ಮಕ್ಕಳಿಗೆ ಅಕ್ಟೋಬರ್‍ನಲ್ಲಿ ಕೋವ್ಯಾಕ್ಸ್ ಲಸಿಕೆ; ಸೆರಂ ಇನ್ಸ್ಟಿಟ್ಯೂಟ್
ನವದೆಹಲಿ: ಕೊರೋನಾ ಸೋಂಕಿನ ವಿರುದ್ಧ ಮಕ್ಕಳಿಗೆ ನೀಡಲು ಕೋವ್ಯಾಕ್ಸ್ ಲಸಿಕೆಯನ್ನು ಸೆರಂ ಇನ್ಸ್ಟಿಟ್ಯೂಟ್ ಅಭಿವೃದ್ಧಿ ಮಾಡಿದ್ದು, ಈ ಲಸಿಕೆ ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆಯಾಗಲಿದೆ ಎಂದು ಸಂಸ್ಥೆ ತಿಳಿಸಿದೆ.
ಈ ಬಗ್ಗೆ ಸಂಸ್ಥೆಯ ಸಿಇಒ ಅಸಾರ್ ಪೂನಾವಾಲಾ ಮಾತನಾಡಿದ್ದು, 2022 ರ ವೇಳೆಗೆ ಮಕ್ಕಳಿಗೂ ಲಸಿಕೆ ಲಭ್ಯವಾಗಲಿದೆ ಎಂದು ಹೇಳಿದ್ದಾರೆ. ಹಾಗೆಯೇ ದೇಶದ ಲಸಿಕೆ ಬೇಡಿಕೆಯನ್ನು ಈಡೇರಿಸಲು ಸಂಸ್ಥೆ ಕೋವಿಶೀಲ್ಡ್ ಉತ್ಪಾದನೆ ಹೆಚ್ಚಳಕ್ಕೆ ಪೂರಕವಾಗಿ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಸಂಸ್ಥೆಗೆ ನಿರಂತರ ಬೆಂಬಲ ನೀಡುತ್ತಿರುವ ಕೇಂದ್ರ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ.
ದೇಶದಲ್ಲಿ ಮುಂದಿನ ವರ್ಷದ ಮೊದಲ ಮೂರು ತಿಂಗಳಲ್ಲಿ ಮಕ್ಕಳಿಗೆ ಕೊರೋನಾ ಲಸಿಕೆ ನೀಡಲು ಸಂಸ್ಥೆ ತಯಾರಿ ನಡೆಸುತ್ತಿದೆ. ದೇಶದ 10 ಸ್ಥಳಗಳಲ್ಲಿ 920 ಮಕ್ಕಳ ಮೇಲೆ ಈ ಲಸಿಕೆಯ ಪ್ರಯೋಗ ನಡೆಯಲಿದೆ. 12-17 ವರ್ಷಗಳ, 2-11 ವರ್ಷದ ಮಕ್ಕಳ ಮೇಲೆ ಈ ಪ್ರಯೋಗ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ. ಡಿಸಿಜಿಐ ಅನುಮತಿಯ ಬಳಿಕ ಅಕ್ಟೋಬರ್ ತಿಂಗಳಲ್ಲಿ ಈ ಲಸಿಕೆಯನ್ನು ಮಕ್ಕಳಿಗೆ ನೀಡಲಾಗುತ್ತದೆ ಎಂದು ಪೂನಾವಾಲಾ ಹೇಳಿದ್ದಾರೆ.