ಪದವೀಧರರ ಸಮಸ್ಯೆಗೆ ಸ್ಪಂದಿಸಲು ಸದಾ ಸಿದ್ಧ – ಚಿದಾನಂದ ಎಂ ಗೌಡ

ಪದವೀಧರರ ಸಮಸ್ಯೆಗೆ ಸ್ಪಂದಿಸಲು ಸದಾ ಸಿದ್ಧ – ಚಿದಾನಂದ ಎಂ ಗೌಡ

 

 

ತುಮಕೂರು ನಗರದ ಖಾಸಗಿ ಹೋಟೆಲ್ ನಲ್ಲಿ ಹಮ್ಮಿಕೊಂಡಿದ್ದ ವೈ ಎ ಎನ್ ಅಭಿಮಾನಿ ಬಳಗ ದಿಂದ ಪದೋನ್ನತಿ ಹಾಗೂ ನಿವೃತ್ತಿ ಪಡೆದ ಬಳಗದ ಸದಸ್ಯರಿಗೆ ಸನ್ಮಾನ ಸಮಾರಂಭ ನಡೆಯಿತು.

 

ಇನ್ನು ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಶಾಸಕರಾದ ಚಿದಾನಂದ ಗೌಡ ರವರು ಮಾತನಾಡಿ. ಚುನಾವಣೆಯಲ್ಲಿ ಸಹಕರಿಸಿದ ಎಲ್ಲಾ ಸದಸ್ಯರಿಗೆ ಅಭಿನಂದನೆಗಳನ್ನು ತಿಳಿಸಿದರು ಹಾಗೂ ಪದವೀಧರ ಯುವಕ-ಯುವತಿಯರಿಗೆ ಯುಪಿಎಸ್ಸಿ ಹಾಗೂ ಕೆಪಿಎಸ್ಸಿ ಕೋಚಿಂಗ್ ಸೆಂಟರ್ ನಿರ್ಮಾಣ ಮಾಡಲು ಸಂಬಂಧಪಟ್ಟವರ ಜೊತೆ ಮಾತನಾಡಿ ಜಿಲ್ಲೆಗೊಂದರಂತೆ ಪದವೀಧರರ ಸ್ಪರ್ಧಾ ಭವನ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಸ್ಪರ್ಧಾ ಭವನದ ಮೂಲಕ ಪದವಿ ಮುಗಿಸಿರುವ ಯುವಕರಿಗೆ ಉಚಿತವಾಗಿ ಕೋಚಿಂಗ್ ನೀಡುವ ಉದ್ದೇಶವಿದ್ದು. ನಮ್ಮ ರಾಜ್ಯದ ವಿದ್ಯಾರ್ಥಿಗಳು ಬೇರೆ ರಾಜ್ಯಕ್ಕೆ ಹೋಗಿ ಕೋಚಿಂಗ್ ಪಡೆಯುವುದನ್ನು ತಪ್ಪಿಸಬೇಕಾಗಿದೆ ಎಂದರು. ತಾವು ಐದು ಜಿಲ್ಲೆಗಳ ಪ್ರತಿನಿಧಿಯಾಗಿದ್ದು ಮುಂದಿನ ದಿನಗಳಲ್ಲಿ ಎಲ್ಲರ ಸಮಸ್ಯೆಗೆ ಸ್ಪಂದಿಸುತ್ತೇನೆ. ಶಾಲಾ-ಕಾಲೇಜುಗಳಿಗೆ ಸಂಬಂಧಿಸಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು, ರಾಜ್ಯ ಮತ್ತು ಕೇಂದ್ರ ಸರ್ಕಾರ ತಂದಿರುವ ನ್ಯಾಷನಲ್ ಎಜುಕೇಶನ್ ಪಾಲಿಸಿ ಗೆ ಸಂಬಂಧಪಟ್ಟಂತೆ ಎಲ್ಲರ ಸಹಕಾರ ಅತ್ಯಗತ್ಯ ,ಅನುದಾನ ಹಾಗೂ ಅನುದಾನ ರಹಿತ ಶಾಲಾ ಶಿಕ್ಷಕರ ಸಮಸ್ಯೆಗಳು, ವೇತನ ಮಂಜೂರು ಮಾಡುವುದು ಶಿಕ್ಷಕರ ಬಡ್ತಿ ಗೆ ಸಂಬಂಧಿಸಿದಂತೆ ,ಅನುದಾನಿತ ಶಾಲೆಗಳಿಗೆ ವೇತನ ಹಾಗೂ ವರ್ಗಾವಣೆಗೆ ಸ್ಪಂದಿಸುತ್ತೇನೆ ಎಂದು ಕಾರ್ಯಕ್ರಮದಲ್ಲಿ ತಿಳಿಸಿದರು.

 

 

ಕಾರ್ಯಕ್ರಮದಲ್ಲಿ ಮಾತನಾಡಿದ ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್ ರವರು ಗೌಡರವರು ಉತ್ಸಾಹಿ ಯುವಕರಿದ್ದು ಶಿಕ್ಷಣ ತಜ್ಞರಾಗಿದ್ದು ಶಿಕ್ಷಣ ಕ್ಷೇತ್ರದಲ್ಲಿ ಸಮಸ್ಯೆಗಳು ಅಗಾಧವಾಗಿತ್ತು ಅವುಗಳನ್ನು ನಿಭಾಯಿಸುವ ಶಕ್ತಿ ಚಿದಾನಂದ ಗೌಡರಿಗೆ ಇದೆ ಎಂದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ನ್ಯಾಷನಲ್ ಎಜುಕೇಶನ್ ಪಾಲಿಸಿ ಜಾರಿಮಾಡಲು ಎಲ್ಲರ ಸಹಕಾರ ಅಗತ್ಯವಾಗಿದೆ ಅದಕ್ಕಾಗಿ ಎಲ್ಲರೂ ಸಹಕಾರ ನೀಡಬೇಕು ಎಂದರು. ಕಾರ್ಯಕ್ರಮದಲ್ಲಿ ಪದೋನ್ನತಿ ಪಡೆದ ಹಾಗೂ ವರ್ಗಾವಣೆಗೊಂಡ ಬಳಗದ ಸದಸ್ಯರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿತ್ತು.

 

ಕಾರ್ಯಕ್ರಮದಲ್ಲಿ ಪರಿಷತ್ ಶಾಸಕರಾದ ವೈ ಎ ನಾರಾಯಣಸ್ವಾಮಿ , ರೇವಣಸಿದ್ದಪ್ಪ ಹಾಗೂ ಬಳಗದ ಸದಸ್ಯರು ಸೇರಿದಂತೆ ಇತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version