ಅಗತ್ಯವಸ್ತುಗಳ ಬೆಲೆ ಏರಿಕೆ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ.
ತುಮಕೂರು_ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆಡಳಿತದಲ್ಲಿ ಜನಸಾಮಾನ್ಯರ ಬದುಕು ಅಗತ್ಯವಸ್ತುಗಳ ಬೆಲೆ ಏರಿಕೆಗಳ ನಡುವೆ ಬೀದಿಗೆ ಬೀಳುವಂತಾಗಿದೆ ಎಂದು ತುಮಕೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿ ಹುಲಿಕುಂಟೆ ಮಠರವರು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಶುಕ್ರವಾರ ತುಮಕೂರಿನಲ್ಲಿ ಯುವ ಕಾಂಗ್ರೆಸ್ ವತಿಯಿಂದ ಅಗತ್ಯವಸ್ತುಗಳ ಬೆಲೆ ಏರಿಕೆ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ನೀಡುವ ಮೂಲಕ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು.
ಇನ್ನು ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ದೇಶದಲ್ಲಿ ಇಂದು ಇಂಧನ ಬೆಲೆ, ಗ್ಯಾಸ್ ಹಾಗೂ ದಿನ ಬಳಕೆಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದು ಜನಸಾಮಾನ್ಯರ ಬದುಕು ತೀರಾ ಕಷ್ಟದಲ್ಲಿದೆ ಆದರೂ ಸಹ ಇದನ್ನು ಅರಿಯದ ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಡಿವಾಣ ಹಾಕುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇನ್ನು ದೇಶದಲ್ಲಿ ಕಳೆದ ಏಳು ವರ್ಷಗಳಿಂದ ಬಿಜೆಪಿ ನೇತೃತ್ವದ ಸರ್ಕಾರ ಆಡಳಿತ ನಡೆಸುತ್ತಿದೆ ರಾಜ್ಯದಲ್ಲೂ ಸಹ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದ್ದು ನೆಪ ಮಾತ್ರಕ್ಕೆ ತಾವು ರೈತರ ಪರ ಎಂದು ಬಿಂಬಿಸಿಕೊಳ್ಳುತ್ತ ಸರ್ಕಾರ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುವಲ್ಲಿ ಸರ್ಕಾರ ನಿರತವಾಗಿದೆ ಎಂದರು.
ಪಂಚ ರಾಜ್ಯಗಳ ಚುನಾವಣಾ ಫಲಿತಾಂಶಕ್ಕು ಮುಂಚೆ ಬೆಲೆ ಏರಿಕೆ ಮಾಡದ ಸರ್ಕಾರ ಇಂದು ಸತತವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಾ ಜನರ ಬದುಕನ್ನು ಬೀದಿಗೆ ತರುವ ಮೂಲಕ ಜನರ ಬದುಕನ್ನು ಹಾಳು ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ದ್ವಿಚಕ್ರವಾಹನ ಹಾಗೂ ಗ್ಯಾಸ್ ಸಿಲೆಂಡರ್ ಗಳನ್ನು ಕುದುರೆಗಾಡಿಯಲ್ಲಿ ಹೊತ್ತು ತಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಯುವ ಕಾಂಗ್ರೆಸ್ ಪದಾಧಿಕಾರಿಗಳು ಜಮಾಯಿಸಿ ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಮುಖಂಡರಾದ ಅನಿಲ್, ಮೋಹನ್, ರಾಜೇಶ್ ದೊಡ್ಮನೆ ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಹಾಜರಿದ್ದರು.
ವರದಿ _ಮಾರುತಿ ಪ್ರಸಾದ್