ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದ ತುಮಕೂರು ಮಹಾನಗರ ಪಾಲಿಕೆಯ ನೀರು ಸರಬರಾಜು ಸಿಬ್ಬಂದಿಗಳು.
ತುಮಕೂರು_ಕಳೆದ 2 ದಿನದಿಂದ ತುಮಕೂರು ಮಹಾನಗರ ಪಾಲಿಕೆಯ 35 ವಾರ್ಡ್ ಗಳ ನೀರು ಸರಬರಾಜು ಸಿಬ್ಬಂದಿಗಳು ನಡೆಸುತ್ತಿದ್ದ ಮುಷ್ಕರವನ್ನು ಸಿಬ್ಬಂದಿಗಳು ತಾತ್ಕಾಲಿಕವಾಗಿ ಹಿಂತೆಗೆದುಕೊಂಡಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ತುಮಕೂರು ಮಹಾನಗರ ಪಾಲಿಕೆಯ ನೀರು ಸರಬರಾಜು ಸಿಬ್ಬಂದಿಗಳು ಅನಿರ್ದಿಷ್ಟಾವಧಿ ಮುಷ್ಕರವನ್ನು ಕೈಗೊಂಡಿದ್ದರು .
ಇದರ ಸೂಕ್ಷ್ಮತೆಯನ್ನು ಅರಿತ ಪಾಲಿಕೆ ಅಧಿಕಾರಿಗಳು, ಜನಪ್ರತಿನಿಧಿಗಳು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಹಾಗೂ ಪಾಲಿಕೆಯ ಕೌನ್ಸಿಲ್ ಸಭೆಯ ಮೂಲಕ ಕ್ರಮ ತೆಗೆದುಕೊಳ್ಳುವ ಮೂಲಕ ಹಂತಹಂತವಾಗಿ ಪಾಲಿಕೆಯ ನೀರು ಸರಬರಾಜು ಸಿಬ್ಬಂದಿಗಳ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದು.
ಇದಕ್ಕೆ ಬೆಂಬಲವನ್ನು ವ್ಯಕ್ತಪಡಿಸಿದ ಸಿಬ್ಬಂದಿಗಳು ಕೆಲ ಷರತ್ತುಗಳೊಂದಿಗೆ ಕಳೆದ ಎರಡು ದಿನಗಳಿಂದ ನಡೆಸುತ್ತಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ತುಮಕೂರು ಮಹಾನಗರ ಪಾಲಿಕೆ ನೀರು ಸರಬರಾಜು ಸಂಘದ ಅಧ್ಯಕ್ಷ ಕುಮಾರ್ ಮಾಹಿತಿ ನೀಡಿದ್ದು ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆ ಇರುವುದಾಗಿ ಮಾಹಿತಿ ನೀಡಿದ್ದಾರೆ.
ಅಧಿಕಾರಿಗಳ ಸಭೆ ಯಶಸ್ವಿ
ಪಾಲಿಕೆ ಆಯುಕ್ತ ರಾದ ರೇಣುಕಾ, ತುಮಕೂರು ಮಹಾನಗರ ಪಾಲಿಕೆ ಮೇಯರ್ ಕೃಷ್ಣಪ್ಪ, ವಿರೋಧ ಪಕ್ಷದ ನಾಯಕ ಕುಮಾರ್, ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರು ಹಾಗೂ ಕಾರ್ಪೊರೇಟರ್ ಗಳ ನೇತೃತ್ವದಲ್ಲಿ ಗುರುವಾರ ಸಂಜೆ ತುರ್ತಾಗಿ ಕೌನ್ಸಿಲ್ ಸಭೆ ನಡೆಸಿ ಪಾಲಿಕೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ನೀರು ಸರಬರಾಜು ಸಿಬ್ಬಂದಿಗಳಿಗೆ ನೇರ ಪಾವತಿಯಾಡಿ ಪಾಲಿಕೆ ಸಿಬ್ಬಂದಿಗಳಿಗೆ ವೇತನ ನೀಡಲು ಹಾಗೂ ಸಮಾನತೆ ಕೆಲಸಕ್ಕೆ ಸಮಾನ ವೇತನಕ್ಕೆ ಸಂಬಂಧಿಸಿದಂತೆ ಸರ್ಕಾರದ ಅನುಮತಿಗಾಗಿ ಪ್ರಸ್ತಾವನೆ ಸಲ್ಲಿಸಲು ಸರ್ವಾನುಮತದಿಂದ ಸಭೆಯಲ್ಲಿ ತೀರ್ಮಾನಿಸಲಾಯಿತು ನಂತರ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು ಬಗ್ಗೆ ಪ್ರತಿಭಟನಾ ನಿರತರೊಂದಿಗೆ ಮಾಹಿತಿ ನೀಡಿ ಮನವೊಲಿಸುವಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಯಶಸ್ವಿಯಾಗಿದ್ದಾರೆ .
ಇದಕ್ಕೆ ಸಂಬಂಧಿಸಿದಂತೆ ಧರಣಿ ನಡೆಸುತ್ತಿದ್ದ ಸಿಬ್ಬಂದಿಗಳು ಸಮ್ಮತಿ ಸೂಚಿಸಿದ್ದು ನಡೆಸುತ್ತಿದ್ದ ಧರಣಿಯನ್ನು ಸಿಬ್ಬಂದಿಗಳು ಪಡೆದಿದ್ದಾರೆ.
ಇನ್ನು ಇದೆ ಸಂದರ್ಭದಲ್ಲಿ ಪಾಲಿಕೆಯ ಆಯುಕ್ತರಾದ ರೇಣುಕಾ ,ಮೇಯರ್ ಕೃಷ್ಣಪ್ಪ, ಕಾರ್ಮಿಕ ಇಲಾಖೆಯ ಅಧಿಕಾರಿ ರಮೇಶ್, ವಿರೋಧ ಪಕ್ಷದ ನಾಯಕ ಕುಮಾರ್, ವಿವಿಧ ಸ್ಥಾಯಿ ಸಮಿತಿಯ ಅಧ್ಯಕ್ಷರುಗಳು ಹಾಗೂ ನೀರು ಸರಬರಾಜು ಸಿಬ್ಬಂದಿಗಳ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಜರಿದ್ದರು.
ವರದಿ _ಮಾರುತಿ ಪ್ರಸಾದ್ ತುಮಕೂರು