ತುಮಕೂರು ನಗರದ ಶಾಂತಿ ಕದಡುವ ಕೋಮುವಾದಿ ಶಕ್ತಿಗಳನ್ನು ನಿಯಂತ್ರಿಸಲು ಪ್ರಗತಿಪರ ಸಂಘಟನೆಗಳ ಒತ್ತಾಯ.

ತುಮಕೂರು ನಗರದ ಶಾಂತಿ ಕದಡುವ ಕೋಮುವಾದಿ ಶಕ್ತಿಗಳನ್ನು ನಿಯಂತ್ರಿಸಲು ಪ್ರಗತಿಪರ ಸಂಘಟನೆಗಳ ಒತ್ತಾಯ.

ಕಳೆದ ಎರಡು ದಿನಗಳ ಹಿಂದೆ ತುಮಕೂರು ನಗರದ ಗುಬ್ಬಿ ಗೇಟ್ ಬಳಿ ನಡೆದ ಹಲ್ಲೆ ಘಟನೆಗೆ ಸಂಬಂಧಿಸಿದಂತೆ ಇಂದು ತುಮಕೂರು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ ಸಂಘಪರಿವಾರದವರು ಆಕಸ್ಮಿಕವಾಗಿ ನಡೆದ ಘಟನೆಯನ್ನು ಕೋಮುವಾದಿ ಬಣ್ಣ ಹಚ್ಚುವ ಮೂಲಕ ಕೋಮುವಾದವನ್ನು ಉಂಟು ಮಾಡುವಲ್ಲಿ ನಿರತರಾಗಿದ್ದಾರೆ ಹಾಗಾಗಿ ಇಂಥ ಸೂಕ್ಷ್ಮ ವಿಚಾರಗಳ ಬಗ್ಗೆ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಎಚ್ಚರ ವಹಿಸಬೇಕು ಎಂದು ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

 

ತುಮಕೂರು ನಗರದ ಜನತೆ ಶಾಂತಿಪ್ರಿಯರಾಗಿದ್ದು ಈ ಘಟನೆಯಿಂದ ನಗರದ ಶಾಂತಿ ಹಾಗೂ ಸಹಬಾಳ್ವೆಗೆ ಧಕ್ಕೆ ಉಂಟು ಮಾಡಿ ತಮ್ಮ ಲಾಭಕ್ಕೆ ಮುಖಂಡರು ಪ್ರಯತ್ನಿಸುತ್ತಿರುವುದರಿಂದ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಸರಕಾರ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಈಗಾಗಲೇ ದೇಶದ ಜನರು ಬೆಲೆ ಏರಿಕೆ ಹಾಗೂ ಕರೋನಾ ಸಾಂಕ್ರಾಮಿಕ ರೋಗದಿಂದ ಜೀವನ ನಡೆಸುವುದೇ ದುಸ್ತರವಾಗಿದೆ ಆದರೆ ಇಂತಹ ಸಂದಿಗ್ಧ ಸಮಯದಲ್ಲಿ ಆಕಸ್ಮಿಕವಾಗಿ ನಡೆದ ಘಟನೆಯನ್ನು ಮುಂದಿಟ್ಟುಕೊಂಡು ಕೆಲವರು ಕೋಮು ದ್ವೇಷ ಹರಡುವಲ್ಲಿ ಪ್ರಯತ್ನಿಸುತ್ತಿದ್ದಾರೆ ಹಾಗಾಗಿ ಇಂತಹ ಘಟನೆಗಳಿಗೆ ಪೊಲೀಸ್ ಇಲಾಖೆ ಕಡಿವಾಣ ಹಾಕಬೇಕು ಎಂದು ಪಿಯುಸಿಎಲ್ ನ ಜಿಲ್ಲಾಧ್ಯಕ್ಷರಾದ ದೊರೆರಾಜು ತಿಳಿಸಿದರು.

ಇದೇ ಸಂದರ್ಭದಲ್ಲಿ ಪ್ರಾಂತ ರೈತ ಸಂಘದ ಬಿ ಉಮೇಶ್, ಎಪಿಸಿಆರ್ ತಾಜುದ್ದೀನ್ ಶರೀಫ್ , ಅಂಬೇಡ್ಕರ್ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಎನ್ .ಕೆ ನಿಧಿ ಕುಮಾರ್ ತುಮಕೂರು ಮಹಾನಗರ ಪಾಲಿಕೆ ಸದಸ್ಯ ಮಂಜುನಾಥ, ಸಿ ಐ ಟಿ ಯು ನ ಸೈಯದ್ ಮುಜೀಬ್, ಎಐಟಿಯುಸಿ ಗಿರೀಶ್, ಡಿಎಸ್ಎಸ್ನ ಪಿ. ಎನ್. ರಾಮಯ್ಯ, ಆರ್ ಕೆ ಎಸ್ ಸ್ವಾಮಿ, ಟಿಸಿಟಿ ಗೌಸ್ ಭಾಷಾ, ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version