ವರ್ಗಾವಣೆಗೊಂಡ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ಪಟ್ಟಿ ಪ್ರಕಟ

ತುಮಕೂರು: ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲಾ ವ್ಯಾಪ್ತಿಯ ೨೦೨೦-೨೧ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವೃಂದದ ವರ್ಗಾವಣೆಗೆ ಸಂಬAಧಿಸಿದAತೆ ಮೊದಲ ಹಂತವಾಗಿ ೨೦೧೯-೨೦ನೇ ಸಾಲಿನಲ್ಲಿ ಕಡ್ಡಾಯ/ಹೆಚ್ಚುವರಿ ವರ್ಗಾವಣೆ ಪ್ರಕ್ರಿಯೆಯಲ್ಲಿ ತಾಲೂಕಿನಿಂದ ಹೊರಗೆ ವರ್ಗಾವಣೆಗೊಂಡ ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ ಜಿಲ್ಲೆಯಿಂದ ಹೊರಗೆ ವರ್ಗಾವಣೆಗೊಂಡ ಪ್ರೌಢಶಾಲಾ ಶಿಕ್ಷಕರುಗಳ ಪಟ್ಟಿಯನ್ನು ಉಪನಿರ್ದೇಶಕರ ಹಾಗೂ ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ಸದರಿ ಪಟ್ಟಿಯಲ್ಲಿ ಯಾವುದೇ ಶಿಕ್ಷಕರ ಹೆಸರು ಬಿಟ್ಟುಹೋಗಿದ್ದಲ್ಲಿ ಅಥವಾ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಜುಲೈ ೨೦ರ ಮಧ್ಯಾಹ್ನ ೩ ಗಂಟೆಯೊಳಗೆ ಸಂಬAಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಸೂಕ್ತ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version