ಮಾಜಿ ಶಾಸಕ ಸುರೇಶ್ ಗೌಡ ವಿರುದ್ಧ ಹರಿಹಾಯ್ದ ಹಾಲಿ ಶಾಸಕ ಡಿ.ಸಿ ಗೌರಿಶಂಕರ್.

ಮಾಜಿ ಶಾಸಕ ಸುರೇಶ್ ಗೌಡ ವಿರುದ್ಧ ಹರಿಹಾಯ್ದ ಹಾಲಿ ಶಾಸಕ ಡಿ.ಸಿ ಗೌರಿಶಂಕರ್.

ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಗೌರಿಶಂಕರ್ ಹಾಗೂ ಮಾಜಿ ಶಾಸಕ ಸುರೇಶಗೌಡರವರ ನಡುವಿನ ಕದನ ಮುಂದುವರೆದಿದೆ ಬಹಳ ಹಿಂದಿನಿಂದಲೂ ಇಬ್ಬರು ನಾಯಕರು ಪರಸ್ಪರ ಮಾತಿನ ಸಮರ ನಡೆಸುತ್ತಾ ಸದಾ ಸುದ್ದಿಯಲ್ಲಿದ್ದಾರೆ ಇದೀಗ ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಅವರು ಸುರೇಶ್ ಗೌಡ ರವರ ಮೇಲೆ ಹರಿಹಾಯ್ದಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಗೂಳೂರು, ಹೆಬ್ಬೂರು ಏತನೀರಾವರಿ ಯೋಜನೆ ಅವೈಜ್ಞಾನಿಕ ಎಂದು ಸಚಿವ ಮಾಧುಸ್ವಾಮಿ ಹೇಳಿಕೆ ನೀಡಿದ ಬೆನ್ನಲ್ಲೇ .ಆ ಕ್ಷೇತ್ರದ ಶಾಸಕ ಗೌರಿಶಂಕರ್ ಸಚಿವರ ಮಾತು ನೂರಕ್ಕೆ ನೂರರಷ್ಟು ಸತ್ಯ ನಾನು ಎರಡು ವರ್ಷದ ಹಿಂದೆಯೇ ಏತನೀರಾವರಿ ಯೋಜನೆ ಅವೈಜ್ಞಾನಿಕ ಎಂದು ಹೇಳುವ ಮೂಲಕ ಮಾಜಿ ಶಾಸಕ ಸುರೇಶ್ ಗೌಡರತ್ತ .

ಬೆಟ್ಟು ಮಾಡಿದ್ದಾರೆ.

 

ಸುರೇಶಗೌಡ ಶಾಸಕರಾಗಿದ್ದ ಸಮಯದಲ್ಲಿ ಯೋಜನೆ ಜಾರಿಯಾಗಿದೆ ಇದರ ವ್ಯಾಪ್ತಿಯಲ್ಲಿ ಬರುವ 49 ಕೆರೆಗಳನ್ನು ಭರ್ತಿಮಾಡಲು 972 ಎಂಸಿಎಫ್ ಟಿ ನೀರು ಬೇಕಾಗಿದೆ ಆದರೆ ಕೇವಲ 243. 37 ಎಂಸಿಎಫ್ಟಿ ಯಷ್ಟು ನೀರು ಹಂಚಿಕೆ ಮಾಡಿಸಿದ್ದಾರೆ.

 

ಇಷ್ಟು ನೀರಿನಲ್ಲಿ ಕೆರೆಗಳಿಗೆ ಹರಿಸಲು ಸಾಧ್ಯವೇ ಎಂಬುದು ಗೊತ್ತಿರಲಿಲ್ಲವೇ…..? ಯೋಜನೆ ಜಾರಿಯಾದ ನಂತರ ಹಿಂದಿನ ಶಾಸಕರ ಅವಧಿಯಲ್ಲಿ 581 ಎಂಸಿಎಟಿ ನೀರು ಹರಿಸಲಾಗಿದೆ . ನಾನು ಶಾಸಕನಾದ ನಂತರ ಈವರೆಗೆ 639 ಎಂಸಿಎಫ್ಟ್ ನೀರು ಹರಿದಿದೆ ಯಾರ ಅವಧಿಯಲ್ಲಿ ಹೆಚ್ಚು ನೀರು ತುಂಬಿಸಲಾಗಿದೆ ಯಾರು ಸುಳ್ಳು ಹೇಳುತ್ತಿದ್ದಾರೆ ಎಂದು ಕ್ಷೇತ್ರದ ಜನರು ನಿರ್ಧರಿಸಬೇಕು ಎಂದರು.

 

ಅಗತ್ಯ ಪ್ರಮಾಣದಲ್ಲಿ ನೀರು ಹಂಚಿಕೆಯಾಗದೆ 22 ಕೆರೆಗಳಿಗೆ ಮಾತ್ರ ನೀರು ಹರಿಸಲಾಗುತ್ತಿದೆ ಉಳಿದ ಕೆರೆಗಳಿಗೆ ಪೈಪ್ ಲೈನ್ ಕಾಮಗಾರಿ ಮಾಡಿದರು ನೀರು ಕೊಟ್ಟಿಲ್ಲ ಹೆಬ್ಬೂರು ಕೆರೆಗೆ ನೀರು ಬಿಡಲು ಸಾಧ್ಯವೇ ಆಗಿಲ್ಲ ಈ ಕಾರಣಕ್ಕೆ 52 ಕೋಟಿ ರೂಪಾಯಿ ವೆಚ್ಚದಲ್ಲಿ ತಂದ ಯೋಜನೆ ಅವೈಜ್ಞಾನಿಕವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ ಸಿ ಮಧುಸ್ವಾಮಿ ಹೇಳಿರುವುದು ಸಚಿವರು ಮಾಜಿ ಶಾಸಕರ ನಡುವಿನ ತಿಕ್ಕಾಟ ಆಂತರಿಕ ಸಮಸ್ಯೆ ಮುಂದಿಟ್ಟುಕೊಂಡು ಕ್ಷೇತ್ರದ ಜನತೆಗೆ ಅನ್ಯಾಯ ಮಾಡಬೇಡಿ ಎಂದರು.

 

ಏತ ನೀರಾವರಿ ಯೋಜನೆಗೆ ಒಳಪಟ್ಟಿರುವ 49 ಕೆರೆಗಳನ್ನು ತುಂಬಿಸಲು 972 ಎಂಸಿಎಫ್ ಟಿ ನೀರನ್ನು ಹೇಮಾವತಿ ಯೋಜನೆಯಲ್ಲಿ ಹಂಚಿಕೆ ಮಾಡಿಸಿಕೊಟ್ಟರೆ ಸುರೇಶ್ ಗೌಡ ರವರ ವಿರುದ್ಧ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಇದು ಸಾಧ್ಯವಾಗದಿದ್ದರೆ ತಾವು ಕ್ಷೇತ್ರ ಬಿಟ್ಟು ಹೋಗುತ್ತೀರಾ ಎಂದು ಮಾಜಿ ಶಾಸಕ ಸುರೇಶ್ ಗೌಡ ರವರಿಗೆ ಹಾಲಿ ಶಾಸಕ ಗೌರಿಶಂಕರ್ ಸವಾಲು ಹಾಕಿದ್ದಾರೆ.

 

ಗೂಳೂರು ಏತ ನೀರಾವರಿ ಯೋಜನೆ ಜಾರಿಯಾದ ನಂತರ ಈವರೆಗೆ ನೀರು ಪಂಪ್ ಮಾಡಿದ್ದ ವಿದ್ಯುತ್ ಬಿಲ್ 2.7 ಕೋಟಿ ರೂಪಾಯಿ ಉಳಿಸಿಕೊಳ್ಳಲಾಗಿದೆ .ವಿದ್ಯುತ್ ಬಿಲ್ ಪಾವತಿಸಲು ನೀರಾವರಿ ಇಲಾಖೆಗೆ ಸಾಧ್ಯವಾಗಿಲ್ಲ ಹೀಗಿರುವಾಗ ಎಷ್ಟರಮಟ್ಟಿಗೆ ಯೋಜನೆ ಉಪಯೋಗವಾಗಲಿದೆ ಯೋಚಿಸಿ ಎಂದರು.

 

 

ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ರಾಮಚಂದ್ರಯ್ಯ, ಹಾಲನೂರು ಅನಂತಕುಮಾರ್, ಬೆಳಗುಂಬ ವೆಂಕಟೇಶ್, ಹಿರೇಹಳ್ಳಿ ಮಹೇಶ್ ,ವಿಜಯಕುಮಾರ್ ಸೇರಿದಂತೆ ಇತರರು ಹಾಜರಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version