ತುಮಕೂರು ಜಿಲ್ಲಾ ಪೊಲೀಸ್ ತುಮಕೂರು ನಗರ ಉಪ ವಿಭಾಗದ ವತಿಯಿಂದ ಜನಸಂಪರ್ಕ ಸಭೆ ನಡೆಯಿತು. ಈ ಸಮಯದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮಾತನಾಡುತ್ತಾ, ತುಮಕೂರು ಜಿಲ್ಲಾ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಸದಾಕಾಲ ಮುಕ್ತವಾಗಿದ್ದು ತಮ್ಮಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಲು ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದು ಮುಂದಿನ ದಿನಗಳಲ್ಲಿ ಹಂತಹಂತವಾಗಿ ಸಾರ್ವಜನಿಕರಿಗೆ ಮತ್ತಷ್ಟು ಹತ್ತಿರವಾಗುವ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಸಾರ್ವಜನಿಕರು ತಮ್ಮಲ್ಲಿ ಇರುವ ಅಥವಾ ಬಡಾವಣೆಗಳ ಇರುವ ತಮ್ಮ ಸಮಸ್ಯೆಗಳನ್ನು ಹಂಚಿಕೊಳ್ಳಲು ಸಹಕಾರಿಯಾದ ಸಾರ್ವಜನಿಕರ ಸಭೆಯಲ್ಲಿ ತುಮಕೂರು ನಗರದ ಸಾರ್ವಜನಿಕರು ಟ್ರಾಫಿಕ್ ಸಮಸ್ಯೆ, ಸೈಬರ್ ಕ್ರೈಂ, ಸರಗಳ್ಳತನ, ಮಾದಕ ವಸ್ತುಗಳ ಮಾರಾಟ ಹಾಗೂ ಇನ್ನೂ ಅನೇಕ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ತಿಳಿಸುತ್ತಿದ್ದರು, ಇದಕ್ಕೆ ಪ್ರತಿಕ್ರಿಯಿಸಿದ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ವಂಶಿಕೃಷ್ಣ ರವರು ಮಾತನಾಡಿ ತುಮಕೂರು ಜಿಲ್ಲಾ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಜನಸ್ನೇಹಿಯಾಗಿ ಕೆಲಸ ನಿರ್ವಹಿಸುತ್ತಿದ್ದು ಜಿಲ್ಲಾ ಪೊಲೀಸ್ ಸಿಬ್ಬಂದಿಗಳು ತಮ್ಮ ಸೇವೆಗೆ ಸಿದ್ಧರಿರುತ್ತಾರೆ ತಮ್ಮಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಲು ಹಾಗೂ ಸಾರ್ವಜನಿಕರು ಪೊಲೀಸ್ ಇಲಾಖೆ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಲು ಅನೇಕ ಯೋಜನೆಗಳನ್ನು ರೂಪಿಸಿದ್ದು ಅದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ನೂತನ ಬೀಟ್ ವ್ಯವಸ್ಥೆಯ ಲಾಂಛನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಬಿಡುಗಡೆಗೊಳಿಸಿದರು. ಇದೇ ಸಂದರ್ಭದಲ್ಲಿ ಎಲ್.ಹೆಚ್.ಎಂ.ಎಸ್. (ಲಾಕ್ಡ್ ಹೌಸ್ ಮಾನಿಟರಿಂಗ್ ಸಿಸ್ಟಂ), ಇ.ಆರ್.ಎಂ.ಎಸ್. (ಎಮರ್ಜೆನ್ಸಿ ರೆಸ್ಪಾನ್ಸ್ ಸಪೋರ್ಟ್ ಸಿಸ್ಟಂ), ಈ-ಲಾಸ್ಟ್ ಆಪ್ ಸೇರಿದಂತೆ ಜಿಲ್ಲೆಯಲ್ಲಿರುವ ಅನೇಕ ಸೌಲಭ್ಯಗಳನ್ನು ಹೊರತಂದಿದ್ದು, ಇವುಗಳನ್ನು ಸದುಪಯೋಗ ಪಡಿಸಿಕೊಂಡು ಪೊಲೀಸ್ ಇಲಾಖೆಯೊಂದಿಗೆ ಸಾರ್ವಜನಿಕರು ಸಹಕರಿಸಬೇಕೆಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ಉಪಾಧೀಕ್ಷಕರಾದ ಉದೇಶ್, ಡಿ.ವೈ.ಎಸ್.ಪಿ. ಶ್ರೀನಿವಾಸ್, ವಿವಿಧ ಠಾಣೆಯ ವೃತ್ತ ನಿರೀಕ್ಷಕರು, ಉಪ-ನಿರೀಕ್ಷಕರು, ನಿರೀಕ್ಷಕರುಗಳು, ಸಂಚಾರಿ ಪೊಲೀಸರು, ಪಾಲಿಕೆಯ ಸದಸ್ಯರುಗಳು, ನಗರದ ಹಲವು ಬಡಾವಣೆಗಳ ಮುಖಂಡರುಗಳು, ಸಮಾಜ ಸೇವಕರು, ಸಾರ್ವಜನಿಕರು, ಭಾಗವಹಿಸಿದ್ದರು.