ಇನ್ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ : ರಾಜಕೀಯ ನಿವೃತ್ತಿ ಘೋಷಿಸಿದ ಜಿ.ಎಸ್.ಬಿ

ಇನ್ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ : ರಾಜಕೀಯ ನಿವೃತ್ತಿ ಘೋಷಿಸಿದ ಜಿ.ಎಸ್.ಬಿ

ತಿಪಟೂರಿನಲ್ಲಿ ನಡೆಯುತ್ತಿರುವ ಶ್ರೀ ಗುರುಸಿದ್ಧರಾಮೇಶ್ವರರ 850ನೇ ಜಯಂತಿ ಉತ್ಸವದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸದ ಜಿ.ಎಸ್.ಬಸವರಾಜುರವರು ತಮ್ಮ ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಿಸಿದರು.

 

 

 

ಇನ್ಮುಂದೆ ಚುನಾವಣೆಗೆ ನಿಲ್ಲುವುದಿಲ್ಲ  ಆದರೆ ನೀರಾವರಿ ಯೋಜನೆಗಳ ಅನುಷ್ಠಾನಗಳ ಸಂದರ್ಭದಲ್ಲಿ ಜೊತೆಯಾಗಿರುವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಅವರ ಮುಂದೆಯೇ ಜಿ.ಎಸ್.ಬಸವರಾಜು ಘೋಷಿಸಿದರು.

 

 

 

ಕಳೆದ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ವಿರುದ್ಧ ಜಿ.ಎಸ್.ಬಸವರಾಜು ಸ್ಪರ್ಧೆ ಮಾಡಿ ಗೆದ್ದಿದ್ದರು. ಆದರೆ ಚುನಾವಣೆಯ ಹೊಸ್ತಿಲಿಲ್ಲೇ ಜಿ.ಎಸ್.ಬಸವರಾಜುರವರು ರಾಜಕೀಯ ನಿವೃತ್ತಿ ಘೋಷಿಸಿರುವುದು ಬಾರೀ ಚರ್ಚೆಗೆ ಗ್ರಾಸವಾಗಿದೆ.

Leave a Reply

Your email address will not be published. Required fields are marked *

You cannot copy content of this page

error: Content is protected !!