ಕಾಂಗ್ರೆಸ್ ಕಾರ್ಯಕರ್ತರ ಬಂಧನಕ್ಕೆ ಆಗ್ರಹಿಸಿದ ಬಿಜೆಪಿ ಕಾರ್ಯಕರ್ತರು.

ಕಾಂಗ್ರೆಸ್ ಕಾರ್ಯಕರ್ತರ ಬಂಧನಕ್ಕೆ ಆಗ್ರಹಿಸಿದ ಬಿಜೆಪಿ ಕಾರ್ಯಕರ್ತರು.

 

 

ಉತ್ತರಪ್ರದೇಶದ ಲಕ್ಷ್ಮೀಪುರದಲ್ಲಿ ರೈತರ ಮೇಲೆ ಕಾರು ಚಲಾಯಿಸಿ ರೈತರ ಸಾವಿಗೆ ಈಡಾದ ಘಟನೆಗೆ ಸಂಬಂಧಿಸಿದಂತೆ ಉತ್ತರಪ್ರದೇಶದ ಲಕಿಂಪೂರಕ್ಕೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ರವರ ನ್ನು ಉತ್ತರ ಪ್ರದೇಶದ ಪೊಲೀಸರು ಬಂಧನದಿಂದ ಮುಕ್ತಗೊಳಿಸಬೇಕು ಎಂದು ಕಳೆದ ಎರಡು ದಿನಗಳ ಹಿಂದೆ ತುಮಕೂರಿನ ಯುವ ಕಾಂಗ್ರೆಸ್ ಘಟಕದ ವತಿಯಿಂದ ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದ್ದರು.

 

ಪ್ರತಿಭಟನೆಗೆ ಸಂಬಂಧಿಸಿದಂತೆ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಸಮಯದಲ್ಲಿ ಕೇಸರಿ ಬಟ್ಟೆಗೆ ಮಸಿ ಬಳಿದು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು ಎಂದು ತುಮಕೂರು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳು ಆರೋಪಿಸಿದರು.

 

ಇದಕ್ಕೆ ಸಂಬಂಧಿಸಿದಂತೆ ಇಂದು ತುಮಕೂರಿನ ಬಿಜೆಪಿ ಯುವ ಮೋರ್ಚಾ , ಎಸ್ ಟಿ ಮೋರ್ಛಾ ಹಾಗೂ ಬಿಜೆಪಿ ಕಾರ್ಯಕರ್ತರು ತುಮಕೂರು ನಗರದ ಬಿ.ಎಚ್ ರಸ್ತೆಯಲ್ಲಿ ಸಂಚರಿಸಿ ಕಾಂಗ್ರೆಸ್ ಪಕ್ಷ ಹಾಗೂ ಕೇಸರಿ ಬಟ್ಟೆಯನ್ನು ಸುಟ್ಟ ಕಾರ್ಯಕರ್ತರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

 

ಇದೇ ಸಂದರ್ಭದಲ್ಲಿ ಬಿ.ಎಚ್ ರಸ್ತೆಯಲ್ಲಿ ಸಂಚರಿಸಿ ಕಾಂಗ್ರೆಸ್ ಪಕ್ಷದ ವಿರುದ್ಧ ಧಿಕ್ಕಾರ ಕೂಗಿದ ಕಾರ್ಯಕರ್ತರು ಕೇಸರಿ ಧ್ವಜ ಹಿಂದೂಗಳ ಭಾವನೆಗಳ ಸಂಕೇತ ಅಂತಹ ಕೇಸರಿ ಬಟ್ಟೆಗೆ ಅವಮಾನ ಮಾಡಿರುವ ಕಾಂಗ್ರೆಸ್ ಕಾರ್ಯಕರ್ತರನ್ನು ಶೀಘ್ರವೇ ಬಂಧಿಸಬೇಕು ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

 

ಇನ್ನು ಪ್ರತಿಭಟನೆಯಲ್ಲಿ ಮಾತನಾಡಿದ ತುಮಕೂರು ಜಿಲ್ಲಾ ಬಿಜೆಪಿ ಎಸ್ಟಿ ಮೋರ್ಚಾ ಕಾರ್ಯದರ್ಶಿ ರಾಕೇಶ್ ಮಾತನಾಡಿ ಕೇಸರಿ ಬಟ್ಟೆ ಹಿಂದೂಗಳ ಧಾರ್ಮಿಕ ಭಾವನೆಗಳ ಸಂಕೇತ ಅಂತಹ ಕೇಸರಿ ವಸ್ತ್ರಕ್ಕೆ ಕಾಂಗ್ರೆಸ್ ಯುವ ಘಟಕದ ಪದಾಧಿಕಾರಿಗಳ ಅವಮಾನ ಮಾಡುವ ಮೂಲಕ ಇಡೀ ದೇಶದ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಆದ್ದರಿಂದ ಅವರನ್ನುಶೀಘ್ರವೇ ಬಂಧಿಸಬೇಕು ಎಂದರು.

 

ಇನ್ನೂ ಯುವ ಘಟಕದ ಯಶಸ್ ಮಾತನಾಡಿ ಕಾಂಗ್ರೆಸ್ ಪಕ್ಷಕ್ಕೆ ಕೇಸರಿ ಬಟ್ಟೆಯನ್ನು ಕಂಡರೆ ಆಗುವುದಿಲ್ಲ ಅಂದಿನ ಬ್ರಿಟಿಷರಿಗೂ ಸಹ ಕೇಸರಿ ಧ್ವಜ ಕಂಡರೆ ಆಗುತ್ತಿರಲಿಲ್ಲ ಅದರಂತೆ ಇಂದು ದೇಶದಲ್ಲಿ ಕಾಂಗ್ರೆಸ್ ಪಕ್ಷ ನಡೆದುಕೊಳ್ಳುತ್ತಿದೆ ಇಡೀ ದೇಶವನ್ನು ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ ಇಟಲಿ ಸಂಸ್ಕೃತಿಯನ್ನು ಅನಿಸುತ್ತಿದೆ ಎಂದರು.

 

ಇದೇ ಸಂದರ್ಭದಲ್ಲಿ ಪ್ರತಿಭಟನಕಾರರು ಬಿ.ಎಚ್ ರಸ್ತೆಯಲ್ಲಿ ಸಂಚರಿಸಿ ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗಿದರು ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಕಚೇರಿ ಎದುರು ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆ ಕೂಗಿದರು.

 

ಘಟನೆಯ ಸೂಕ್ಷ್ಮತೆಯನ್ನು ಅರಿತ ಪೊಲೀಸರು ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಿದ್ದರು.

 

ಪ್ರತಿಭಟನೆಯಲ್ಲಿ ಯುವ ಘಟಕದ ಉಪಾಧ್ಯಕ್ಷ ವಿನಯ್, ನಗರ ಪ್ರಧಾನ ಕಾರ್ಯದರ್ಶಿ ದಯಾನಂದ, ಯುವಮೋರ್ಚಾ ಅಧ್ಯಕ್ಷ ನಾಗೇಂದ್ರ, ಚನ್ನಬಸಪ್ಪ ,ರಕ್ಷಿತ್, ಪವನ್ ಸೇರಿದಂತೆ ತುಮಕೂರು ಜಿಲ್ಲಾ ಬಿಜೆಪಿ ಎಸ್ ಟಿ ಮೋರ್ಛಾ ಹಾಗೂ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version