ರಸ್ತೆ ಸರಿಪಡಿಸಲು ಆಗ್ರಹಿಸಿ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ.
ತುಮಕೂರು_ತುಮಕೂರು ಜಿಲ್ಲಾ ಯುವ ಕಾಂಗ್ರೆಸ್ ಘಟಕದ ವತಿಯಿಂದ ತುಮಕೂರಿನ ಕ್ಯಾಸಂದ್ರ ವೃತ್ತದಲ್ಲಿ ರಸ್ತೆ ಸರಿಪಡಿಸಲು ಆಗ್ರಹಿಸಿ ಶುಕ್ರವಾರ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.
ಇನ್ನು ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ತುಮಕೂರು ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಶಶಿ ಹುಲಿಕುಂಟೆ ಮಾತನಾಡಿ ರಾಜಧಾನಿ ಬೆಂಗಳೂರಿಗೆ ಹೆಬ್ಬಾಗಿಲಂತೆ ನಿಂತಿರುವ ತುಮಕೂರು ರಾಷ್ಟ್ರೀಯ ಹೆದ್ದಾರಿಯ ಊರ್ಕೆರೆ ಇಂದ ಕ್ಯಾಸಂದ್ರ ಟೋಲ್ ಗೇಟ್ ವರೆಗೂ ರಸ್ತೆ ತೀರಾ ಹದಗೆಟ್ಟಿದ್ದು ಅದನ್ನು ಸರಿಪಡಿಸಲು ಹಲವು ತಿಂಗಳುಗಳಿಂದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಗಮನಹರಿಸುವಂತೆ ಸಾಕಷ್ಟು ಬಾರಿ ಮನವಿ ಮಾಡಿದರೂ ಸಹ ಅದರ ಬಗ್ಗೆ ಗಮನ ಹರಿಸದ ಕಾರಣ ಇಂದು ರಸ್ತೆ ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು .
ಇನ್ನು ರಸ್ತೆ ಸರಿಪಡಿಸದ ಕಾರಣ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ. ಇದರಿಂದ ಸಾಕಷ್ಟು ಪ್ರಾಣಹಾನಿ ಗಳು ಸಹ ಸಂಭವಿಸುತ್ತಿದ್ದು ಕೂಡಲೇ ರಸ್ತೆ ಸರಿಪಡಿಸಬೇಕು ಎಂದು ಆಗ್ರಹಿಸಿದರು.
ಇನ್ನು ರಾಜ್ಯ ಸರ್ಕಾರ ಶೇಕಡ 40ರಷ್ಟು ಕಮಿಷನ್ ಪಡೆಯುವುದರಲ್ಲಿ ತಲ್ಲೀನವಾಗಿದೆ ಆದರೆ ಬೆಂಗಳೂರಿಗೆ ಸಂಪರ್ಕಿಸುವ ಪ್ರಮುಖ ಹೆದ್ದಾರಿಯನ್ನು ಸರಿಪಡಿಸುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ನಂತರ ಬಿಡುಗಡೆಗೊಳಿಸಿದರು
ಇನ್ನು ಪ್ರತಿಭಟನೆಯಲ್ಲಿ ಮುಖಂಡರಾದ ಜಿ.ಎಲ್ ರವಿ, ಮೋಹನ್, ಅನಿಲ್ ಕುಮಾರ್ ಸೇರಿದಂತೆ ಯುವ ಘಟಕದ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಹಾಜರಿದ್ದರು.
ವರದಿ_ ಮಾರುತಿ ಪ್ರಸಾದ್ ತುಮಕೂರು