ನಾ ನಾಯಕಿ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲಾ ಕಾಂಗ್ರೆಸ್ ಮಹಿಳಾ ಮುಖಂಡರು ಭಾಗಿ.

ನಾ ನಾಯಕಿ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲಾ ಕಾಂಗ್ರೆಸ್ ಮಹಿಳಾ ಮುಖಂಡರು ಭಾಗಿ

 

ತುಮಕೂರು -ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೋಮವಾರ ಆಯೋಜನೆಗೊಂಡಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ರವರ ನೇತೃತ್ವದಲ್ಲಿ ನಡೆಯುತ್ತಿರುವ ನಾ ನಾಯಕಿ ಕಾರ್ಯಕ್ರಮಕ್ಕೆ ತುಮಕೂರು ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಹಿಳಾ ಕಾರ್ಯಕರ್ತರು ಭಾಗಿಯಾದರು.

 

 

ತುಮಕೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಕಾಂಗ್ರೆಸ್ ಮುಖಂಡ ಅತಿಕ್ ಅಹಮದ್ ರವರ ನೇತೃತ್ವದಲ್ಲಿ ಸುಮಾರು 5ಕು ಹೆಚ್ಚು ಬಸ್ ಗಳನ್ನು ವ್ಯವಸ್ಥೆ ಮಾಡಿ ಬೆಂಗಳೂರಿನತ್ತ ಹೊರಟ ಮಹಿಳಾ ಕಾರ್ಯಕರ್ತರನ್ನ ಬಿಳ್ಕೊಟ್ಟರು

 

 

ಇದೇ ಸಂದರ್ಭದಲ್ಲಿ ಮಾತನಾಡಿದ ತುಮಕೂರು ಜಿಲ್ಲಾ ಕಾಂಗ್ರೆಸ್ನ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಅತಿಕ್ ಅಹಮದ್ ಮಾತನಾಡಿ ಮುಂಬರುವ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಮಹಿಳೆಯರ ಶ್ರೇಯೋಭಿವೃದ್ಧಿಗಾಗಿ ವಿಶೇಷ ಕಾರ್ಯಕ್ರಮಗಳೊಂದಿಗೆ ಮಹಿಳೆಯರ ಸಮಸ್ಯೆಗಳು ಹಾಗೂ ಅವಶ್ಯಕ ವಿಷಯಗಳ ಬಗ್ಗೆ ಚರ್ಚೆ ನಾ ನಾಯಕಿ ಕಾರ್ಯಕ್ರಮದಲ್ಲಿ ನಡೆಯಲಿದ್ದು ವಿವಿಧ ರಾಜ್ಯಗಳಿಂದ ಸಾಕಷ್ಟು ಮಹಿಳಾ ಮುಖಂಡರು ಭಾಗಿಯಾಗುತ್ತಿದ್ದು ನಮ್ಮ ರಾಜ್ಯ ಹಾಗೂ ತುಮಕೂರು ಜಿಲ್ಲೆಯಿಂದಲೂ ಸಹ ಸಾಕಷ್ಟು ಮಹಿಳಾ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಈ ಮೂಲಕ ಕಾಂಗ್ರೆಸ್ ಪಕ್ಷವನ್ನ ಮತ್ತಷ್ಟು ಬಾಧ್ರಗೊಳಿಸಲು ಸಹಕಾರಿಯಾಗಲಿದೆ ಎಂದರು.

 

 

 

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮಹಿಳಾ ಮುಖಂಡರಾದ ಸೌಭಾಗ್ಯ, ಸುಜಾತ, ಫರಾನ, ಲಕ್ಷ್ಮಮ್ಮ, ಪರಿಶಿಷ್ಟ ವಿಭಾಗದ ಅಧ್ಯಕ್ಷ ನಿಂಗರಾಜು, ಶಿವಾಜಿ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!