ತುಮಕೂರು ಅಭ್ಯರ್ಥಿ ಆಡಿಯೋ ವೈರಲ್ ಪ್ರಕರಣ ಸಾವಿರಾರು ಮಹಿಳೆಯರಿಂದ ಬೃಹತ್ ಪ್ರತಿಭಟನೆ ಅಭ್ಯರ್ಥಿ ಬದಲಾವಣೆಗೆ ಪಟ್ಟು.
ತುಮಕೂರು – ಕಳೆದ ಮೂರು ದಿನಗಳ ಹಿಂದೆ ತುಮಕೂರಿನಲ್ಲಿ ಜೆಡಿಎಸ್ ಅಭ್ಯರ್ಥಿ ಏನ್ ಗೋವಿಂದರಾಜು ಅವರದ್ದು ಎನ್ನಲಾದ ಆಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ 3000ಕ್ಕೂ ಹೆಚ್ಚು ಮಹಿಳೆಯರಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಇನ್ನು ಪ್ರತಿಭಟನೆಯಲ್ಲಿ ಭಾಗವಹಿಸಿದ ಸಾವಿರಾರು ಮಹಿಳೆಯರು ಹಾಗೂ ಸಾರ್ವಜನಿಕರು ಜೆಡಿಎಸ್ ಅಭ್ಯರ್ಥಿ ಏನ್ ಗೋವಿಂದರಾಜು ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ ಜೆಡಿಎಸ್ ಕಾರ್ಯಕರ್ತರು ಹಾಗೂ ಮಹಿಳೆಯರು ಅವರ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.
ಇನ್ನು ಆರೋಪ ಹೊತ್ತಿರುವ ಅಭ್ಯರ್ಥಿಯನ್ನು ಶೀಘ್ರವೇ ಜೆಡಿಎಸ್ ಪಕ್ಷದ ವರಿಷ್ಠರು ಬದಲಾವಣೆ ಮಾಡಿ ನೂತನ ಅಭ್ಯರ್ಥಿಯನ್ನು ಘೋಷಣೆ ಮಾಡಬೇಕು ಆ ಮೂಲಕ ತುಮಕೂರಿನ ನೊಂದ ಮಹಿಳೆಯರಿಗೆ ನ್ಯಾಯ ಕೊಡುವ ಕೆಲಸವನ್ನ ಜೆಡಿಎಸ್ ಪಕ್ಷದ ವರಿಷ್ಠರು ಮಾಡಬೇಕು ಎಂದು ಪಟ್ಟು ಹಿಡಿದ ಪ್ರತಿಭಟನಾಕಾರರು.
ಹಿರಿಯ ಜೆಡಿಎಸ್ ಮುಖಂಡರಾದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರವರು ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಬದಲಾವಣೆ ಮಾಡಿದ್ದೆ ಆದರೆ ನಿಷ್ಠಾವಂತ ಕಾರ್ಯಕರ್ತರಿಗೆ ಗೌರವ ನೀಡಿದಂತಾಗುತ್ತದೆ ಎಂದ ಹಲವು ಮಹಿಳೆಯರು ಪ್ರತಿಭಟನೆಯಲ್ಲಿ ಅಭ್ಯರ್ಥಿ ವಿರುದ್ಧ ಡಿಸ್ಪ್ಲೇ ಕಾಡುಗಳನ್ನ ತೋರುವ ಮೂಲಕ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ.
ಇಂದು ನಡೆಯುತ್ತಿದ್ದ ಬೃಹತ್ ಪ್ರತಿಭಟನೆ ವೇಳೆ ಆರೋಪ ಮಾಡಿದ್ದ ಮಹಿಳೆ ನಾಪತ್ತೆಯಾಗಿದ್ದು ಇನ್ನು ಪ್ರತಿಭಟನೆಗೆ ಆಗಮಿಸಿದ್ದ ಮಹಿಳೆಯರಿಗೆ ಪ್ರತಿಭಟನೆಯ ಉದ್ದೇಶವೇ ತಿಳಿಯದಾಗಿತ್ತು ಅದರೊಂದಿಗೆ ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ಚುನಾವಣಾ ಆಯೋಗದ ಆಧಿಕಾರಿಗಳು ಭೇಟಿ ನೀಡುತ್ತಿದ್ದಂತೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಹಲವು ಮಹಿಳೆಯರು ಸ್ಥಳದಿಂದ ಕಾಲ್ಕಿತ್ತಿದ್ದದ್ದು ಸಹ ಕಂಡುಬಂದಿದ್ದು ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿದೆ.
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ನೊಂದ ಮಹಿಳೆ ಹಾಗೂ ಜೆಡಿಎಸ್ ಅಭ್ಯರ್ಥಿ ಎನ್ ಗೋವಿಂದರಾಜು ಇಬ್ಬರು ಸಹ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎನ್ನಲಾಗಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರಿಂದಲೂ ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ.
ಅದೇನೇ ಇರಲಿ ಡಿಸೆಂಬರ್ ಒಂದರಂದೆ ತುಮಕೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ರವರು ಜೆಡಿಎಸ್ ಅಭ್ಯರ್ಥಿಯಾಗಿ ಎನ್ ಗೋವಿಂದರಾಜು ಅವರ ಹೆಸರನ್ನ ಅಂತಿಮಗೊಳಿಸಿ ಚುನಾವಣಾ ಪ್ರಚಾರಕ್ಕೆ ಅನುವು ಮಾಡಿದರು ಇನ್ನು ಕಳೆದ ಮೂರು ದಿನಗಳ ಹಿಂದೆ ಅಭ್ಯರ್ಥಿ ಎನ್ ಗೋವಿಂದರಾಜು ರವರಿಗೆ ಬಿ ಫಾರಂ ಸಹ ನೀಡಿದ್ದ ವರಿಷ್ಠರಿಗೆ ಆಡಿಯೋ ಪ್ರಕರಣದಿಂದ ಕೊಂಚ ಬೇಸರ ತಂದುಡ್ಡಿದ್ದು ಮುಂದಿನ ದಿನದಲ್ಲಿ ಅಭ್ಯರ್ಥಿ ಬದಲಾವಣೆ ಆಗುವುದೆ ಎಂದು ಕಾದು ನೋಡಬೇಕಿದೆ….????