ತುಮಕೂರು ವಿಶ್ವವಿದ್ಯಾನಿಲಯದ 14ನೇ ವಾರ್ಷಿಕ ಘಟಿಕೋತ್ಸವ ದಿನಾಂಕ 5/3/ 21ರ ಶುಕ್ರವಾರ ಬೆಳಗ್ಗೆ 11 ಗಂಟೆಗೆ ವಿಶ್ವವಿದ್ಯಾನಿಲಯದ ಡಾಕ್ಟರ್ ಶ್ರೀಶ್ರೀಶ್ರೀ ಶಿವಕುಮಾರ ಮಹಾಸ್ವಾಮೀಜಿ ಸಭಾಂಗಣದಲ್ಲಿ ಜರುಗಲಿದೆ.
ಕರ್ನಾಟಕದ ಘನತೆವೆತ್ತ ರಾಜ್ಯಪಾಲರು ತುಮಕೂರು ವಿಶ್ವವಿದ್ಯಾನಿಲಯದ ಕುಲಾಧಿಪತಿಗಳು ಆಗಿರುವ ಸನ್ಮಾನ್ಯ ಶ್ರೀ ವಜುಬಾಯಿ ರೂಡಬಾಯಿ ವಾಲಾ ರವರು ಅಧ್ಯಕ್ಷತೆ ವಹಿಸಲಿದ್ದಾರೆ. ಡಾಕ್ಟರ್ ಸಿಎಂ ಅಶ್ವಥ್ ನಾರಾಯಣ ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಸಮಕುಲಾಧಿಪತಿಗಳೂ ಇವರು ಉಪಸ್ಥಿತರಿರುವರು.
ಪದ್ಮವಿಭೂಷಣ ಡಾಕ್ಟರ ಕೃಷ್ಣಸ್ವಾಮಿ ಕಸ್ತೂರಿರಂಗನ್ ,ಕುಲಾಧಿಪತಿಗಳು, ರಾಜಸ್ಥಾನ ಕೇಂದ್ರೀಯ ವಿಶ್ವವಿದ್ಯಾನಿಲಯ, ವಿಶ್ರಾಂತ ಅಧ್ಯಕ್ಷರು ಇಸ್ರೋ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ 20 20 ಮತ್ತು ಕರ್ನಾಟಕ ಜ್ಞಾನ ಆಯೋಗ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು ಘಟಿಕೋತ್ಸವ ಭಾಷಣ ಮಾಡಲಿರುವರು. ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಕರ್ನಲ್ ವೈ ಎಸ್ ಸಿದ್ದೇಗೌಡ ವಿಶ್ವವಿದ್ಯಾಲಯದ ವಾರ್ಷಿಕ ವರದಿ ಮಂಡಿಸಲಿರುವರು
ಈ ಬಾರಿಯ ಘಟಿಕೋತ್ಸವದಲ್ಲಿ ಒಟ್ಟು 9856 ಅಭ್ಯರ್ಥಿಗಳು ಪದವಿ ಸ್ವೀಕರಿಸಲು ಅರ್ಹರಾಗಿದ್ದಾರೆ ಇವರಲ್ಲಿ ಮೂರು ಅಭ್ಯರ್ಥಿಗಳು ಡಿಲೀಟ್ ಪದವಿ 142 ಅಭ್ಯರ್ಥಿಗಳು ಪಿಹೆಚ್ಡಿ, 1716 ಅಭ್ಯರ್ಥಿಗಳು ಸ್ನಾತಕೋತ್ತರ ಹಾಗೂ 7992 ಅಭ್ಯರ್ಥಿಗಳು ಸ್ನಾತಕ ಪದವಿ ಅರ್ಹರಾಗಿರುತ್ತಾರೆ. ವಿಶ್ವವಿದ್ಯಾನಿಲಯವು ಎಲ್ಲಾ ಸ್ನಾತಕೋತ್ತರ ಪದವಿಗಳಿಗೆ ತಲಾ ಐದು ರಾಂಕ್ ಗಳನ್ನು ಬಿಎ, ಬಿಎಸ್ಸಿ ,ಬಿಕಾಂ, ಬಿಬಿಎಂ ,ಬಿಎಸ್ಡಬ್ಲ್ಯೂ, ಬಿ ಎಸ್ ಡಬ್ಲ್ಯೂ ತಲಾ 10 ರಾಂಕ್ ಘೋಷಿಸಿದೆ.
ಬ್ಯಾಚುಲರ್ ಆಫ್ ಫೈನ್ ಆರ್ಟ್ಸ್ ಗೆ 1ರಾಂಕ್ , ವಿವೋಕ್ 3, ಬಿಪಿಎಡ್ 5 ರಾಂಕ್ ಹಾಗೂ ಬಿಎ ಇಂಟಿಗ್ರೇಟೆಡ್ ಕನ್ನಡ ಪಂಡಿತ 2ರಾಂಕ್ ಪೋಷಿಸಿದೆ. ಒಟ್ಟು 73 ವಿದ್ಯಾರ್ಥಿಗಳಿಗೆ 92 ಚಿನ್ನದ ಪದಕಗಳನ್ನು ಹಾಗೂ ಆರು ನಗದು ಬಹುಮಾನಗಳನ್ನು ವಿಶ್ವವಿದ್ಯಾನಿಲಯವು ಈ ಬಾರಿ ಘಟಿಕೋತ್ಸವದಲ್ಲಿ ಪ್ರದಾನ ಮಾಡಲಿದೆ.