ತುಮಕೂರು ಹಿರೇಹಳ್ಳಿ ಮಹಿಳೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ , ನೊಂದ ಕುಟುಂಬಕ್ಕೆ ನ್ಯಾಯ ಸಿಗಲಿ _ಶಾಸಕ ಡಿ.ಸಿ ಗೌರಿಶಂಕರ್.
ತುಮಕೂರು_ತುಮಕೂರು ತಾಲೂಕಿನ ಹಿರೇಹಳ್ಳಿ ಬಳಿ ಕಳೆದ 8 ತಿಂಗಳ ಹಿಂದೆ ಮಹಿಳೆಯ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಸಾಕ್ಷಿ ಸಿಗದ ಕಾರಣ ಪ್ರಕರಣ ಬೇಧಿಸಲು ಪೊಲೀಸರಿಗೆ ಸವಾಲಾಗಿದ್ದು ಇದಕ್ಕೆ ಇದಕ್ಕೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯೆ ನೀಡಿದ್ದು ಶಾಸಕ ಡಿ ಸಿ ಗೌರಿಶಂಕರ್ ರವರು.ಕಳೆದ ಎಂಟು ತಿಂಗಳ ಹಿಂದೆ ಮಹಿಳೆಯ ಮೇಲೆ ನಡೆದಿರುವ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಶೀಘ್ರ ಬಂಧಿಸಿ ನೊಂದ ಕುಟುಂಬಕ್ಕೆ ನ್ಯಾಯ ಸಿಗಲು ಕ್ರಮಕೈಗೊಳ್ಳಬೇಕು ಎಂದು ರಾಜ್ಯದ ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಅರಗ ಜ್ಞಾನೇಂದ್ರ ರವರಿಗೆ ಮನವಿ ಮಾಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವರು ತುಮಕೂರು ಜಿಲ್ಲೆಯ ಉಸ್ತುವಾರಿಯನ್ನು ತೆಗೆದುಕೊಂಡಿದ್ದಾರೆ ಹಾಗಾಗಿ ಈಗಲಾದರೂ ಸಂಬಂಧಪಟ್ಟ ಇಲಾಖೆಗೆ ನಿರ್ದೇಶನ ನೀಡಿ ಆರೋಪಿಗಳನ್ನು ಪತ್ತೆಹಚ್ಚಿ ನೊಂದ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕೆಂದು ಗೃಹಸಚಿವರಿಗೆ ಮನವಿ ಮಾಡಿದ್ದಾರೆ.
ವರದಿ _ಮಾರುತಿ ಪ್ರಸಾದ್ ತುಮಕೂರು