ಅಂಗನವಾಡಿಯಲ್ಲಿ ಕುಕ್ಕರ್ ಬ್ಲಾಸ್ಟ್, ಬೆಚ್ಚಿಬಿದ್ದ ಮಕ್ಕಳು ಗ್ರಾಮಸ್ಥರು ತಾಲೂಕು ಆಡಳಿತದ ವಿರುದ್ಧ ಆಕ್ರೋಶ.
ತುಮಕೂರು -ಅಂಗನವಾಡಿ ಕೇಂದ್ರದಲ್ಲಿ ಕುಕ್ಕರ್ ಬ್ಲಾಸ್ಟ್ ಆಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಸಿಎಸ್ ಪುರ ಹೋಬಳಿಯ ಸಿ ಎಡವನಹಳ್ಳಿ ಗ್ರಾಮದಲ್ಲಿ ಇಂದು ಮಧ್ಯನ 12 ಗಂಟೆ ವೇಳೆಯಲ್ಲಿ ಅಂಗನವಾಡಿ ಕೇಂದ್ರದಲ್ಲಿ ಕುಕ್ಕರ್ ಬ್ಲಾಸ್ಟ್ ಆಗಿದ್ದು ಕೂದಲೆಳೆಯ ಅಂತರದಲ್ಲಿ 14 ಮಕ್ಕಳು ಯಾವುದೇ ಗಾಯಗಳಾಗದೆ ಸ್ವಲ್ಪದರಲ್ಲೇ ಪಾರಾಗಿದ್ದಾರೆ.
ಇನ್ನು ಇತ್ತೀಚಿಗೆ ಆರಂಭವಾಗಿರುವ ಅಂಗನವಾಡಿ ಕೇಂದ್ರಕ್ಕೆ ಯಾವುದೇ ಸ್ವಂತ ಕಟ್ಟಡ ಇಲ್ಲದ ಕಾರಣ ಗ್ರಾಮದಲ್ಲಿರುವ ಸರ್ಕಾರಿ ಶಾಲೆ, ಆವರಣದಲ್ಲಿರುವ ಅಡುಗೆ ಕೋಣೆಯಲ್ಲಿ ತಾತ್ಕಾಲಿಕವಾಗಿ ಅಂಗನವಾಡಿ ಕೇಂದ್ರ ನಿರ್ವಹಿಸಲಾಗುತ್ತಿದ್ದು ಅಂಗನವಾಡಿ ಕೇಂದ್ರಕ್ಕೆ ಪ್ರತ್ಯೇಕ ಕೊಠಡಿ ಇಲ್ಲದ ಕಾರಣ ಒಂದೇ ಕೊಠಡಿಯಲ್ಲಿ ಅಡುಗೆ ಹಾಗೂ ಮಕ್ಕಳಿಗೆ ಪಾಠ ಪ್ರವಚನ ಮಾಡಲಾಗುತ್ತಿದ್ದು ಇಂದು ನಡೆದ ಘಟನೆಯಿಂದ ಪುಟ್ಟ ಮಕ್ಕಳು ಗಾಬರಿಯಾಗಿದ್ದಾರೆ.
ಇನ್ನು ಒಂದೆರಡು ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದನ್ನು ಹೊರತುಪಡಿಸಿದರೆ ಇನ್ನು ಉಳಿದ ಮಕ್ಕಳು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಇನ್ನು ಕುಕ್ಕರ್ ಬ್ಲಾಸ್ಟ್ ಆಗಿರುವ ಕಾರಣ ಅದರ ಶಬ್ದ ಸುಮಾರು 200 ಮೀಟರ್ ನಷ್ಟು ಕೇಳಿ ಬಂದಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಇನ್ನು ಘಟನೆಯ ಬಗ್ಗೆ ಮಾಹಿತಿ ನೀಡಿರುವ ಗ್ರಾಮಸ್ಥ ಅಂಜನ್ ಮಾತನಾಡಿದ್ದು 2019 ರಿಂದ ನಿರಂತರವಾಗಿ ಅಂಗನವಾಡಿ ಕೇಂದ್ರಕ್ಕೆ ನಿವೇಶನ ಒದಗಿಸಲು ತಾಲೂಕು ಆಡಳಿತ ಸೇರಿದಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು ಸಹ ಇದುವರೆಗೂ ತಾಲೂಕು ಆಡಳಿತ ಅಂಗನವಾಡಿ ಕೇಂದ್ರಕ್ಕೆ ಜಾಗ ನೀಡುವಲ್ಲಿ ಅಸಡ್ಡೆ ತೋರಿರುವ ಕಾರಣವೇ ಇಂದು ಈ ಘಟನೆ ನಡೆಯಲು ಕಾರಣವಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಅದೇನೇ ಇರಲಿ ಎಂದು ನಡೆದಿರುವ ಘಟನೆ ನಿಜಕ್ಕೂ ದುರಾದೃಷ್ಟಕರ ಇನ್ನಾದರೂ ಸಂಬಂಧಪಟ್ಟ ತಾಲೂಕು ಆಡಳಿತ ಎಚ್ಚೆತ್ತು ಅಂಗನವಾಡಿ ಕೇಂದ್ರಕ್ಕೆ ಪ್ರತ್ಯೇಕ ಜಾಗ ಗುರುತಿಸಿ ಕೊಟ್ಟು ಮಕ್ಕಳ ವಿದ್ಯಾಭ್ಯಾಸಕ್ಕೆ ಅನುವು ಮಾಡಿಕೊಡಲಾಗುವುದೇ ಎಂದು ಕಾದು ನೋಡಬೇಕಿದೆ.
ವರದಿ ಮಾರುತಿ ಪ್ರಸಾದ್ ತುಮಕೂರು