ಇಂದಿನಿಂದ ಎರಡು ದಿನಗಳ ಕಾಲ ತುಮಕೂರು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಡಿಎಆರ್ ಮೈದಾನದಲ್ಲಿ ವಾರ್ಷಿಕ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದ್ದು. ಕ್ರೀಡಾಕೂಟವನ್ನು ತುಮಕೂರು ಜಿಲ್ಲಾಧಿಕಾರಿಗಳಾದ ವೈ ಎಸ್ ಪಾಟೀಲ್ ರವರು ಉದ್ಘಾಟಿಸಿದರು.
ಇನ್ನು ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು ವೈ ಎಸ್ ಪಾಟೀಲ್ರವರು ಇಲಾಖೆಗಳಲ್ಲಿ ಅತಿ ಶಿಸ್ತುಬದ್ಧ ಇಲಾಖೆಯೆಂದರೆ ಅದು ಪೊಲೀಸ್ ಇಲಾಖೆ ಯಾಗಿದೆ. ಇನ್ನು ಸಾರ್ವಜನಿಕರಿಗೆ ಜನಸ್ನೇಹಿಯಾಗಿ ಕೆಲಸ ನಿರ್ವಹಿಸುವಲ್ಲಿ ಜನಸ್ನೇಹಿ ಹಾಗೂ ಶಿಸ್ತುಬದ್ಧವಾಗಿ ಕಾರ್ಯನಿರ್ವಹಿಸುವ ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿಗಳಿಗೆ ಈ ತರಹದ ಕ್ರೀಡಾಕೂಟಗಳು ಅತ್ಯವಶ್ಯಕವಾಗಿದ್ದು ಎಲ್ಲರೂ ಇಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸಿದಾಗ ಮನಸ್ಸಿನಲ್ಲಿರುವ ಒತ್ತಡ ದೂರಗೊಂಡು ಮನಸ್ಸಿನಲ್ಲಿ ಆತ್ಮಸ್ಥೈರ್ಯ ಹಾಗೂ ಸದೃಢ ದೇಹ ಹಾಗೂ ಆರೋಗ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಕೋವಿಡ್ ಸಂದರ್ಭದಲ್ಲಿ ಕೆಲಸ ನಿರ್ವಹಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಇಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ಇಲಾಖೆಯಲ್ಲಿರುವ ಸಿಬ್ಬಂದಿ ಗಳಲ್ಲಿ ಇರುವ ಮಾನಸಿಕ ಒತ್ತಡ ದೂರಗೊಂಡು ಅಧಿಕಾರಿಗಳು ಹಾಗೂ ಸಿಬ್ಬಂದಿ ಗಳಲ್ಲಿ ಕೆಲಸ ನಿರ್ವಹಿಸುವ ಆತ್ಮಸ್ಥೈರ್ಯ ಮತ್ತಷ್ಟು ಹೆಚ್ಚಾಗುತ್ತದೆ ಎಂದರು.
ಇನ್ನು ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾಕ್ಟರ್ ಕೆ ವಂಶಿಕೃಷ್ಣ, ತುಮಕೂರು ಜಿಲ್ಲಾ ಪೊಲೀಸ್ ಉಪಾಧೀಕ್ಷಕರು ಉದೇಶ್, ಸೇರಿದಂತೆ ಹಿರಿಯ ಅಧಿಕಾರಿಗಳು, ವಿವಿಧ ಠಾಣೆಯ ಇನ್ಸ್ಪೆಕ್ಟರ್ ಗಳು ಹಾಗೂ ಸಿಬ್ಬಂದಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.