪ್ರಯೋಜನವಿಲ್ಲ ಎಂದು ಹೇಳಿದೆ.