ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಸ್ಮಾರ್ಟ್ ಸಿಟಿ ಯೋಜನೆ ಕೂಡ ಒಂದು. ಇನ್ನೂ ಹಲವು ಮಹತ್ತರ ಆಸೆಗಳನ್ನು ಇಟ್ಟುಕೊಂಡಿದ್ದ ಸ್ಮಾರ್ಟ್ ಸಿಟಿ ಜನರಲ್ಲಿ ಈಗ ಬೇರೆ ತರಹದ ಆಲೋಚನೆಗಳು ಚರ್ಚೆಗಳು ನಡೆಯತೊಡಗಿವೆ.
ರಾಜ್ಯದ ಕೆಲವು ಜಿಲ್ಲೆಗಳನ್ನು ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಆಯ್ಕೆ ಮಾಡಿದ್ದು ಇದರಲ್ಲಿ ತುಮಕೂರು ನಗರ ಕೂಡ ಒಂದಾಗಿದೆ ಆದರೆ ಕಳೆದ ಒಂದುವರೆ ವರ್ಷದಿಂದ ನಡೆಯುತ್ತಿರುವ ಕಾಮಗಾರಿಗಳಲ್ಲಿ ಹಲವು ಗೊಂದಲಗಳು, ಕಳಪೆ ಕಾಮಗಾರಿಗಳು, ಸ್ಮಾರ್ಟ್ ಸಿಟಿ ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳು ಹೊಂದಾಣಿಕೆ ಇಲ್ಲದೆ ಹಲವು ಕಾಮಗಾರಿಗಳು ಕುಂಟುತ್ತ ಸಾಗಿರುವ ಪರಿಣಾಮ ತುಮಕೂರು ನಗರದ ಜನತೆ ಇಂದು ಸ್ಮಾರ್ಟ್ ಸಿಟಿ ಹಾಗೂ ಮಹಾನಗರ ಪಾಲಿಕೆಗೆ ಹಿಡಿಶಾಪ ಹಾಕುವ ಸ್ಥಿತಿ ನಿರ್ಮಾಣವಾಗಿದೆ.
ಇದಕ್ಕೆ ಪುಷ್ಟಿ ನೀಡುವಂತೆ ತುಮಕೂರಿನ ಪ್ರತಿಷ್ಠಿತ ರಸ್ತೆಗಳಲ್ಲಿ ಒಂದಾದ ತುಮಕೂರಿನ ಮಹಾತ್ಮ ಗಾಂಧಿ ರಸ್ತೆ ಕೂಡ ಒಂದು ಹಲವು ವಾಣಿಜ್ಯ-ವ್ಯಾಪಾರ ವಹಿವಾಟಿಗೆ ಹೆಸರುವಾಸಿಯಾಗಿದ್ದು ಎಲ್ಲರಿಗೂ ಗೊತ್ತಿರುವ ವಿಷಯ ಆದರೆ ಮಹಾತ್ಮ ಗಾಂಧಿ ರಸ್ತೆಯಿಂದ ಕೆಆರ್ ಬಡಾವಣೆಯ ಕಾರ್ಯಪ್ಪ ರಸ್ತೆಗೆ ಸಂಪರ್ಕಿಸುವ ನಾಲ್ಕು ಪ್ರಮುಖ ಅಡ್ಡ ರಸ್ತೆಗಳು ಇದ್ದು ಎಲ್ಲ ರಸ್ತೆಗಳನ್ನು ಒಂದೊಂದು ಕಾಮಗಾರಿಗಳನ್ನು ಕೈಗೆತ್ತಿಕೊಂಡಿವೆ.
ಆದರೆ ಈ ಕಾಮಗಾರಿಗಳು ಸದ್ಯಕ್ಕೆ ಮುಗಿಯುವ ಯಾವ ಲಕ್ಷಣಗಳು ಕಾಣುತ್ತಿಲ್ಲ ಇದಕ್ಕೆ ಪುಷ್ಟಿ ನೀಡುವಂತೆ ತುಮಕೂರಿನ ಎಂ ಜಿ ರಸ್ತೆಯ ನಾಲ್ಕನೇ ಅಡ್ಡರಸ್ತೆಯಲ್ಲಿ ಚರಂಡಿ ನಿರ್ಮಾಣ ಕಾಮಗಾರಿ ಕೈಗೆತ್ತಿಕೊoಡು ತಿಂಗಳುಗಳೇ ಕಳೆದರೂ ಇನ್ನೂ ಚರಂಡಿ ಕಾಮಗಾರಿಗಳು ಮುಗಿಯದೆ ಅರ್ಧಕ್ಕೆ ನಿಲ್ಲುವ ಮೂಲಕ ಸಾರ್ವಜನಿಕರ ಸಂಚಾರಕ್ಕೆ ಹಾಗೂ ಕಟ್ಟಡ ಮಾಲೀಕರಿಗೆ ತೀವ್ರ ಸಂಕಷ್ಟ ಎದುರಾಗಿದೆ.
ಮಳೆಗಾಲ ಆರಂಭವಾಗಿರುವುದರಿಂದ ಅರ್ಧಕ್ಕೆ ನಿಂತಿರುವ ಕಾಮಗಾರಿಯಿಂದ ನೀರು ಶೇಖರಣೆಗೊಂಡು ಮುಂದೆ ಹರಿಯಲಾಗದೆ ಕಟ್ಟಡ ಮಾಲೀಕರಿಗೆ ಕಿರಿಕಿರಿ ಉಂಟಾಗುತ್ತಿದ್ದು ಪ್ರತಿದಿನ ಈ ಭಾಗದ ರಸ್ತೆಯಲ್ಲಿ ಸಂಚರಿಸುವ ವಾಹನ ಚಾಲಕರು ಗಾಯಗೊಂಡ ಘಟನೆಗಳು ಸಹ ಅಧಿಕಾರಿಗಳನ್ನು ಕಾಮಗಾರಿಯನ್ನು ಅರ್ಧಕ್ಕೆ ಮೊಟಕುಗೊಳಿಸಿ ತಮಗೂ ಇದಕ್ಕೂ ಸಂಬಂಧವೇ ಇಲ್ಲದಂತೆ ವರ್ತಿಸುತ್ತಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಸಾರ್ವಜನಿಕರು ಹಾಗೂ ಪಾಲಿಕೆ ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕುತ್ತಾರೆ ಪರಿತಪಿಸುತ್ತಿದ್ದಾರೆ.
ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತು ಪರಿಹಾರ ಕಂಡುಕೊಳ್ಳದಿದ್ದರೆ ಮತ್ತಷ್ಟು ಸಮಸ್ಯೆ ಉಲ್ಬಣ ಕೊಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲ.