ಸ್ಥಳೀಯ ಸಂಸ್ಥೆ (ವಿಧಾನ ಪರಿಷತ್) ಚುನಾವಣೆಯಲ್ಲಿ ತುಮಕೂರು ಕ್ಷೇತ್ರಕ್ಕೆ ಪರಿಶಿಷ್ಟ ಜಾತಿಯ (ಎಡಗೈ) ಸಮುದಾಯಕ್ಕೆ ಪ್ರಾತಿನಿಧ್ಯ ನೀಡಲು ಒತ್ತಾಯಿಸಿದ ಮುಖಂಡರು
ಇಂದು ತುಮಕೂರಿನ ಖಾಸಗಿ ಹೋಟೆನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಪರಿಶಿಷ್ಟ ಜಾತಿಯ (ಎಡಗೈ) ಸಮುದಾಯದ ಮುಖಂಡರಾದ ನರಸೀಯಪ್ಪ, ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರಾದ ಕೆಂಚಮಾರಯ್ಯ ಹಾಗೂ ಕಾಂಗ್ರೆಸ್ ಮುಖಂಡರಾದ ಮರಿ ಚೆನ್ನಮ್ಮ ರವರ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಮುದಾಯದ ಮುಖಂಡರು ಇದುವರೆಗೂ ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಪರಿಶಿಷ್ಟ ಜಾತಿಯ(ಎಡಗೈ) ಸಮುದಾಯ ಹೆಚ್ಚು ಜನಸಂಖ್ಯೆ ಹೊಂದಿದ್ದರೂ ಸಹ ರಾಜಕೀಯ ಪಕ್ಷಗಳು ಉತ್ತಮ ಸ್ಥಾನಮಾನ ನೀಡುವಲ್ಲಿ ತಾತ್ಸಾರ ನೀತಿ ಅನುಸರಿಸುತ್ತಿದ್ದು ಮುಂಬರುವ ಸ್ಥಳೀಯ ಸಂಸ್ಥೆ ವಿಧಾನಪರಿಷತ್ ಚುನಾವಣೆಗೆ ಪರಿಶಿಷ್ಟ ಜಾತಿಯ ಎಡಗೈ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಮುಖಂಡರಾದ ನರಸೀಯಪ್ಪನವರು ತುಮಕೂರು ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಸಮುದಾಯದವರು 4 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದ್ದು ಪರಿಶಿಷ್ಟ ಜಾತಿಯಲ್ಲಿ ಅತಿ ಹೆಚ್ಚಿನ ಜನಸಂಖ್ಯೆ ಎಡಗೈ ಸಮಾಜದವರು ಇದ್ದಾರೆ ತುಮಕೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಪರಿಶಿಷ್ಟ ಜಾತಿಗೆ ಎರಡು ಮೀಸಲು ಕ್ಷೇತ್ರಗಳಿವೆ ಆದರೆ ಕಾಂಗ್ರೆಸ್ ಪಕ್ಷವು ಎರಡು ಕ್ಷೇತ್ರಗಳಲ್ಲಿ ಪರಿಶಿಷ್ಟ ಜಾತಿ ಎಡಗೈ ಸಮುದಾಯಕ್ಕೆ ಅಂತಹ ಸೂಕ್ತ ಸ್ಥಾನಮಾನವನ್ನು ನೀಡಿರುವುದಿಲ್ಲ ಹಾಗಾಗಿ ಮಾದಿಗ ಸಮುದಾಯ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಅತಿದೊಡ್ಡ ಸಮುದಾಯವಾಗಿ ಇದ್ದರೂ ಸಹ ಕಾಂಗ್ರೆಸ್ ಪಕ್ಷದಿಂದ ಪ್ರಾತಿನಿಧ್ಯ ಸಿಕ್ಕಿಲ್ಲವಾದ್ದರಿಂದ ಸಮುದಾಯದ ಮುಖಂಡರು ತೀವ್ರ ಬೇಸರ ವ್ಯಕ್ತಪಡಿಸುತ್ತಿದ್ದು ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲಿ ನಮ್ಮ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆಂಚ ಮಾರಯ್ಯನವರು ಮಾತನಾಡಿ ಎಡಗೈ ಸಮುದಾಯದ ಮುಖಂಡರು ಎಲ್ಲಾ ರಂಗದಲ್ಲೂ ಮುಂಚೂಣಿಯಲ್ಲಿದ್ದಾರೆ ಆದರೆ ರಾಜಕೀಯವಾಗಿ ರಾಜಕೀಯ ಪಕ್ಷಗಳು ನಮ್ಮ ಸಮುದಾಯವನ್ನು ತಾತ್ಸಾರ ಮನೋಭಾವದಿಂದ ನೋಡುತ್ತಿರುವುದು ಸಮುದಾಯದ ಜನರಿಗೆ ತೀವ್ರ ಬೇಸರ ತಂದಿದೆ ಹಾಗಾಗಿ ಇದುವರೆಗೂ ಎಲ್ಲ ಸಮುದಾಯಗಳ ಮುಖಂಡರಿಗೂ ಪ್ರಾತಿನಿಧ್ಯ ಸಿಕ್ಕಿದೆ ಆದರೆ ಎಡಗೈ ಸಮುದಾಯಕ್ಕೆ ಇದುವರೆಗೂ ಪ್ರಾತಿನಿಧ್ಯ ಸಿಕ್ಕಿಲ್ಲವಾದ್ದರಿಂದ ಈ ಬಾರಿ ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮೂರು ಜನ ಆಕಾಂಕ್ಷಿಗಳಿದ್ದು ಇದರಲ್ಲಿ ಯಾರಿಗೆ ಟಿಕೆಟ್ ನೀಡಿದರೂ ಸಹ ನಾವು ಸರ್ವಾನುಮತದಿಂದ ಒಪ್ಪಿ ಗೆಲ್ಲಿಸಿಕೊಳ್ಳುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಇದೇ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ನ ಹಿರಿಯ ಮಹಿಳಾ ಮುಖಂಡರಾದ ಮರಿ ಚಿನ್ನಮ್ಮನ ಅವರು ಮಾತನಾಡಿ ನಾನು ಇದುವರೆಗೂ ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ವರ್ಷಗಳಿಂದ ಪಕ್ಷ ನೀಡಿದ ಜವಾಬ್ದಾರಿಯನ್ನು ಚಾಚೂ ತಪ್ಪದೆ ಪಾಲಿಸಿಕೊಂಡು ಬಂದಿದ್ದು ಇದುವರೆಗೂ ಪಕ್ಷದಿಂದ ಯಾವುದೇ ಉನ್ನತ ಹುದ್ದೆಯನ್ನು ಅಲಂಕರಿಸಿಲ್ಲ ಹಾಗೂ ಪಕ್ಷಕ್ಕೆ ಎಂದು ಕೂಡ ದ್ರೋಹ ಬಗೆಯದ ರೀತಿ ನಡೆದುಕೊಂಡು ಬಂದಿದ್ದು ಸಮುದಾಯದ ವತಿಯಿಂದ ಮೂವರು ಆಕಾಂಕ್ಷಿಗಳಿದ್ದು ಇದರಲ್ಲಿ ಯಾರಿಗಾದರೂ ಟಿಕೆಟ್ ನೀಡಿ ಪಕ್ಷದ ವರಿಷ್ಠರು ಸಹಕರಿಸುತ್ತಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಕೈಗಾರಿಕೋದ್ಯಮಿ ವೆಂಕಟೇಶ್, ಕುಣಿಗಲ್ ನ ಮುಖಂಡರಾದ ಶಿವಶಂಕರ್, ವಕೀಲರಾದ ನರಸಿಂಹಮೂರ್ತಿ ಸೇರಿದಂತೆ ಸಮುದಾಯದ ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.