ನಾವು ಕತ್ತಿ ಹಿಡಿದರೆ ಮುಸ್ಲಿಮರಿಗೆ ಶವ ಹೂಳಲು ಜಾಗವಿರದು _ವಿವಾದಾತ್ಮಕ ಹೇಳಿಕೆ ನೀಡಿದ ವಿಶ್ವಹಿಂದೂ ಪರಿಷತ್ ಮುಖಂಡ.
ನಾವು ಕತ್ತಿ ಹಿಡಿದರೆ ಮುಸ್ಲಿಮರಿಗೆ ಶವ ಹೂಳಲು ಜಾಗವಿರದು ಎಂದು ವಿಶ್ವಹಿಂದೂ ಪರಿಷತ್ ನಾಯಕ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.
ತುಮಕೂರಿನಲ್ಲಿ ಕಳೆದ ಎರಡು ದಿನಗಳ ಹಿಂದೆ ಬಜರಂಗದಳದ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಖಂಡಿಸಿ ಶುಕ್ರವಾರ ತುಮಕೂರು ನಗರ ಬಂದ್ ಗೆ ಕರೆ ನೀಡಿದ್ದು ಇದರ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ರಾಜ್ಯ ಸಂಚಾಲಕ ಬಸವರಾಜ್ ಮಾತನಾಡುತ್ತಾ ಹಿಂದೂಗಳ ಮೇಲೆ ನಡೆಯುವ ಹಲ್ಲೆಗೆ ನಾವು ಪ್ರತಿಕ್ರಿಯೆ ಕೊಡಲು ಕತ್ತಿ ಹಿಡಿದರೆ ಮುಸ್ಲಿಮರಿಗೆ ಶವ ಹೂಳಲು ಜಾಗ ಇರುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಹಿಂದೂಗಳ ಮೇಲೆ ಹಲ್ಲೆ ,ಗುಂಡಾಗಿರಿ ,ಗೋಹತ್ಯೆ ,ಲವ್ ಜಿಹಾದ್ ನಡೆಸಿದರೆ ಸುಮ್ಮನೆ ಬಿಡುವುದಿಲ್ಲ ನಾವು ಬಹುಸಂಖ್ಯಾತರು ನಮ್ಮೊಂದಿಗೆ ಬದುಕಬೇಕಾದರೆ ಸರಿಯಾಗಿ ಇರಬೇಕು ನಾವು ಹೇಳಿದಂತೆ ಕೇಳಬೇಕು ಇನ್ನು ಮುಂದೆ ನಿಮ್ಮ ಆಟ ನಡೆಯುವುದಿಲ್ಲ ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಎಚ್ಚರಿಕೆಯನ್ನು ರವಾನಿಸಿದ್ದಾರೆ.
ಹಿಂದೂ ಹೆಣ್ಣು ಮಕ್ಕಳ ಮೇಲೆ ಕಣ್ಣು ಹಾಕಿದರೆ ನಿಮಗೆ ಉಳಿಗಾಲವಿಲ್ಲ ಕಣ್ಣೆತ್ತಿ ನೋಡಿದರೆ ಸುಮ್ಮನೆ ಬಿಡುವುದಿಲ್ಲ ನಿಮ್ಮ ಹೆಣ್ಣುಮಕ್ಕಳು ಉಳಿಯುವುದಿಲ್ಲ ಈ ವೇದಿಕೆಯಿಂದಲೆ ಎಚ್ಚರಿಕೆ ನೀಡುತ್ತಿದ್ದೇವೆ ಎಂದು ವಿಶ್ವಹಿಂದೂ ಪರಿಷತ್ ನಾಯಕ ಬಸವರಾಜ್ ಕಟ್ಟು ನುಡಿಗಳಲ್ಲಿ ಹಲ್ಲೆ ಘಟನೆಯನ್ನು ಖಂಡಿಸಿದ್ದಾರೆ.