ಸಿದ್ದರಾಮಯ್ಯನವರು ತಾವಾಗಿಯೇ ಜೆಡಿಎಸ್ ಬಿಟ್ಟು ಬರಲಿಲ್ಲ ಜೆಡಿಎಸ್ ಇಂದ ಉಚ್ಚಾಟನೆ ಮಾಡಿದ್ದರಿಂದ ಅವರು ಕಾಂಗ್ರೆಸ್ ಸೇರ್ಪಡೆಯಾದರು ಕಾಂಗ್ರೆಸ್ ಸೇರ್ಪಡೆಯಾದ ಜೆಡಿಎಸ್ ಮುಖಂಡರುಗಳು ಪಾಪದ ಕೊಡ ತುಂಬುವುದಕ್ಕೆ ಅವರು ಯಾವುದೇ ಪಾಪ ಮಾಡಿಲ್ಲ ಶಾಸಕ ಡಾಕ್ಟರ್ ಯತೀಂದ್ರ ಸಿದ್ದರಾಮಯ್ಯ.
ಜೆಡಿಎಸ್ ಪಕ್ಷ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾದ ಸಿದ್ದರಾಮಯ್ಯ ಸೇರಿದಂತೆ ಅವರ ಸಹಪಾಠಿಗಳು ಕಾಂಗ್ರೆಸ್ ಸೇರ್ಪಡೆಯಾದ ಮುಖಂಡರುಗಳ ಪಾಪದ ಕೊಡ ತುಂಬುವುದಕ್ಕೆ ಅವರು ಯಾವುದೇ ಪಾಪ ಮಾಡಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿಯವರು ನೆನ್ನೆ ಪತ್ರಿಕೆ ಹೇಳಿಕೆಯಲ್ಲಿ ಜೆಡಿಎಸ್ ಪಕ್ಷ ಬಿಟ್ಟು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ವರ ಪಾಪದ ಕೊಡ ತುಂಬುತ್ತಿದೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಸೇರಿದಂತೆ ಇತರ ಮುಖಂಡರುಗಳ ಮೇಲೆ ಆರೋಪ ಮಾಡಿದ ಕುಮಾರಸ್ವಾಮಿಯವರಿಗೆ ವರುಣಾ ಕ್ಷೇತ್ರದ ಶಾಸಕ ಡಾಕ್ಟರ್ ಯತೀಂದ್ರ ಸಿದ್ದರಾಮಯ್ಯನವರು ತಿರುಗೇಟು ನೀಡಿದ್ದಾರೆ.
ಅವರು ಇಂದು ಮೈಸೂರು ತಾಲೂಕು ವರುಣಾ ಕ್ಷೇತ್ರಕ್ಕೆ ಸೇರುವ ಸೋಮೇಶ್ವರಪುರ ಗ್ರಾಮದಲ್ಲಿ ಡಾಕ್ಟರ್ ಬಿಆರ್ ಅಂಬೇಡ್ಕರ್ ಸಮುದಾಯ ಭವನ ಶ್ರೀ ರಾಮಮಂದಿರ ಕಟ್ಟಡ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರ ನೀಡಿ ಮಾತನಾಡಿದ ಶಾಸಕ ಡಾಕ್ಟರ್ ಯತೀಂದ್ರ ಸಿದ್ದರಾಮಯ್ಯನವರು ಜೆಡಿಎಸ್ ಪಕ್ಷವನ್ನು ಸಿದ್ದರಾಮಯ್ಯನವರು ಬಿಟ್ಟು ಬರಲಿಲ್ಲ ಅವರನ್ನು ಜೆಡಿಎಸ್ ಪಕ್ಷದ ಅಧ್ಯಕ್ಷರೇ ಅವರನ್ನು ಉಚ್ಛಾಟನೆ ಮಾಡಿದರು .
ನಂತರ ಸಿದ್ದರಾಮಯ್ಯನವರು ಮತ್ತು ಅವರ ಸಹಪಾಠಿಗಳು ಕಾಂಗ್ರೆಸ್ ಸೇರ್ಪಡೆಯಾದರು ನಂತರ ಕಾಂಗ್ರೆಸ್ಸಿಗೆ ಬಂದಮೇಲೆ ಸಿದ್ದರಾಮಯ್ಯನವರಿಗೆ ಒಳ್ಳೆಯದೇ ಆಯಿತು ಈಗ ಮತ್ತೆ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಲು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಒಗ್ಗಟ್ಟಿನಿಂದ ಶ್ರಮಿಸುತ್ತಿದ್ದೇವೆ ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ಭವಿಷ್ಯ ಇಲ್ಲ ಎಂದು ಪರೋಕ್ಷವಾಗಿ ಜೆಡಿಎಸ್ ಪಕ್ಷದ ನಾಯಕರನ್ನು ಕುಟುಕಿದರು .
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಭಾಗ್ಯಮ್ಮ ಕಾಂಗ್ರೆಸ್ ಮುಖಂಡರುಗಳಾದ ವರುಣ ಮಹೇಶ ಶಿವರಾಮು ಮಹದೇವು ರಾಯನಹುಂಡಿ ರವಿ ಪಿಡಿಒ ಮಾದಪ್ಪ ನಿರ್ಮಿತಿ ಕೇಂದ್ರದ ಸಿದ್ದಪ್ಪಾಜಿ ಗ್ರಾಮ ಪಂಚಾಯಿತಿ ಸದಸ್ಯರುಗಳು ದಲಿತ ಮುಖಂಡರುಗಳು ಗ್ರಾಮದ ಮುಖಂಡರಾದ ಬಾಲ ನಾಯಕ ಡಾಕ್ಟರ್ ಬಿಆರ್ ಅಂಬೇಡ್ಕರ್ ಯುವಕರ ಸಂಘದ ಮುಖಂಡರುಗಳು ಹಾಜರಿದ್ದರು.