ತುಮಕೂರು ಜಿಲ್ಲಾ ಕಾರಾಗೃಹ ಅಧೀಕ್ಷಕಿ ಶಾಂತಮ್ಮ ಎತ್ತಂಗಡಿ.
ತುಮಕೂರು-ತುಮಕೂರು ಜಿಲ್ಲಾ ಕಾರಾಗೃಹ ಅಧೀಕ್ಷಕರಾಗಿದ್ದ ಶಾಂತಮ್ಮ ರವರನ್ನು ಸರ್ಕಾರ ಎತ್ತಂಗಡಿ ಮಾಡಿದೆ.
ಕಳೆದ ಕೆಲವು ದಿನಗಳ ಹಿಂದೆ ತುಮಕೂರು ಜಿಲ್ಲಾ ಕೇಂದ್ರ ಕಾರ್ಯದಲ್ಲಿ ಕೆಲ ಕೈದಿಗಳು ಜಿಲ್ಲಾ ಬಂದಿಖಾನೆ ಅಧೀಕ್ಷಕರಾಗಿದ್ದ ಶಾಂತಮ್ಮ ರವರ ವಿರುದ್ಧ ಸಾಕಷ್ಟು ಆರೋಪಗಳನ್ನು ಮಾಡುವ ಮೂಲಕ ಜೈಲಿನಲ್ಲಿ ನಡೆಯುತ್ತಿದ್ದ ಅಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ದೂರು ಸಲ್ಲಿಸಿದ್ದರು.
ಇದಕ್ಕೆ ಸಂಬಂಧಿಸಿದಂತೆ ಸರ್ಕಾರ ಸಹ ಕೆಲಸ ಸಿಬ್ಬಂದಿಗಳನ್ನು ಬೇರೆ ವರ್ಗಾವಣೆ ಮಾಡಿ ಶಾಂತಮ್ಮ ರವರ ಮೇಲೆ ಯಾವುದೇ ಕ್ರಮ ಕೈಗೊಳ್ಳದೆ ಸುಮ್ಮನಾಗಿತ್ತು .
ಆದರೆ ಇತ್ತೀಚೆಗೆ ತುಮಕೂರಿಗೆ ಆಗಮಿಸಿದ್ದ ಗೃಹ ಸಚಿವರನ್ನ ಭೇಟಿ ಮಾಡಿದ ಮಾಜಿ ಸಚಿವ ಸೋಗಡು ಶಿವಣ್ಣ ರವರು ಸಹ ಜೈಲಿನಲ್ಲಿ ನಡೆಯುತ್ತಿದ್ದ ಅಕ್ರಮಗಳ ಬಗ್ಗೆ ಗೃಹ ಸಚಿವರ ಗಮನ ಸೆಳೆಯುವಲ್ಲಿ ಸಫಲರಾಗಿದ್ದರು.
ಆದರೆ ಕೊನೆಗಳಿಗೆಯಲ್ಲಿ ತುಮಕೂರು ಜಿಲ್ಲಾ ಕಾರಾಗೃಹದ ಅಧೀಕ್ಷಕರಾಗಿದ್ದ ಶಾಂತಮ್ಮ ರವರನ್ನ ಆಡಳಿತದ ಹಿತದೃಷ್ಟಿ ಹಾಗೂ ಶಿಸ್ತು ಕ್ರಮದ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಶಿವಮೊಗ್ಗದ ಮಹಿಳಾ ಕೇಂದ್ರ ಕರಾಗೃಹಕ್ಕೆ ವರ್ಗಾವಣೆ ಮಾಡಿ ಆದೇಶಿಸಿದೆ.
ಇನ್ನು ಶಾಂತಮ್ಮ ರವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಬಳ್ಳಾರಿಯ ಕೇಂದ್ರ ಕಾರಾಗೃಹದಲ್ಲಿ ಸಹಾಯಕ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಮಲ್ಲಿಕಾರ್ಜುನ ಎಸ್ ಮಾಳಿ ರವರನ್ನು ತುಮಕೂರು ಜಿಲ್ಲಾ ಕಾರಾಗೃಹಕ್ಕೆ ನೇಮಕ ಮಾಡಿದೆ.