ವೀರಶೈವ ಬ್ಯಾಂಕಿನ ನೂತನ ಕಟ್ಟಡ ಉದ್ಘಾಟನೆ

 

 

ಇಂದಿನ ದಿನಗಳಲ್ಲಿ ಸಮುದಾಯದ ಏಳಿಗೆಗೆ ಸಹಕಾರಿ ಬ್ಯಾಂಕುಗಳ ಕೊಡುಗೆ ಅತ್ಯಗತ್ಯವಾಗಿದ್ದು ಸಮಾಜ ಹಾಗೂ ಬ್ಯಾಂಕುಗಳು ಸಮುದಾಯದ ಎರಡು ಕಣ್ಣುಗಳು ಇದ್ದಂತೆ ಅವುಗಳನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡಿದ್ದೆ ಆದಲ್ಲಿ ಉತ್ತಮ ಪ್ರಗತಿ ಸಾಧಿಸಲು ಸಾಧ್ಯ ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀಗಳು ತಿಳಿಸಿದರು.

 

 

ತುಮಕೂರಿನ ಜೆ .ಸಿ .ರಸ್ತೆಯಲ್ಲಿ ಇರುವ ತುಮಕೂರು ವೀರಶೈವ ಸಹಕಾರ ಬ್ಯಾಂಕ್ ನ ನವೀಕೃತ ಶಾಖೆಯ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಶ್ರೀಗಳು ಗ್ರಾಹಕರ ನಂಬಿಕೆ ಗಳಿಸುವಲ್ಲಿ ವೀರಶೈವ ಸಹಕಾರ ಬ್ಯಾಂಕ್ ಕಾರ್ಯ ಚಟುವಟಿಕೆಗಳು ಯಶಸ್ವಿಯಾಗಿರುವುದೇ ಇಂದು ಬ್ಯಾಂಕ್ ಉತ್ತಮ ರೀತಿಯಲ್ಲಿ ಪ್ರಗತಿ ಸಾಧಿಸಲು ಸಾಧ್ಯವಾಗಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಉನ್ನತ ಮಟ್ಟಕ್ಕೆ ತಲುಪಬೇಕು ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಬ್ಯಾಂಕಿನ ಅಧ್ಯಕ್ಷರಾದ ಕೆ ಜೆ ರುದ್ರಪ್ಪನವರು 1978 ರಲ್ಲಿ ಉದ್ಘಾಟನೆಯಾದ ಸೊಸೈಟಿ ಇಂದು ಬ್ಯಾಂಕ್ ಆಗಿ ಇಂದು ಉತ್ತಮ ಪ್ರಗತಿ ಸಾಧಿಸಿದ್ದು ಗ್ರಾಹಕರಿಗೆ ಅತ್ಯಗತ್ಯವಾಗಿರುವ ಅರ್ ಟಿ ಜಿ ಎಸ್, NEFT , ಸೇರಿದಂತೆ ಹಲವು ಸೌಲಭ್ಯಗಳು ಗ್ರಾಹಕರಿಗೆ ಲಭ್ಯವಾಗುತ್ತಿದ್ದು ಉತ್ತಮ ಸೇವೆ ಸಲ್ಲಿಸುವ ಮೂಲಕ ಬ್ಯಾಂಕ್ ನನ್ನ ಮತ್ತಷ್ಟು ಮೇಲ್ದರ್ಜೆಗೇರಿಸುವ ಹಲವು ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ಗ್ರಾಹಕರ ನಂಬಿಕೆ ಇಂದು ಬ್ಯಾಂಕಿನ ಪ್ರಗತಿಗೆ ಸಹಕಾರಿಯಾಗಿದೆ , ಸುಮಾರು 10500ಕ್ಕೂ ಹೆಚ್ಚು ಗ್ರಾಹಕರನ್ನು ಹೊಂದಿದ್ದು ಬ್ಯಾಂಕಿನ ಸದಸ್ಯರಿಗೆ ಹಲವು ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದರು.

 

ಬ್ಯಾಂಕ್ ಉತ್ತಮ ರೀತಿಯಲ್ಲಿ ಬೆಳೆಯಲು ಗ್ರಾಹಕರು, ಬ್ಯಾಂಕ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಮಂಡಳಿಯ ಸದಸ್ಯರು ಶ್ರಮದಿಂದ ಬ್ಯಾಂಕ್ ಉತ್ತಮ ಪ್ರಗತಿ ಸಾಧಿಸಿದ್ದು ಇದೇ ಸಮಯದಲ್ಲಿ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದರು.

 

ಇದೇ ಸಂದರ್ಭದಲ್ಲಿ ಮಾಜಿ ಸಚಿವರಾದ ಸೊಗಡು ಶಿವಣ್ಣ, ತುಮಕೂರು ನಗರ ಶಾಸಕರಾದ ಜ್ಯೋತಿ ಗಣೇಶ್, ಬ್ಯಾಂಕ್ ನ ಅಧ್ಯಕ್ಷರಾದ ಕೆ ಜೆ ರುದ್ರಪ್ಪ, ಉಪಾಧ್ಯಕ್ಷರಾದ ಮಲ್ಲಿಕಾರ್ಜುನಯ್ಯ, ವೀರಶೈವ ಸಮಾಜದ ಅಧ್ಯಕ್ಷರಾದ ಟಿ ಬಿ ಶೇಖರ್, ಬ್ಯಾಂಕ್ ನ ನಿರ್ದೇಶಕ ಮಂಡಳಿ ಸದಸ್ಯರು, ಬ್ಯಾಂಕಿನ ಕಾರ್ಯಕಾರಣಿ ಮಂಡಳಿ ಸದಸ್ಯರು, ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಿಂಗರಾಜು ಎಚ್ ಎಸ್ , ಬ್ಯಾಂಕಿನ ಗ್ರಾಹಕರು ಸಮುದಾಯದ ಮುಖಂಡರು ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version