ತುಮಕೂರು ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ನಿರೀಕ್ಷೆಯಂತೆ ನಯಾಜ್ ಅಹಮದ್ ರವರು ಆಯ್ಕೆಯಾಗುವ ಮೂಲಕ ತಮ್ಮ ಗೆಲುವಿನ ನಾಗಾಲೋಟ ಮುಂದುವರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತುಮಕೂರು ಮಹಾನಗರ ಪಾಲಿಕೆಯ ಮೇಯರ್ ಕೃಷ್ಣಪ್ಪ ಹಾಗೂ ಉಪಮೇಯರ್ ರವರ ಅಧ್ಯಕ್ಷತೆಯಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಎರಡು, ಬಿಜೆಪಿ-ಜೆಡಿಎಸ್ ಸದಸ್ಯರು ತಲಾ ಒಂದೊಂದು ಸ್ಥಾಯಿ ಸಮಿತಿಗೆ ಆಯ್ಕೆಯಾಗಿದ್ದಾರೆ. ಮೇಯರ್-ಉಪಮೇಯರ್ ಹಾಗೂ 35 ಸದಸ್ಯರಾದ ಸಹಕಾರದಿಂದ ತಾವು ಗೆದ್ದಿದ್ದು ತುಮಕೂರು ಮಹಾನಗರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನ ನಡೆಸುವುದಾಗಿ ತಿಳಿಸಿದರು ತುಮಕೂರು ಸ್ಮಾರ್ಟ್ ಸಿಟಿ ಆಯ್ಕೆಯಾಗಿದ್ದು ಸ್ವಚ್ಛತೆ ಬಗ್ಗೆ ಗಮನ ಹರಿಸಲಾಗುವುದು ಎಂದರು.
ಇನ್ನು ತಾವು ಮೂರುಬಾರಿ ಪಾಲಿಕೆ ಚುನಾವಣೆಯಲ್ಲಿ ಗೆದ್ದಿದ್ದು ಎಂಟು ವರ್ಷಗಲು ತಾವು ವಿವಿಧ ಸ್ಥಾಯಿ ಸಮಿತಿಯ ಅಧ್ಯಕ್ಷ ಸ್ಥಾನದಲ್ಲಿ ಆಯ್ಕೆಯಾಗಿ ಪ್ರಾಮಾಣಿಕವಾಗಿ ಕಾರ್ಯ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿರುತ್ತೇನೆ.ಇದುವರೆಗೂ ತಮಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲಾ ಸದಸ್ಯರಿಗೂ ಅಭಿನಂದನೆಗಳನ್ನು ಸಲ್ಲಿಸಿದರು ಹಾಗೂ ತುಮಕೂರು ಮಹಾನಗರದಲ್ಲಿ ಸ್ಮಾರ್ಟ್ ಸಿಟಿಯ ಹಲವು ಕಾಮಗಾರಿಗಳು ನಡೆಯುತ್ತಿತ್ತು ತುಮಕೂರು ನಗರದ ಜನತೆಗಳು ರೋಸಿಹೋಗಿದ್ದಾರೆ.
ಈಗ ತುಮಕೂರು ಸ್ಮಾರ್ಟ್ ಸಿಟಿ ಬದಲು ಡರ್ಟಿ ಸಿಟಿ ಯಾಗಿದೆ ಎಂದರು.ಮುಂದಿನ ದಿನಗಳಲ್ಲಿ ಎಲ್ಲ 35 ಸದಸ್ಯರುಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ತುಮಕೂರು ನಗರದಲ್ಲಿ ಸ್ವಚ್ಛತೆ ಬಗ್ಗೆ ಗಮನ ಹರಿಸಲಾಗುವುದು ಹಾಗೂ ವಿವಿಧ ಆಸ್ಪತ್ರೆಗಳಿಗೆ ಭೇಟಿ ನೀಡಿ ಸ್ವಚ್ಛತೆ ಹಾಗೂ ಕೋವಿಡ್ ಸಾಂಕ್ರಾಮಿಕ ರೋಗ ತಡೆಯುವುದರ ಸಂಬಂಧ ಕೂಡಲೇ ಕ್ರಮವಹಿಸಲಾಗುವುದು ಎಂದರು.
ತುಮಕೂರು ನಗರದಲ್ಲಿ ಹಂದಿ ನಾಯಿ ಹಾವಳಿ ಹೆಚ್ಚಾಗಿದ್ದು ಅವುಗಳಿಗೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ಕಾನೂನು ರೀತಿ ಕ್ರಮ ವಹಿಸಲಾಗುವುದು ಎಂದರು.