ತುಮಕೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕೋರೋನ ಸೋಂಕಿತರು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ತುಮಕೂರು ನಗರದಲ್ಲಿ ತುಮಕೂರು ಜಿಲ್ಲಾಧಿಕಾರಿಗಳಾದ ವೈ ಎಸ್ ಪಾಟೀಲ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ವಂಶಿಕೃಷ್ಣರವರು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ತುಮಕೂರು ನಗರದಲ್ಲಿ ಸಂಚರಿಸಿ ಯಾವೆಲ್ಲ ಕ್ರಮಗಳನ್ನು ತೆಗೆದು ಕೊಳ್ಳಬೇಕೆಂದು ಇತರೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು ತುಮಕೂರು ನಗರದಲ್ಲಿ ಹೆಚ್ಚಾಗಿ ಕೋವಿಡ್ ಸೋಂಕಿತರು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಸರ್ಕಾರದ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು, ಮುಂದಿನ ದಿನಗಳಲ್ಲಿ ಮತ್ತಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳುತ್ತೇವೆ ಸಾರ್ವಜನಿಕರು ಕೂಡಲೇ ಜಾಗೃತರಾಗಬೇಕು ಮಾಸ್ಕ್ ಸ್ಯಾನಿಟೈಸರ್ ಬಳಕೆಗೆ ಹೆಚ್ಚು ಒತ್ತನ್ನು ಸಾರ್ವಜನಿಕರು ನೀಡಬೇಕು ,ಸುಖಾಸುಮ್ಮನೆ ಮನೆಯಿಂದ ಯಾರು ಆಚೆ ಬರಬಾರದು ಎಂದರು. ಹಾಗೂ ತುಮಕೂರು ಜಿಲ್ಲಾಡಳಿತ, ಪಾಲಿಕೆ ಹಾಗೂ ಪೊಲೀಸ್ ಇಲಾಖೆ ವತಿಯಿಂದ ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ಸಾಕಷ್ಟು ಪ್ರಯತ್ನ ಮಾಡುತ್ತಿದ್ದೇವೆ ಇದಕ್ಕೆ ಸಾರ್ವಜನಿಕರು ಸಹ ಸ್ಪಂದಿಸಬೇಕು ಮಾಸ್ಕ್ ದರಿಸದೆ ಇರುವವರಿಗೆ .250 ರೂ ದಂಡವನ್ನು ವಿಧಿಸಲಾಗುವುದು . ತೆರೆದ ಆವರಣದಲ್ಲಿ 200 ಕಿಂತ ಹೆಚ್ಚು ಜನ ಭಾಗವಹಿಸಿ ಮದುವೆ ಕಾರ್ಯ ನಡೆಸಬಾರದು ಇನ್ನು ಒಳಾಂಗಣ ದಲ್ಲಿ ನೂರು ಜನಕ್ಕಿಂತ ಹೆಚ್ಚು ಜನ ಭಾಗವಹಿಸಿ ಮದುವೆ ಕಾರ್ಯಗಳಲ್ಲಿ ಭಾಗವಹಿಸಬಾರದು ಹಾಗೇನಾದರೂ ಕಂಡುಬಂದಲ್ಲಿ ಕೂಡಲೇ ಅಂಥವರ ವಿರುದ್ಧ ದಂಡ ವಿಧಿಸಲಾಗುವುದು ಇದಕ್ಕಾಗಿ ಟಾಸ್ಕ್ ಫೋರ್ಸ್ ರಚಿಸಲಾಗುವುದು ಎಂದರು.
ಇತ್ತೀಚಿನ ದಿನಗಳಲ್ಲಿ ತುಮಕೂರು ನಗರದಲ್ಲಿ ಕೊರನಾ ಎರಡನೆಯ ಅಲೆ ತೀವ್ರಗತಿಯಲ್ಲಿ ಹರಡುತ್ತಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆ ಆಗುತ್ತಿರುವುದು ಎಲ್ಲರನ್ನೂ ಆತಂಕಕ್ಕೀಡುಮಾಡಿದೆ ಎಲ್ಲರೂ ಸರ್ಕಾರದ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಹಾಗೇನಾದರೂ ಪಾಲಿಸದಿದ್ದಲ್ಲಿ ಮುಂದೆ ಕಾನೂನು ರೀತ್ಯಾ ಕ್ರಮಗಳನ್ನು ಜರುಗಿಸಲಾಗುವುದು ಎಂದು ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಕೋನವಂಶಿಕೃಷ್ಣ ರವರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಇನ್ನು ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಚನಬಸಪ್ಪ, ಎ ಸಿ ಅಜಯ್ ,ತಾಸಿಲ್ದಾರ್ ಮೋಹನ್ ಕುಮಾರ್, ಪಾಲಿಕೆ ಆರೋಗ್ಯ ಅಧಿಕಾರಿ ಎನ್ ಪಿ ರಕ್ಷಿತ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ,ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಿರಿಯ ಅಧಿಕಾರಿಗಳು ಸಾಥ್ ನೀಡಿದರು